ರಕ್ತದಲ್ಲಿ ಪತ್ರ ಬರೆದಿದ್ದ ಯುವಕನ ಮನೆಗೆ ಜಗದೀಶ್ ಶೆಟ್ಟರ್ ಭೇಟಿ

Date:

Advertisements

ನೂರಕ್ಕೆ ನೂರರಷ್ಟು ಜಗದೀಶ್ ಶೆಟ್ಟರ್ ಗೆಲುವು ಸಾಧಿಸುತ್ತಾರೆ ಎಂದು ಪತ್ರ ಬರೆದಿದ್ದ ಮಂಜುನಾಥ ಎಂಬ ಯುವಕನ ಮನೆಗೆ ಶೆಟ್ಟರ್ ಭೇಟಿ ನೀಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ವಿಧಾನಸಭಾ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಗೆಲ್ಲುವುದು ಶತಸಿದ್ಧ, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಮಂಜುನಾಥ ಎಂಬಾತ ರಕ್ತದಲ್ಲಿ ಪತ್ರ ಬರೆದಿದ್ದನು.

ಯಡಿಯೂರಪ್ಪ ಅವರು ರಕ್ತದಲ್ಲಿ ಬರೆದುಕೊಡುತ್ತೇನೆ ಜಗದೀಶ್ ಶೆಟ್ಟರ್ ಗೆಲ್ಲುವುದಿಲ್ಲ ಎಂದಿದ್ದರು. ಅವರ ಮಾತಿಗೆ ಪ್ರತಿಯಾಗಿ ರಕ್ತದಲ್ಲಿಯೇ ಪತ್ರ ಬರೆದಿದ್ದ ಅಭಿಮಾನಿ.

Advertisements

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಮಂಜುನಾಥ ಮನೆಗೆ ಜಗದೀಶ್ ಶೆಟ್ಟರ್ ಭೇಟಿ ನೀಡಿ ಅಭಿಮಾನ ತೋರದ್ದಕ್ಕೆ ಸನ್ಮಾನ ಮಾಡಿದರು. ಇದೇ ವೇಳೆ ಮಂಜುನಾಥ ಸಹ ಚುನಾವಣೆಯಲ್ಲಿ ಗೆಲುವಾಗಲಿ ಎಂದು ಜಗದೀಶ್​ ಶೆಟ್ಟರ್ ಅವರಿಗೆ ಶುಭ ಹಾರೈಸಿದರು.​

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯ ತಿಳಿಸಿರುವ ಶೆಟ್ಟರ್, “ರಕ್ತದಾನ ಶ್ರೇಷ್ಠದಾನ. ಯಾರೂ ರಕ್ತ ವ್ಯರ್ಥ ಮಾಡಬೇಡಿ. ಅವಶ್ಯಕತೆ ಇರುವವರಿಗೆ ದಾನ ಮಾಡಿ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ರಾಜ್ಯದಲ್ಲಿ ಅತಿ ಹೆಚ್ಚು ಅಭ್ಯರ್ಥಿಗಳು ಠೇವಣಿ ಕಳೆದುಕೊಂಡ ಪಕ್ಷ ಬಿಜೆಪಿ

ಪತ್ರದಲ್ಲಿ ಏನಿತ್ತು?

“ಜಗದೀಶ್ ಶೆಟ್ಟರ್ 100ಕ್ಕೆ 100ರಷ್ಟು ವಿಜಯಶಾಲಿಯಾಗುತ್ತಾರೆ. ರಕ್ತದಲ್ಲಿ ಬರೆದುಕೊಡುತ್ತೇನೆ. ಈ ಸಾರಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬರುತ್ತದೆ” ಎಂದು ಮಂಜುನಾಥ ರಕ್ತದಲ್ಲಿ ಪತ್ರ ಬರೆದು ಶುಭ ಹಾರೈಸಿದ್ದಾನೆ. ಮಂಜುನಾಥ ಎಂಬಾತನ ರಕ್ತದ ಪತ್ರ ಎಲ್ಲೆಡೆ ವೈರಲ್ ಆಗಿತ್ತು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ಬಿಹಾರದಲ್ಲಿ ಒಂದು ಮತವನ್ನೂ ಕದಿಯಲು ನಾವು ಬಿಡಲ್ಲ: ರಾಹುಲ್ ಗಾಂಧಿ

ಮತಗಳನ್ನು ಕದಿಯಲು ಚುನಾವಣಾ ಆಯೋಗ ಮತ್ತು ಬಿಜೆಪಿ ಪಾಲುದಾರಿಕೆ ಹೊಂದಿದೆ ಎಂದು...

Download Eedina App Android / iOS

X