ಬಾಗಲಕೋಟೆ | ಗ್ರಾಮೋದ್ಧಾರ ಎಲ್ಲರ ಗುರಿಯಾಗಿರಲಿ: ಶಾಸಕ ವಿಜಯಾನಂದ ಕಾಶಪ್ಪನವರ್

Date:

Advertisements

ಗ್ರಾಮೋದ್ಧಾರ ಎಲ್ಲರ ಗುರಿಯಾಗಿರಲಿ ಎಂದು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಹುನಗುಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಸಮೀಪದ ಹಾವರಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಭಾರತ ಹಳ್ಳಿಗಳ ದೇಶ, ಹಳ್ಳಿಗಳ ಉದ್ಧಾರವಾಗದೆ ದೇಶದ ಉದ್ದಾರವಾಗದು ಎಂಬ ಗಾಂಧೀಜಿಯವರ ಕನಸನ್ನು ನನಸಾಗಿಸುವಲ್ಲಿ, ಗ್ರಾಮ ಜೀವನವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಶಿಬಿರಗಳು ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಹುನಗುಂದದ ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿದರು.

Advertisements

“ಶಿಬಿರದಲ್ಲಿ ಗಳಿಸಿದ ಅನುಭವವನ್ನು ವಿದ್ಯಾರ್ಥಿಗಳು ಮುಂಬರುವ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ಅವರು ಕರೆಕೊಟ್ಟರು.

ವಿಶೇಷ ಆಹ್ವಾನಿತರಾಗಿ ಹಾಜರಿದ್ದ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವಿಜಯ ಮಹಾಂತೇಶ ಗದ್ದನಕೇರಿ ಮಾತನಾಡಿ, “ಭಾವೈಕ್ಯತೆ, ಭ್ರಾತೃತ್ವ, ಪರಸ್ಪರ ಅವಲಂಬನೆಯಂತಹ ಹಲವಾರು ಗುಣಗಳನ್ನು ಇಂತಹ ಶಿಬಿರಗಳು ಉತ್ತೇಜಿಸುತ್ತವೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬೊಮ್ಮನಕಟ್ಟೆ ವಾರ್ಡ್‌ಗೆ ಆಧುನಿಕ ಚಿತಾಗಾರ ವ್ಯವಸ್ಥೆ ಕಲ್ಪಿಸಿಕೊಡಲು ಮನವಿ

ಸಮಾಜ ಸೇವಕ ಮಹಾಂತೇಶ ಕಾಶಪ್ಪನವರ್ ಹಾಗೂ ಶಿಬಿರಾರ್ಥಿಗಳು ಅನಿಸಿಕೆ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಡಾ ಹೆಚ್ ಎಸ್ ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಮದ ಪ್ರಮುಖರು, ಸಿಡಿಸಿ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X