ಬಿಜೆಪಿ ಪರವಾಗಿ ನಟ ಸುದೀಪ್ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ನಡುವೆ, ನಟ ದರ್ಶನ್ ಕೂಡ ಬಿಜೆಪಿಯ ವಿವಿಧ ಅಭ್ಯರ್ಥಿಗಳ ಪರವಾಗಿ ಕಣಕ್ಕಿಳಿದು, ಪ್ರಚಾರ ಆರಂಭಿಸುತ್ತಿದ್ದಾರೆ. ಶುಕ್ರವಾರ ಕೋಲಾರ ಜಿಲ್ಲೆಯ ಬಂಗಾರಪೇಟೆ, ಕೆಜಿಎಫ್, ಕೋಲಾರ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಪರ ದರ್ಶನ್ ಪ್ರಚಾರ ಮಾಡಲಿದ್ದಾರೆ.
ಬಂಗಾರಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂದು ಮಾಜಿ ಶಾಸಕ, ಬಿಜೆಪಿ ಅಭ್ಯರ್ಥಿ ಎಂ ನಾರಾಯಣಸ್ವಾಮಿ, “ದರ್ಶನ್ ರವರಿಗೆ ಬಂಗಾರಪೇಟೆ ಕ್ಷೇತ್ರದಲ್ಲಿ ಭಾರೀ ಪ್ರಮಾಣದಲ್ಲಿ ಅಭಿಮಾನಿಗಳಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರ ಜೊತೆಗೆ ಅವರು ಕೂಡ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ” ಎಂದು ಹೇಳಿದರು.
“ದರ್ಶನ್ ರವರು ಪಟ್ಟಣದ ಕೋಲಾರದ ರಸ್ತೆಯ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಬಿಜೆಪಿ ಕಾರ್ಯಕರ್ತರು ಮತ್ತು ದರ್ಶನ್ ರವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರೋಡ್ ಶೋದಲ್ಲಿ ಭಾಗವಹಿಸಲಿದ್ದಾರೆ” ಎಂದು ಹೇಳಿದರು.