ಶಿರೂರು ಗುಡ್ಡ ಕುಸಿತದ ದುರಂತದಲ್ಲಿ ಮೃತರಾದವರಿಗೆ ತಲಾ 50 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ಖಾಯಂ ಸರ್ಕಾರಿ ಉದ್ಯೋಗ ನೀಡಬೇಕೆಂದು ಭಾರತೀಯ ವಿದ್ಯಾರ್ಥಿ ಫೇಡರೇಷನ್ (ಎಸ್‌ಎಫ್‌ಐ) ಆಗ್ರಹಿಸಿದೆ.
ಈ ಕುರಿತು ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯಸ್ಥರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಎಸ್‌ಎಫ್‌ಐ ಸಂಚಾಲಕ ಗಣೇಶ್ ರಾಠೋಡ್ ಮಾತನಾಡಿ, ʼಶಿರೂರು ಭೂ ಕುಸಿತದಲ್ಲಿ 7 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಪತ್ತೆಯಾದ ಇನ್ನೂ 3 ಜನರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಅಪಘಾತದ ಸ್ಥಳದಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಳಪೆ ಮಟ್ಟದ ಕಾಮಗಾರಿಯಿಂದಾಗಿ ಈ ದುರಂತ ಸಂಭವಿಸಿದೆʼ ಎಂದು ಆರೋಪಿಸಿದರು.
ʼಈ ಘಟನೆಗೆ ತಪ್ಪಿಸ್ಥರಾದ ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನು (ಎನ್‌ಎಚ್‌ಎಐ) ಹೊಣೆಗಾರರನ್ನಾಗಿ ಮಾಡಬೇಕು. ಕೂಡಲೇ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ತಡೆಗಟ್ಟಲು ಸೂಕ್ತ ವೈಜ್ಞಾನಿಕ ಕ್ರಮಗಳನ್ನು ಪ್ರಾರಂಭಿಸಬೇಕುʼ ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ನಮಾಜ್ ವೇಳೆ ಮಸೀದಿಗೆ ಮದ್ಯದ ಬಾಟಲಿ ಎಸೆತ : ಇಬ್ಬರ ಬಂಧನ
ಈ ಸಂದರ್ಭದಲ್ಲಿ ಎಸ್‌ಎಫ್‌ಐ ರಾಜ್ಯ ಪದಾಧಿಕಾರಿಗಳು ಹಾಗೂ ತಾಲೂಕು ಮುಖಂಡರಾದ ಶೇಖಪ್ಪ ಬಳ್ಳಾರಿ, ಓಂಕಾರ, ರೋಹಿತ, ಕಪೀಲ್ ಇದ್ದರು.