ವಯನಾಡು ಭೂಕುಸಿತ: ಮೃತರ ಸಂಖ್ಯೆ 308ಕ್ಕೆ ಏರಿಕೆ

Date:

Advertisements

ಕೇರಳದ ವಯನಾಡು ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭಾರೀ ಭೂಕುಸಿತದಲ್ಲಿ ಮೃತರ ಸಂಖ್ಯೆ ಶುಕ್ರವಾರ(ಆಗಸ್ಟ್ 2) 300 ರ ಗಡಿ ದಾಟಿದೆ. ರಕ್ಷಣಾ ಕಾರ್ಯಾಚರಣೆ ಅಧಿಕಾರಿಗಳು ಭೂಕುಸಿತಗೊಂಡ ಕಟ್ಟಡಗಳಲ್ಲಿ ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಬದುಕುಳಿದವರನ್ನು ಹುಡುಕಲು ನಿರಂತರ ಪ್ರಯತ್ನದಲ್ಲಿದ್ದಾರೆ.

ವಯನಾಡಿನ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಿಂದ ಉಂಟಾದ ಭೂಕುಸಿತದಲ್ಲಿ ಇಲ್ಲಿಯವರೆಗೆ 308 ಜನರು ಸಾವನ್ನಪ್ಪಿದ್ದಾರೆ.

ಪರಿಹಾರ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಕಾರ್ಯಾಚರಣೆಯನ್ನು ಮತ್ತಷ್ಟು ದಿನಕ್ಕೆ ವಿಸ್ತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬದುಕುಳಿದವರನ್ನು ಹುಡುಕಲು ಡ್ರೋನ್ ಆಧಾರಿತ ತಂತ್ರಜ್ಞಾನವನ್ನು ಅಳವಡಿಸಲಾಗಿದೆ.

Advertisements

ಭಾರತೀಯ ಸೇನೆ, ಎನ್‌ಡಿಆರ್‌ಎಫ್, ನೌಕಾಪಡೆ ಮತ್ತು ಭಾರತೀಯ ನೌಕಾಪಡೆಯನ್ನು ಒಳಗೊಂಡ ಜಂಟಿ ತಂಡವು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಶೋಧ ನಡೆಸುತ್ತಿದೆ. ಪ್ರತಿ ತಂಡದಲ್ಲಿ ಮೂವರು ಸ್ಥಳೀಯರು ಹಾಗೂ ಒಬ್ಬರು ಅರಣ್ಯ ಇಲಾಖೆ ನೌಕರ ಇದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಯನಾಡಿಗಾದದ್ದು ನಮ್ಮಲ್ಲೂ ಆಗಬಹುದಲ್ಲವೇ?

ಇಂದಿನ ಕಾರ್ಯಾಚರಣೆಯಲ್ಲಿ ಚಾಲಿಯಾರ್ ನದಿಯ ಸುತ್ತಮುತ್ತಲಿನ ಎಂಟು ಪೊಲೀಸ್ ಠಾಣೆಗಳ ಪೊಲೀಸ್ ಸಿಬ್ಬಂದಿ ಮತ್ತು ಈಜು ಪರಿಣಿತ ಸ್ಥಳೀಯರು ಕೂಡ ಶೋಧ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ. ಹೆಲಿಕಾಪ್ಟರ್ ಬಳಸಿ ಶೋಧ ನಡೆಸಲಾಗುವುದು.

ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ವಯನಾಡಿಗೆ ಆಗಮಿಸಿರುವ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಪರಿಹಾರ ಕಾರ್ಯಗಳಿಗಾಗಿ ಶುಕ್ರವಾರ ಪಕ್ಷದ ಮುಖಂಡರನ್ನು ಭೇಟಿಯಾಗಲಿದ್ದಾರೆ.

ಈ ನಡುವೆ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ವಯನಾಡಿನ ಭೂಕುಸಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಭಾರತ ಹವಾಮಾನ ಇಲಾಖೆ ಮುಂದಿನ ಎರಡು ದಿನಗಳಲ್ಲಿ ವಯನಾಡು ಮತ್ತು ಇತರ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯ ಮುನ್ಸೂಚನೆ ನೀಡಿದೆ. ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರೆಡ್ ಅಲರ್ಟ್ ಘೋಷಿಸಿದೆ 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X