ಚಿಕ್ಕಬಳ್ಳಾಪುರ | ಕಾಂಗ್ರೆಸ್‌ ಬಗ್ಗೆ ಮತನಾಡುವ ನೈತಿಕತೆ ಸುಧಾಕರ್‌ಗೆ ಇಲ್ಲ; ಎಂ ಆರ್ ಸೀತರಾಮ್ ಕಿಡಿ

Date:

Advertisements
  • ‘ಮಲ್ಲಿಕಾರ್ಜುನ ಖರ್ಗೆ ಅವರಿಗೆ 50 ವರ್ಷಗಳ ರಾಜಕೀಯ ಅನುಭವವಿದೆ
  • ‘ಡಾ. ಕೆ ಸುಧಾಕರ್ ರಾಜಕಾರಣದಲ್ಲಿ ನೆನ್ನೆ ಮೊನ್ನೆ ಕಣ್ಣು ಬಿಟ್ಟಿದ್ದಾರೆ

ಕಾಂಗ್ರೆಸ್‌ನಿಂದ ಪಕ್ಷದಿಂದ ರಾಜಕೀಯ ಜೀವನ ಆರಂಭಿಸಿ ಎರಡು ಅವಧಿಗೆ ಶಾಸಕರಾಗಿ ಆಯ್ಕೆಯಾಗಿ ನಂತರ ಸ್ವಾರ್ಥಕ್ಕಾಗಿ ಬಿಜೆಪಿಗೆ ಸೇರಿದ ಡಾ. ಕೆ ಸುಧಾಕರ್‌ಗೆ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದು ಮಾಜಿ ಸಚಿವ ಎಂ ಆರ್ ಸೀತರಾಮ್ ಕಿಡಿಕಾರಿದ್ದಾರೆ.

ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, “ಕ್ಷೇತ್ರದಲ್ಲಿ ದುರಂಕಾರದ ಪರಮಾಧಿಕಾರ ಮಿತಿ ಮೀರಿದ್ದು, ರಾಜ್ಯದ ಉದ್ದಗಲಕ್ಕೂ ಭ್ರಷ್ಟಾಚಾರದ ಪರಮಾವಧಿ ಇದೆ” ಎಂದು ಆರೋಪಿಸಿದ್ದಾರೆ.

“ಕ್ಷೇತ್ರದಲ್ಲಿ ಕೇವಲ ಪ್ರಭಾವಿಗಳಿಗೆ ಮಾತ್ರ ಅನುಕೂಲ ಸಿಕ್ಕಿದೆ. ಕಾಲಚಕ್ರ ಬದಲಾಗುತ್ತಿರುತ್ತದೆ, ಚುನಾವಣೆಯ ನಂತರ ಸುಧಾಕರ್ ಎಲ್ಲಿರುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ” ಎಂದಿದ್ದಾರೆ.

Advertisements

“ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್‌ಗೆ ಕ್ಷೇತ್ರದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಸರ್ಕಾರದ ಮೇಲಿನ ಆಕ್ರೋಶವನ್ನು ಜನ ಹೊರ ಹಾಕುತ್ತಿದ್ದಾರೆ. ಇಲ್ಲಿನ ಜಾತಿಗಳನ್ನು ಒಡೆದು ಅಳುವ ಕೆಲಸ ಮೀತಿ ಮಿರಿದೆ. ಜನಪ್ರತಿನಿಧಿ ನಯ-ವಿನಯದಿಂದ ನಡೆದುಕೊಂಡಾಗ ಸಮಾಜದಲ್ಲಿ ಗೌರವ ಸಿಗುತ್ತದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ: ಸಂಸದ ಮನೋಜ್ ತಿವಾರಿ

“ರಾಜಕಾರಣದಲ್ಲಿ ಸುಧಾಕರ್ ನೆನ್ನೆ ಮೊನ್ನೆ ಕಣ್ಣು ಬಿಟ್ಟಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರು 50 ವರ್ಷಗಳಿಂದ ರಾಜಕೀಯದಲ್ಲಿ ಇದ್ದಾರೆ. ಅವರ ಬಗ್ಗೆ ಟೀಕೆ ಮಾಡುವ ನೈತಿಕತೆ ಇಲ್ಲ. ಬಿಜೆಪಿ ಸೇರಿ ಮೂರು ವರ್ಷಗಳು ಕಳೆದಿದೆ. ರಾಜಕಾರಣದಲ್ಲಿ ದೊಡ್ಡ ರಾಜಕಾರಣಿಯೇನಲ್ಲ. ಸಣ್ಣ ಮಟ್ಟದಲ್ಲೇ ದೊಡ್ಡ ಮಟ್ಟದ ರೀತಿ ಮಾತನಾಡಿದರೆ ಏನು ಕಥೆ? ಜನರು ಜನಪ್ರತಿನಿಧಿಯಾಗಿ ಒಪ್ಪಿಕೊಳ್ಳಲು ಸಾಧ್ಯನ, ಹಿರಿಯರ ಬಗ್ಗೆ ಮಾತನಾಡುವಾಗ ಎಚ್ಚರಿಕೆಯಿಂದ ಇರಬೇಕು” ಎಂದು ಸಲಹೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X