ಚಿಕ್ಕಬಳ್ಳಾಪುರ | ಕುಖ್ಯಾತ ಅಪಹರಣಕಾರರ ಗ್ಯಾಂಗ್‌‌ನ ಎಂಟು ಮಂದಿಯ ಬಂಧನ

Date:

Advertisements

ಹಾಡಹಗಲೇ ಅಪಹರಣ ಮಾಡಿ, ಲಕ್ಷಾಂತರ ರೂಪಾಯಿ ಹಣ ಸುಲಿಗೆ ಮಾಡುತ್ತಿದ್ದ ಕುಖ್ಯಾತ ಅಪಹರಣಕಾರರ ಕಿಡ್ನ್ಯಾಪರ್ಸ್‌ಗಳನ್ನು ಚಿಕ್ಕಬಳ್ಳಾಪುರ ಪೊಲೀಸರು ಎಡೆಮುರಿಕಟ್ಟಿದ್ದಾರೆ.

ಕಳೆದ ಜೂನ್‌, ಜುಲೈ ತಿಂಗಳಲ್ಲಿ ನಗರ ಮತ್ತು ನಂದಿ ಹೋಬಳಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಹಲವು ಅಪಹರಣ, ಸುಲಿಗೆ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು 8 ಮಂದಿ ಕುಖ್ಯಾತ ಅಪಹರಣಕಾರರನ್ನು ಬಂಧಿಸಿದ್ದಾರೆ.

ಗ್ಯಾಂಗ್‌ ಲೀಡರ್‌ ಬರ್ಕತ್‌ ವುಲ್ಲಾ, ಲೋಹಿತ್‌ ಕುಮಾರ್, ಪ್ರವೀಣ್‌, ಮಾರುತಿ ಪ್ರಸನ್ನ, ಸಂತೋಷ್‌, ಭರತ್‌‌ ಕುಮಾರ್, ವೆಂಕಟೇಶ್‌, ಮರುಮಲ್ಲಪ್ಪ ಬಂಧಿತರು. ಬಂಧಿತರಿಂದ 41 ಲಕ್ಷ ರೂ. ನಗದು, 1 ಚಿನ್ನದ ಸರ, ಮಾರುತಿ ಸ್ವಿಷ್ಟ್‌, ಮಾರುತಿ ಬ್ರಿಜಾ ಹಾಗೂ ಫಾರ್ಚುನರ್‌ ಕಾರುಗಳು ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

Advertisements

ಈ ಆರೋಪಿಗಳು ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ನಾನಾ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಅದಲ್ಲದೆ ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಕೃತ್ಯದಲ್ಲೂ ಭಾಗಿಯಾಗಿರುವುದು ತನಿಖೆಯ ವೇಳೆ ತಿಳಿದು ಬಂದಿದೆ.

ಕಳೆದ ಜೂನ್‌ನಲ್ಲಿ ಹಾರೋಬಂಡೆ ಗ್ರಾಮದ ಸಹಕಾರ ಭವನದ ಬಳಿ ವ್ಯಕ್ತಿಯೋರ್ವನನ್ನು ಅಪಹರಿಸಿ 18 ಲಕ್ಷ ರೂ. ನಗದು ಸುಲಿಗೆ ಮಾಡಿದ್ದರು. ಅದಾದ ಬಳಿಕ ಜು.20 ರಂದು ನಂದಿ ಗಿರಿಧಾಮ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿನ ಚಿಕ್ಕಸಾಗರ ಗ್ರಾಮದ ಬಳಿ ಬೆಳಗ್ಗೆ ವಾಕಿಂಗ್‌ ಮಾಡುತ್ತಿದ್ದ ವ್ಯಕ್ತಿಯನ್ನು ಅಪಹರಿಸಿ 60 ಲಕ್ಷ ರೂ. ಸುಲಿಗೆ ಮಾಡಿದ್ದರು.

ವಿಶೇಷ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಡಿವೈಎಸ್ಪಿಗಳಾದ ಎನ್.ಶಿವಕುಮಾರ್‌, ರವಿಕುಮಾರ್‌, ಪಿಐ ಮಂಜುನಾಥ್‌, ಕೆ.ಪಿ.ಸತ್ಯಾನಾರಾಯಣ್‌, ನಾಯಾರ್ಸ್‌ ಡೈ, ಪ್ರಶಾಂತ್‌ ವರ್ಣಿ, ಸೂರ್ಯಪ್ರಕಾಶ್‌, ಶ್ರೀನಿವಾಸ್‌, ಜನಾರ್ಧನ, ಪಿಎಸ್‌ಐಗಳಾದ ಶರಣಪ್ಪ, ಹರೀಶ್‌ ಹಾಗೂ ಸಿಬ್ಬಂದಿ ವರ್ಗದವರನ್ನು ಎಸ್‌ಪಿ ಕುಶಾಲ್‌ ಚೌಕ್ಸೆ ಅಭಿನಂದಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X