ರಾಜಸ್ಥಾನ | ಕಟ್ಟಡ ಕುಸಿದು ನಾಲ್ವರು ಕಾರ್ಮಿಕರು ಸಾವು

Date:

Advertisements

ನಿರ್ಮಾಣ ಹಂತದ್ದಲ್ಲಿದ್ದ ಕಟ್ಟಡ ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ರಾಜ್‌ಸಮಂದ್ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ಕಲು ಲಾಲ್, ಶಾಂತಿ ಲಾಲ್, ಭಗವತಿ ಲಾಲ್ ಮತ್ತು ಭನ್ವರ್ ಲಾಲ್ ಎಂದು ಗುರುತಿಸಲಾಗಿದೆ. ಕಟ್ಟಡದ ಮೇಲ್ಛಾವಣಿ ಕುಸಿದಿದ್ದು ನಾಲ್ವರು ಕಾರ್ಮಿಕರು ಮೃತಪಟ್ಟು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ರಾತ್ರಿ ಖಮ್ನೋರ್ ಪ್ರದೇಶದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

Advertisements

ಇದನ್ನು ಓದಿದ್ದೀರಾ? ಸೂರತ್ ಕಟ್ಟಡ ಕುಸಿತ; ಸಾವಿನ ಸಂಖ್ಯೆ ಏಳಕ್ಕೆ ಏರಿಕೆ

ಮೇಲ್ಛಾವಣಿ ಕುಸಿದಾಗ ಹದಿಮೂರು ಕಾರ್ಮಿಕರು ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು. ಆ ಪೈಕಿ ಹತ್ತು ಮಂದಿ ಸಿಲುಕಿದ್ದಾರೆ ಎಂದು ರಾಜಸಮಂದ್ ಜಿಲ್ಲಾಧಿಕಾರಿ ಭನ್ವರ್ ಲಾಲ್ ಮಾಹಿತಿ ನೀಡಿದ್ದಾರೆ.

ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡವರಲ್ಲಿ ಐವರು ಪ್ರಸ್ತುತ ರಾಜ್‌ಸಮಂದ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಓರ್ವ ಕಾರ್ಮಿಕನನ್ನು ಉದಯಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

ಏನಿದು ಅನಿಲ್ ಅಂಬಾನಿ ಬ್ಯಾಂಕ್ ವಂಚನೆ? ಕ್ರಮ ಕೈಗೊಳ್ಳುತ್ತಾರ ಮೋದಿ?

ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಭಾರತದ ಭಾರೀ ಶ್ರೀಮಂತ ಉದ್ಯಮಿ...

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

Download Eedina App Android / iOS

X