ಪಾದಯಾತ್ರೆ | 10 ವರ್ಷದ ಮಾತಿರಲಿ, 10 ತಿಂಗಳು ಅಧಿಕಾರದಲ್ಲಿರಿ ನೋಡೋಣ: ಕುಮಾರಸ್ವಾಮಿ ಸವಾಲು

Date:

Advertisements

ಹತ್ತು ವರ್ಷ ನಮ್ಮದೇ ಅಧಿಕಾರ, ಸರ್ಕಾರ ಎಂದು ಕಾಂಗ್ರೆಸ್ ನಾಯಕರು ಬೀಗುತ್ತಿದ್ದಾರೆ. ಹತ್ತು ವರ್ಷದ ಮಾತಿರಲಿ, ಹತ್ತು ತಿಂಗಳು ಅಧಿಕಾರದಲ್ಲಿ ಇರಲಿ ನೋಡೋಣ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸವಾಲು ಹಾಕಿದರು.

ಬೆಂಗಳೂರಿನಿಂದ ಮೈಸೂರುವರೆಗೆ ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ನಿಮ್ಮ ಸರ್ಕಾರವನ್ನು ಯಾರೂ ಅಸ್ಥಿರ ಮಾಡಿಕೊಳ್ಳುತ್ತಿಲ್ಲ. ನೀವೇ ಜನರು ಕೊಟ್ಟ ಅವಕಾಶವನ್ನು ಹಾಳು ಮಾಡಿಕೊಳ್ಳುತ್ತಿದ್ದೀರಿ” ಎಂದರು.

“ಹಗರಣಗಳ ಮೇಲೆ ಹಗರಣಗಳನ್ನು ನಡೆಸಿ ಅಕ್ರಮ ಎಸಗಿದ್ದೀರಿ. ಈಗ ನೋಡಿದರೆ ಬಿಜೆಪಿ-ಜೆಡಿಎಸ್ ಪಕ್ಷಗಳನ್ನು ಪ್ರಶ್ನೆ ಮಾಡುತ್ತೇವೆ ಎಂದು ಹೊರಟಿದ್ದೀರಿ. ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಅಧಿಕಾರಕ್ಕೆ ಬಂದು ಜನಪರ ಕೆಲಸ ಮಾಡುವುದು ಬಿಟ್ಟು ಕಾನೂನು ಬಾಹಿರ ಚಟುವಟಿಕೆಗಳು, ಭ್ರಷ್ಟಾಚಾರದಲ್ಲಿ ನಿರತರಾಗಿದ್ದೀರಿ. ಹಿಂದೆಂದೂ ಕಂಡಿರದಂತಹ ಭ್ರಷ್ಟ ಸರ್ಕಾರವನ್ನು ಕಾಣುತ್ತಿದ್ದೇವೆ” ಎಂದು ದೂರಿದರು.

Advertisements

“ಈ ಕೆಟ್ಟ ಕಾಂಗ್ರೆಸ್ ಜನ ವಿರೋಧಿ ಸರ್ಕಾರ ವಿರುದ್ಧ ನಾವು ಜಂಟಿ ಹೋರಾಟ ಹಮ್ಮಿಕೊಂಡಿದ್ದೇವೆ. ಜನರಿಗೆ ಇವರ ಆಕ್ರಗಳನ್ನು ಮನವರಿಕೆ ಮಾಡಿಕೊಡುತ್ತೇವೆ. ಆದಿಶಕ್ತಿ ತಾಯಿ ಕೆಂಪಮ್ಮ ದೇವಿಗೆ ಪೂಜೆ ಸಲ್ಲಿಸಿ ಯಡಿಯೂರಪ್ಪನವರ ಇನ್ನಿತರೆ ಮಾರ್ಗದರ್ಶಕರ ನೇತೃತ್ವದಲ್ಲಿ ಮೈಸೂರು ಪಾದಯಾತ್ರೆ ಮಾಡುತ್ತಿದ್ದೇವೆ. ನಾಡಿನ ಜನತೆಯ ಅಭಿಪ್ರಾಯ ಏನಿದೆ ಅದರ ಪರವಾಗಿ ನಾವು ಪಾದಯಾತ್ರೆ ಮಾಡುತ್ತಿದ್ದೇವೆ” ಎಂದರು.

ಡಿಕೆಶಿಯದ್ದು ನಾವು ಬಿಚ್ಚಿಡುತ್ತೇವೆ

ನಮ್ಮ ಪಾದಯಾತ್ರೆ ತಡೆಯಲು ಕಾಂಗ್ರೆಸ್ ನಾಯಕರು ಬಿಡದಿಯಲ್ಲಿ ಪ್ರಶ್ನೆ ಮಾಡಿದ್ದಾರೆ. ಅದಾದ ಮೇಲೆ ಮುಂದೆಯೂ ಪ್ರಶ್ನೆ ಮಾಡುತ್ತಾರಂತೆ. ಮಾಡಲಿ, ಅವರಿಗೆ ತಕ್ಕ ಉತ್ತರ ಕೊಡುತ್ತೇವೆ. ಅವರು ಕೇಳಿರುವ ಪ್ರಶ್ನೆಗಳಿಗೆ ಬಿಡದಿ, ರಾಮನಗರದಲ್ಲಿ ಉತ್ತರ ಕೊಡುತ್ತೇನೆ” ಎಂದು ಹೇಳಿದರು.

“ಹಿಂದುಳಿದ ವರ್ಗಗಳ ನಾಯಕರು ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವುದಕ್ಕೆ ಕೆಲವರಿಗೆ ಹೊಟ್ಟೆ ಉರಿಯಿಂದ ಎನ್ನುತ್ತಾರೆ ಇವರು. ಒಳ್ಳೆಯ ಕೆಲಸ ಮಾಡಿದರೆ ಯಾರಿಗೆ ಹೊಟ್ಟೆ ಉರಿ ಬರುತ್ತದೆ? ಸುಖಾಸುಮ್ಮನೆ ಜನರ ಗಮನ ಬೇರೆಡೆಗೆ ಸೆಳೆಯಲು ನಾನು ಹಿಂದುಳಿದವನು, ಅದಕ್ಕೆ ಹೊಟ್ಟೆ ಉರಿ ಎಂದು ನಾಟಕ ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

ಸಿಎಂ ಮೇಲೆ ತೀವ್ರ ವಾಗ್ದಾಳಿ

“ಮುಡಾ ಹಗರಣದಲ್ಲಿ ನಿಮ್ಮ ಹೆಸರು ಬಂದಿದೆ. ನಿವು ನಿವೇಶನ ಪಡೆದಿರುವುದಕ್ಕೆ ನಮಗೆ ಅಭ್ಯಂತರ ಇಲ್ಲ. ಆದರೆ, ಸರ್ಕಾರದ ಜಮೀನು ನಿಮ್ಮ ಬಾಮೈದನ ಹೆಸರಿಗೆ ಖರೀದಿಸಿ, ಆ ನಂತರ ಸಹೋದರಿಗೆ ಕೊಡುತ್ತೀರಿ. ಇದು ಹೇಗೆ ರವಾನೆಯಾಗಿದೆ ಎನ್ನುವುದು ನಿಮಗೆ ಗೊತ್ತಿಲ್ಲವೇ ಸಿದ್ದರಾಮಯ್ಯನವರೇ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸರ್ಕಾರ ಬೀಳಿಸಲು ಸುಪಾರಿ ಪಡೆದವರಂತೆ ಮಾತಾಡುವ ಮಾಜಿ ಜಾತ್ಯತೀತ ಕುಮಾರಣ್ಣ,,, ಮಾತಾಡಲಿಲ್ಲ ಅಂದ್ರೆ ಮಂತ್ರಿಗಿರಿ ಕಸಗೊಂತಾರ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X