ಇ-ಸ್ವತ್ತು ತಂತ್ರಾಂಶ ಇಂದು ಕಾರ್ಯನಿರ್ವಹಿಸುವುದಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Date:

Advertisements

ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವ ಪ್ರಕ್ರಿಯೆ ಮುಂದುವರೆದಿದ್ದು, ಮತ್ತೆ ಒಂದು ದಿನ (ಜು.30) ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಮೂಲಕ ಸಾರ್ವಜನಿಕರ ಸಹಕಾರ ಕೋರಿರುವ ಸಚಿವರು, “ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು 2024ರ ಆಗಸ್ಟ್ 2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು” ಎಂದು ಹೇಳಿದ್ದಾರೆ.

“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅಭಿವೃದ್ದಿಪಡಿಸಲಾಗುತ್ತಿದ್ದು ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ” ಎಂದು ತಿಳಿಸಿರು.

Advertisements

“ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮಠಾಣದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯ ಹಂತದಲ್ಲಿ ದಿಶಾಂಕ್ ಆಫ್ ಮೂಲಕ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ” ಎಂದು ಹೇಳಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X