ಯತ್ನಾಳ್‌ ಎಲ್ಲಿಂದ ಮಾಹಿತಿ ತಗೊಂಡು ಮಾತಾಡ್ತಾರೆ ಎಂಬುದೇ ವಿಚಿತ್ರ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌

Date:

Advertisements

ಸಿಎಂ ಸಿದ್ದರಾಮಯ್ಯ ವಿರುದ್ಧ ನಮ್ಮವರೇ ಬಿಜೆಪಿ ನಾಯಕರಿಗೆ ದಾಖಲೆ ನೀಡುತ್ತಿದ್ದಾರೆ ಎಂದು ಯತ್ನಾಳ್‌ ಆರೋಪಿಸಿದ್ದಾರೆ. ಅವರು ಎಲ್ಲಿಂದ ಇಂತಹ ವಿಷಯ ಸಂಗ್ರಹಿಸಿ ಮಾತನಾಡುತ್ತಾರೆ ಎಂಬುದೇ ವಿಚಿತ್ರ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಸಲು ಕಾಂಗ್ರೆಸ್‌ನವರೇ ದಾಖಲೆ ಕೊಡುತ್ತಿದ್ದಾರೆ ಎಂದು ಯತ್ನಾಳ್‌ ಆರೋಪಿಸುತ್ತಾರೆ. ಡಿ ಕೆ ಶಿವಕುಮಾರ್‌ ಋಣ ತೀರಿಸಲು ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎನ್ನುತ್ತಾರೆ. ಅವರದ್ದು ಯಾವ ಋಣ ಅಂತ ನನಗೆ ಗೊತ್ತಿಲ್ಲ” ಎಂದು ವ್ಯಂಗ್ಯವಾಗಿ ನುಡಿದರು.

ಬಿಜೆಪಿಯಲ್ಲಿ ಸಿಎಂ ಹುದ್ದೆಗಾಗಿ ಹೈಕಮಾಂಡ್‌ಗೆ ₹2,000 ಕೋಟಿ, ಮಂತ್ರಿಸ್ಥಾನಕ್ಕೆ ₹500 ಕೋಟಿ ನೀಡಬೇಕಿದೆ ಎಂದು ಹಿಂದೆ ಇದೇ ಯತ್ನಾಳ್‌ ಅವರು ಹೇಳಿದ್ದರು. ಈಗ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿಯನ್ನು ಬಿಜೆಪಿಯವರು ಆಯ್ಕೆ ಮಾಡುತ್ತಾರೆ ಎನ್ನುತ್ತಾರೆ. ಅವರು ಮಾತು ಕೇಳಿದರೆ ಸೂರ್ಯ ಪಶ್ಚಿಮ ದಿಕ್ಕಿನಲ್ಲಿ ಹುಟ್ಟುತ್ತಾನೆಯೇನೋ ಎಂಬಂತಿದೆ” ಎಂದು ಲೇವಡಿ ಮಾಡಿದರು.

Advertisements

ಬೆಳಗಾವಿ ವಿಭಜನೆ

“ಜಿಲ್ಲೆ ವಿಭಜನೆಯಾಗದ ಕಾರಣ ಆಡಳಿತಕ್ಕೆ ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿದೆ. ಇದನ್ನು ಎರಡು ಅಥವಾ ಮೂರು ಜಿಲ್ಲೆಗಳಾಗಿ ವಿಭಜಿಸಬೇಕೆಂಬ ಚರ್ಚೆ ಇದೆ‌. ಉನ್ನತಮಟ್ಟದ ಸಭೆಯಲ್ಲೇ ತೀರ್ಮಾನಿಸಲಾಗುವುದು” ಎಂದರು.

ಪ್ರವಾಹ ಕುರಿತು ಸಿಎಂ, ಡಿಸಿಎಂ ಮಾಹಿತಿ

“2019ರಲ್ಲಿ ಬೆಳಗಾವಿ ಜಿಲ್ಲೆ ಶತಮಾನದಲ್ಲೇ ಕಂಡರಿಯದ ಪ್ರವಾಹಕ್ಕೆ ಒಳಗಾಗಿತ್ತು. ಆಗಲೂ ಪ್ರಧಾನಿ ಮೋದಿ ಇಲ್ಲಿಗೆ ಭೇಟಿ ಕೊಟ್ಟಿರಲಿಲ್ಲ. ಸದ್ಯದ ಪ್ರವಾಹಪೀಡಿತ ಸ್ಥಳಗಳ ಬಗ್ಗೆ ಸಿಎಂ, ಡಿಸಿಎಂ ಮಾಹಿತಿ ಪಡೆಯುತ್ತಿದ್ದಾರೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಅಧಿಕಾರಿಗಳಿಂದ ತಪ್ಪು ಮಾಹಿತಿ

“ಜಿಲ್ಲೆಯಲ್ಲಿ ಪ್ರವಾಹದಿಂದ ಆಗಿರುವ ಹಾನಿ ಬಗ್ಗೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ. ನಾನು ಸ್ವತಃ ಖಾನಾಪುರ ತಾಲ್ಲೂಕಿಗೆ ಹೋಗಿ ಪರಿಶೀಲಿಸಿದ್ದೇನೆ. ಅಧಿಕಾರಿಗಳು ಕೊಟ್ಟ ಮಾಹಿತಿಗಿಂತಲೂ ಹೆಚ್ಚಿನ ಮನೆಗಳು ಬಿದ್ದಿವೆ. ಅಧಿಕಾರಿಗಳಿಂದ ಬೇಜವಾಬ್ದಾರಿ ಕೆಲಸ ಆಗಬಾರದು” ಎಂದು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ ಸ್ಥಾನ ಸಿಗುತ್ತೆ ಎಂದರೆ ನಾನು ಕೂಡ ಆರ್‌ಎಸ್‌ಎಸ್‌ ಗೀತೆ ಹಾಡುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ

ಆರ್‌ಎಸ್‌ಎಸ್‌ ಗೀತೆ ಹಾಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತೆ ಎಂದರೆ ನಾನು, ಶಾಸಕ...

ರಾಜ್ಯದಲ್ಲಿರುವ ಶೇ.85ರಷ್ಟು ವಲಸೆ ಕಾರ್ಮಿಕರು ಈ ಆರು ರಾಜ್ಯಗಳಿಗೆ ಸೇರಿದವರು

ಇಡೀ ದೇಶದಲ್ಲೇ ಸುಮಾರು ಒಂದು ಲಕ್ಷ ನೋಂದಾಯಿತ ವಲಸೆ ಕಾರ್ಮಿಕರಿಗೆ ನೆಲೆಯಾಗಿರುವ...

‘ಅವರು RSS ಗೀತೆ ಹಾಡಬಹುದು, ಶಾ ಜೊತೆ ಕೂರಬಹುದು’; ಡಿಕೆಶಿ ವಿರುದ್ಧ ರಾಜಣ್ಣ ವಾಗ್ದಾಳಿ

“ಅವರು (ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್) ಆರ್‌ಎಸ್‌ಎಸ್‌ ಗೀತೆ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ...

ಬಾನು ಮುಷ್ತಾಕ್‌ ದಸರಾ ಉದ್ಘಾಟಿಸುವುದು ಅವರ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧ: ಯತ್ನಾಳ್‌

ನಾನು ವೈಯಕ್ತಿಕವಾಗಿ ಬಾನು ಮುಷ್ತಾಕ್‌ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ....

Download Eedina App Android / iOS

X