ಬೆಂಗಳೂರಿನ ಸಿಸಿಬಿಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ತಿಮ್ಮೇಗೌಡ ಅವರು ರಾಮನಗರ ಸಮೀಪದ ಬಿಡದಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಬೆಳಿಗ್ಗೆ ಅವರ ಮೃತದೇಹ ಪತ್ತೆಯಾಗಿದೆ.
ಯಾದಗಿರಿ ಪಟ್ಟಣ ಠಾಣೆಯ ಪಿಎಸ್‌ಐ ಪರುಶರಾಮ್ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಮೂರು ದಿನಗಳ ಬಳಿಕ ಮತ್ತೋರ್ವ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ.
ಇದನ್ನು ಓದಿದ್ದೀರಾ? ಯಾದಗಿರಿ | ಪಿಎಸ್‌ಐ ಪರಶುರಾಮ್ ಸಾವು ಪ್ರಕರಣ: ತನಿಖೆ ಚುರುಕುಗೊಳಿಸಿದ ಸಿಐಡಿ; ಹಲವು ದಾಖಲೆ ವಶಕ್ಕೆ
ವ್ಯಕ್ತಿಯೊಬ್ಬರು ಬಿಡದಿ ಸಮೀಪದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾಹಿತಿ ಕಲೆ ಹಾಕಿದಾಗ ಮೃತಪಟ್ಟಿರುವುದು ಪೊಲೀಸ್ ಅಧಿಕಾರಿ ಎಂದು ತಿಳಿದುಬಂದಿದೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡ ಬಿಡದಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.