ಬಿಜೆಪಿ ಪಾದಯಾತ್ರೆಗೆ ಜೆಡಿಎಸ್‌ ಬೆಂಬಲ ಇಲ್ಲ; ಕಟುವಾಗಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ

Date:

Advertisements

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿವೇಶನ ಹಂಚಿಕೆ ವಿಚಾರವಾಗಿ ನಡೆದಿದೆ ಎನ್ನಲಾದ ಹಗರಣ ವಿರೋಧಿಸಿ, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ ನಡೆಸಲು ಸಿದ್ಧವಾಗಿರುವ ಬಿಜೆಪಿ ನಡೆಗೆ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ನವದೆಹಲಿಯಲ್ಲಿ ಬುಧವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, “ಪಾದಯಾತ್ರೆ ಬಗ್ಗೆ ಬಿಜೆಪಿ ಏಕಪಕ್ಷೀಯವಾಗಿ ತೀರ್ಮಾನ ತೆಗೆದುಕೊಂಡಿದೆ. ಇದಕ್ಕೆ ಜೆಡಿಎಸ್‌ನಿಂದ ಯಾವುದೇ ನೈತಿಕ ಬೆಂಬಲ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಗೆ ಜೆಡಿಎಸ್‌ ಬೆಂಬಲ ನೀಡುತ್ತಿಲ್ಲ. ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜತೆಗೆ ಪಾದಯಾತ್ರೆಯಲ್ಲಿ ನಾವು ಭಾಗಿಯಾಗಬೇಕಾ?” ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Advertisements

ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣ ವಿಚಾರವಾಗಿ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಹರಿಹಾಯ್ದಿರುವ ಅವರು, “ಪ್ರೀತಮ್ ಗೌಡ ಯಾರು. ಹಾಸನದಲ್ಲಿ ಬೀದಿ ಬೀದಿಗಳಲ್ಲಿ ಪೆನ್‌ಡ್ರೈವ್ ಸಿಗಲು ಕಾರಣನಾದ ವ್ಯಕ್ತಿ. ಆತನ ಜತೆಗೆ ನಾನು ವೇದಿಕೆ ಹಂಚಿಕೊಳ್ಳಬೇಕಾ? ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜತೆಗೆ ಪಾದಯಾತ್ರೆಯಲ್ಲಿ ಭಾಗಿಯಾಗಬೇಕಾ? ಎಂದಿದ್ದಾರೆ.

ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ಬೆಂಬಲ ಇಲ್ಲ

“ಪಾದಯಾತ್ರೆ ಬಗ್ಗೆ ಬಿಜೆಪಿಯರೇ ತೀರ್ಮಾನ ತೆಗೆದುಕೊಂಡಿದ್ದಾರೆ. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣ ನಾವು ಬೆಂಬಲ ನೀಡುತ್ತಿಲ್ಲ. ಈ ವಿಚಾರದಿಂದ ನನ್ನ ಮನಸ್ಸಿಗೂ ನೋವಾಗಿದೆ” ಎಂದು ತಿಳಿಸಿದ್ದಾರೆ.

“ಕೇರಳದಲ್ಲಿ ನೂರಾರು ಜನರ ಜೀವ ಹಾನಿಯಾಗಿದೆ. ಕರ್ನಾಟಕದಿಂದ ಹೋದವರು ವಾಪಸ್ ಬರಲು ಸಮಸ್ಯೆ ಎದುರಿಸುತ್ತಿದ್ದಾರೆ. ರಾಜ್ಯದಲ್ಲೂ ಯೆಲ್ಲೋ ಮತ್ತು ರೆಡ್ ಅಲರ್ಟ್ ಘೋಷಣೆ ಆಗಿದೆ. ಹಲವು ಪ್ರದೇಶಗಳು ಜಲಾವೃತವಾಗಿವೆ. ಎಲ್ಲರೂ ಕೃಷಿ ಚಟುವಟಿಕೆಯಲ್ಲಿ ಭಾಗವಹಿಸುವ ಈ ಸಮಯದಲ್ಲಿ ಪಾದಯಾತ್ರೆಯ ಅವಶ್ಯಕತೆಯೇ ಇಲ್ಲ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X