“ನಮ್ಮ ಕುಟುಂಬಕ್ಕೆ ವಿಷ ಇಕ್ಕಿದವರ ಜೊತೆ ವೇದಿಕೆ ಹಂಚಿಕೊಳ್ಳುವುದಾ ? ಹಾಸನದ ಬೀದಿ ಬೀದಿಯಲ್ಲಿ ಪೆನ್ ಡ್ರೈವ್ ಸಿಗಲು ಕಾರಣವಾದ ಪ್ರೀತಂಗೌಡ ಭಾಗವಹಿಸುವ ಪಾದಯಾತ್ರೆಯಲ್ಲಿ ನಾನು ಭಾಗಿಯಾಗುವುದಿಲ್ಲ. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಪಾದಯಾತ್ರೆಗೆ ಜೆಡಿಎಸ್‌ನ ನೈತಿಕ ಬೆಂಬಲವೂ ಇಲ್ಲ” ಅಂತ ಹೇಳಿದ್ದಾರೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು. ನಿನ್ನೆ ಮೊನ್ನೆಯವರೆಗೂ ಬಿಜೆಪಿ ನಾಯಕರೊಂದಿಗೆ ಸಿಎಂ ಸಿದ್ದರಾಮಯ್ಯನವರ ವಿರುದ್ಧ ವಾಗ್ದಾಳಿ, ಜಂಟಿ ಪತ್ರಿಕಾಗೋಷ್ಠಿ ನಡೆಸುವಲ್ಲಿ ಕಾಣಿಸಿಕೊಂಡಿದ್ದ ಕುಮಾರಸ್ವಾಮಿ ಇದ್ದಕ್ಕಿದ್ದಂತೆ ಹಿಂದೆ ಸರಿಯಲು ‘ಪ್ರೀತಂ’ ಎಂಬ ಹೆಸರೇ ನಿಜ ಕಾರಣವೇ? ವಿಷವಿಕ್ಕಿದವರು ಅಂತ ಯಾರಿಗೆಲ್ಲ ಕುಮಾರಸ್ವಾಮಿ ಹೇಳುತ್ತಿದ್ದಾರೆ? ಇದು ನಿಜವಾದ ಕಾರಣವಾ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಈ ವಿಡಿಯೋದಲ್ಲಿದೆ.

ಪಾದಯಾತ್ರೆಯಿಂದ ಹಿಂದೆ ಸರಿದಿದ್ದೇಕೆ HDK
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: