ಮಲೆನಾಡು-ಕರಾವಳಿಯಲ್ಲಿ ಮಳೆ ಅಬ್ಬರ; ಆದರೂ, 11 ಜಿಲ್ಲೆಗಳಲ್ಲಿ ಮಳೆ ಕೊರತೆ

Date:

Advertisements

ರಾಜ್ಯದಲ್ಲಿ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆ ಅಬ್ಬರಿಸುತ್ತಿದೆ. ರಾಜ್ಯದ ಬಹುತೇಕ ಜಲಾಶಯಗಳು ತುಂಬಿವೆ. ನದಿಗಳು ಉಕ್ಕಿ ಹರಿಯುತ್ತಿದೆ. ಅದಾಗ್ಯೂ, ರಾಜ್ಯದಲ್ಲಿನ 11 ಜಿಲ್ಲೆಗಳಲ್ಲಿ ವಾಡಿಕೆಯಷ್ಟು ಮಳೆಯಾಗಿಲ್ಲ. ಕೆಲವು ಜಿಲ್ಲೆಗಳಲ್ಲಿ ಸರಾಸರಿ ವಾಡಿಕೆಯಷ್ಟು ಮಳೆಯಾಗಿದ್ದರೂ, ಆ ಜಿಲ್ಲೆಗಳ ಕೆಲವು ತಾಲೂಕುಗಳು ಸೇರಿದಂತೆ ಒಟ್ಟು 83 ತಾಲೂಕುಗಳಲ್ಲಿ ಮಳೆ ಕೊರತೆ ಎದರಾಗಿದೆ. ಹೀಗಾಗಿ, ಈ ತಾಲೂಕುಗಳಲ್ಲಿ ಮುಂಗಾರು ಬಿತ್ತನೆಗೆ ಹಿನ್ನಡೆಯಾಗಿದೆ.

ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಪ್ರಕಾರ, ಏಳು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಕೊರತೆಯಾಗಿದ್ದು, ನಾಲ್ಕು ಜಿಲ್ಲೆಗಳಲ್ಲಿ ಸಾಮಾನ್ಯ ಕೊರತೆ ಕಂಡುಬಂದಿದೆ. ರಾಮನಗರದಲ್ಲಿ 1% ಮಳೆಕೊರತೆಯಾಗಿದ್ದರೆ, ಬಳ್ಳಾರಿಯಲ್ಲಿ 4% ಮಳೆ ಕೊರತೆ ಕಂಡುಬಂದಿದೆ. ವಿಜಯನಗರ ಮತ್ತು ಬೆಂಗಳೂರು ನಗರ ಜಿಲ್ಲೆಯಲ್ಲಿ ಕ್ರಮವಾಗಿ 13% ಮತ್ತು 17% ಮಳೆ ಕೊರತೆ ಎದುರಾಗಿದೆ.

ಇನ್ನು, ಕೋಲಾರದಲ್ಲಿ 49%, ಚಿಕ್ಕಬಳ್ಳಾಪುರದಲ್ಲಿ 43%, ಬೆಂಗಳೂರು ಗ್ರಾಮಾಂತರದಲ್ಲಿ 34%, ಯಾದಗಿರಿಯಲ್ಲಿ 32%, ರಾಯಚೂರಿನಲ್ಲಿ 29%, ವಿಜಯಪುರದಲ್ಲಿ 29% ಹಾಗೂ ಕೊಪ್ಪಳದಲ್ಲಿ 28% ಮಳೆ ಕೊರತೆಯಾಗಿದೆ.

Advertisements

ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 32 ತಾಲೂಕುಗಳು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ 51 ತಾಲೂಕುಗಳಲ್ಲಿ ಮಳೆ ಕೊರತೆಯಾಗಿದೆ. ಈ ಪೈಕಿ, ಸಿರಗುಪ್ಪ ತಾಲೂಕಿನಲ್ಲಿ 65%, ಕೋಲಾರ ತಾಲೂಕಿನಲ್ಲಿ 63%, ಮುಳಬಾಗಿಲು ತಾಲೂಕಿನ‌ಲ್ಲಿ 62%ರಷ್ಟು ಕೊರತೆಯೊಂದಿಗೆ ಅತಿ ಹೆಚ್ಚು ಮಳೆ ಕೊರತೆ ದಾಖಲಾಗಿದೆ.

ಈ 83 ತಾಲೂಕಿನಲ್ಲಿ ವಾಡಿಕೆಯಷ್ಟು ಮಳೆಯಾಗದ ಪರಿಣಾಮ ಮುಂಗಾರು ಬಿತ್ತನೆಯಲ್ಲಿ ಕುಂಠಿತವಾಗಿದೆ. ಜೂನ್ ತಿಂಗಳಿನಲ್ಲೇ ಮುಂಗಾರು ಬಿತ್ತನೆ ಆರಂಭವಾಗಬೇಕಿತ್ತು. ಆದರೆ, ಮಳೆಯಾಗದ ಪರಿಣಾಮ, ನಿರೀಕ್ಷೆಯಷ್ಟು ಬಿತ್ತನೆಯಾಗಿಲ್ಲ ಎಂದು ವರದಿಯಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಹಾಆಗೂ ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಶಿರೂರು ಬಳಿ ಗುಡ್ಡ ಕುಸಿದು 11 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ, ಮೂವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ. ಬೆಂಗಳೂರು-ಮಂಗಳೂರಿನ ನಡುವಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಕಲೇಶಪುರ ಬಳಿ ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಸಂಚಾರ ಸ್ಥಗಿತಗೊಂಡಿತ್ತು. ಚಾರ್ಮಾಡಿ ಘಾಟ್‌ನಲ್ಲಿಯೂ ಗುಡ್ಡ ಕುಸಿತವಾಗಿದೆ. ಧಾರಕಾರ ಮಳೆಯಿಂದಾಗಿ ಹಲವಾರು ಭಾಗಗಳಲ್ಲಿ ಮಳೆಗಳು ಜಲಾವೃತಗೊಂಡಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X