5ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಮೈಸೂರು ನಗರದಲ್ಲಿ ನಡೆದಿದೆ.
ನಗರದ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಕುಶಾಲ್ (11) ಮೃತ ಬಾಲಕ ಎಂದು ತಿಳಿದು ಬಂದಿದೆ.
ಮೃತ ಬಾಲಕನ ತಂದೆ ಪೊಲೀಸ್ ಪೇದೆಯಾಗಿದ್ದಾರೆ. ತಾಯಿ ಬಾಲಕ ಓದುತ್ತಿದ್ದ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಯೋಗ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಂಗಳವಾರ ಮಧ್ಯಾಹ್ನ 2.30 ಸುಮಾರಿಗೆ ಶಾಲೆಯಿಂದ ಮನೆಗೆ ಬಂದ ಬಾಲಕ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾನೆ.
ಹೊರಗಡೆ ಹೋಗಿದ್ದ ತಾಯಿ ಮನೆಗೆ ಬಂದ ಬಳಿಕ ಮಗನನ್ನು ಕಂಡು ಗಾಬರಿಗೊಂಡು ಕುಣಿಕೆಯಿಂದ ಕೆಳಗಿಳಿಸಿ ತಕ್ಷಣ ಆಸ್ಪತ್ರೆಗೆ ಕರೆದುದ್ಯೊಯ್ದರು. ಆದರೆ ಬಾಲಕ ಮೃತಪಟ್ಟಿರುವ ಬಗ್ಗೆ ವೈದ್ಯರು ಖಚಿತ ಪಡಿಸಿದ್ದಾರೆ.
ಈ ಕುರಿತು ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.