ಅನಧಿಕೃತ ಬಡಾವಣೆ, ತೋಟ, ಹೋಂ ಸ್ಟೇ, ರೆಸಾರ್ಟ್‌ ತೆರವಿಗೆ ಸಚಿವ ಈಶ್ವರ್‌ ಖಂಡ್ರೆ ಸೂಚನೆ

Date:

Advertisements

ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಹಾಗೂ ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ತೆರವಿಗೆ ಅರಣ್ಯ ಇಲಾಖೆ ಮುಂದಾಗಿದೆ.

ಈ ಕುರಿತು ಕ್ರಮ ಕೈಗೊಳ್ಳಲು ಇಲಾಖೆಯ ಕಾರ್ಯದರ್ಶಿಗೆ ಟಿಪ್ಪಣಿ ಬರೆದಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, “ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಅಮೂಲ್ಯ ಜೀವಗಳು ಬಲಿಯಾಗಿದ್ದರೆ, ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದಾರೆ. 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೆ ಎಚ್ಚರಿಕೆಯ ಗಂಟೆಯಾಗಿವೆ” ಎಂದಿದ್ದಾರೆ.

“ಪಶ್ಚಿಮಘಟ್ಟದಲ್ಲಿ 2015 ರಿಂದೀಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸಲು ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಒಂದು ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸಬೇಕು” ಎಂದು ಸಚಿವರು ಸೂಚಿಸಿದ್ದಾರೆ.

Advertisements
ಈಶ್ವರ್‌ ಖಂಡ್ರೆ 1

“ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ” ಎಂದು ಹೇಳಿದ್ದಾರೆ.

“ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ” ಎಂದು ಸಚಿವರು ಉಲ್ಲೇಖ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X