ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಬಿಎಸ್‌ವೈ, ಎಚ್‌ಡಿಕೆ ಚಾಲನೆ

Date:

Advertisements

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಸೈಟ್‌ ಹಂಚಿಕೆ ವಿಚಾರವಾಗಿ ನಡೆದಿದೆ ಎನ್ನಲಾದ ಅಕ್ರಮ ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟದಿಂದ ಆಯೋಜಿಸಿರುವ ಮೈಸೂರು ಪಾದಯಾತ್ರೆಗೆ ಚಾಲನೆ ದೊರೆತಿದೆ.

ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಇರುವ ಜೆ ಕೆ ಗ್ರ್ಯಾಂಡ್ ಅರೆನಾ ಸೆಂಟರ್‌ನಲ್ಲಿ ಮೈಸೂರು ಪಾದಯಾತ್ರೆಯಗೆ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಚಾಲನೆ ನೀಡಿದರು.

ಮುಡಾದಿಂದ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಅಕ್ರಮವಾಗಿ 14 ನಿವೇಶಗಳನ್ನು ಹಂಚಲಾಗಿದೆ ಎಂಬ ಆರೋಪವನ್ನು ಬಿಜೆಪಿ, ಜೆಡಿಎಸ್‌ ಬ್ರಹ್ಮಾಸ್ತ್ರವನ್ನಾಗಿಸಿಕೊಂಡಿವೆ. ಸಿದ್ದರಾಮಯ್ಯ ಅವರ ರಾಜೀನಾಮೆ ಆಗ್ರಹಿಸಿ ಆಯೋಜಿಸಿರುವ ಪಾದಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌ ಅಶೋಕ್‌, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆಯ ಜೆಡಿಎಸ್ ನಾಯಕ ಸಿ ಬಿ ಸುರೇಶ್ ಬಾಬು, ಮಾಜಿ ಸಚಿವ ಜಿ ಟಿ ದೇವೇಗೌಡ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಿದ್ದರು.

Advertisements

ಪಾದಯಾತ್ರೆಗೆ ನಿರೀಕ್ಷೆಗೂ ಮೀರಿ ಬೆಂಬಲ: ವಿಜಯೇಂದ್ರ

ಪಾದಯಾತ್ರೆಗೆ ನಮ್ಮ ನಿರೀಕ್ಷೆಗೂ ಮೀರಿ ಜನರು ಬರುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸಂತಸ ವ್ಯಕ್ತಪಡಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಕಾರ್ಯಕ್ರಮ ಉದ್ಘಾಟನೆಗೂ ಮುನ್ನ ಮಾತನಾಡಿದ ಅವರು, “ಪಾದಯಾತ್ರೆ ಯಶಸ್ವಿಯಾಗಬೇಕು. ಈ ಭ್ರಷ್ಟ, ಹಗರಣಗಳ ಕಾಂಗ್ರೆಸ್ ಸರ್ಕಾರ ವಿರುದ್ಧ ಹೋರಾಟದ ಯಶಸ್ಸಿಗಾಗಿ ನಮ್ಮೆಲ್ಲ ಕಾರ್ಯಕರ್ತರು ಅತ್ಯುತ್ತಮ ವ್ಯವಸ್ಥೆ ಮಾಡಿದ್ದಾರೆ” ಎಂದರು.

ಮೈಸೂರು ಚಲೋ ಪಾದಯಾತ್ರೆಯ ಆರಂಭಕ್ಕೂ ಮುನ್ನ ವಿಜಯೇಂದ್ರ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಆರ್.ರಘು ಕೌಟಿಲ್ಯ, ಜಿಲ್ಲಾಧ್ಯಕ್ಷರಾದ ಎಲ್. ನಾಗೇಂದ್ರ, ಎಲ್.ಆರ್.ಮಹದೇವಸ್ವಾಮಿ, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಮಾಜಿ ಜಾತ್ಯತೀತ ಕುಮಾರಣ್ಣ ತಾನೇ ಪೇಶ್ವೆಗಳು ಅಂದಅವರೊಂದಿಗೆ ಕೈ ಹಿಡಿದು ಕುಣಿಯೋದ ನೋಡಲು ಎರಡು ಕಣ್ಣು ಸಾಲವು,,ಕೈಜೋಡಿಸದಿದ್ದರೆ ಮಂತ್ರಿ ಸ್ಥಾನ ಕಳೆದುಕೊಳ್ಳುವ ಭಯ ಇರಲೂ ಬಹು ಪಾಪ,, ಯತ್ನಾಳ್ ಪ್ರತಾಪ್ ಸಿಂಹ ಜಾರ್ಕಿಹೊಳಿ ಕಾಣುತ್ತಿಲ್ಲವೇ,,, ಎರಡೂ ಬಣಗಳನ್ನು ನಾಟ್ಯ ಆಡಿಸುವವರೂ ಒಂದೇ ವರ್ಗದವರು,, ಇಲ್ಲೊಬ್ಬ ಡೊಳ್ಳು ಬಾರಿಸುವನು ಅಲ್ಲೊಬ್ಬ ವಚನ ಸಾಹಿತ್ಯಕ್ಕೆ ಕೈ ಹಾಕಿದ್ದಾನೆ,, ಶತಮಾನಗಳಿಂದ ಅವರ ದಾಸ್ಯದಲ್ಲಿ ಬೆಳೆದ ಶೂದ್ರರಿಗೆ ಮುಕ್ತಿ ಪಡೆಯಲು ಎಂದೂ ಸಾಧ್ಯವಿಲ್ಲ ,,

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

Download Eedina App Android / iOS

X