ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗೆ ಖರ್ಚು ಮಾಡಲು ಮುಂದಾಗಿರುವುದು ಸರಿಯಲ್ಲ, ಕೂಡಲೇ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಜೇವರ್ಗಿ ತಾಲೂಕು ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ.
ಈ ಸಂಬಂಧ ಜೇವರ್ಗಿ ಪಟ್ಟಣದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆಯಿಂದ ಅಖಂಡೇಶ್ವರ ವೃತ್ತದ ಮಾರ್ಗವಾಗಿ
ಮಿನಿ ವಿಧಾನ ಸೌಧದವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯಪಾಲರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಿದರು.
ʼಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಅನುದಾನ ಸರ್ಕಾರ ಬೇರೆ ಉದ್ದೇಶಕ್ಕಾಗಿ ಬಳಸುವುದು ಖಂಡನೀಯ. ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಹಣ ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಿದರೆ ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳಿಗೆ ದ್ರೋಹ ಮಾಡಿದಂತಾಗುತ್ತದೆ. ಹಿಂದುಳಿದ ಸಮಾಜಗಳ ಅಭಿವೃದ್ಧಿ ಕುಂಠಿತಗೊಳ್ಳುತ್ತದೆʼ ಎಂದರು.
ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ತೆಕ್ಕೆಗೆ ಕಲಬುರಗಿ ಮಹಾನಗರ ಪಾಲಿಕೆ: ಮೇಯರ್, ಉಪ ಮೇಯರ್ ಅವಿರೋಧ ಆಯ್ಕೆ
ಈ ಸಂದರ್ಭದಲ್ಲಿ ದಸಂಸ ತಾಲೂಕು ಸಂಚಾಲಕ ಸಿದ್ರಾಮ ಕಟ್ಟಿ ಸೇರಿದಂತೆ ದಸಂಸ ಪ್ರಮುಖರಾದ ಶ್ರೀಹರ ಕರಕಿಹಳ್ಳಿ,
ಮಹೇಶ ಕೋಕಿಲೆ, ಲಕ್ಷ್ಮಣ ಡೊಳ್ಳೆ, ಪರಮಾನಂದ ಯಲಗೋಡ, ಸಿದ್ದು ಕೆರೂರ, ವಿಶ್ವರಾಧ್ಯ ಗೋಪಾಲಕರ ಇದ್ದರು.