ವಾಲ್ಮೀಕಿ ನಿಗಮ ಅಕ್ರಮ | ಎಸ್‌ಐಟಿಯಿಂದ ಪಾರದರ್ಶಕ ತನಿಖೆ ನಡೆಯುತ್ತಿಲ್ಲ: ಸಾ ರಾ ಮಹೇಶ್ ಆರೋಪ

Date:

Advertisements

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಜೆಡಿಎಸ್ ಮುಖಂಡ ಸಾ ರಾ ಮಹೇಶ್ ಅವರು ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ, ಸಿಎಂ ಸಿದ್ದರಾಮಯ್ಯ ವಿರುದ್ಧ ವಗ್ದಾಳಿ ನಡೆಸಿದರು.

“ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇರುವುದು ‘ಎಸ್‌ಐಟಿ’ ಅಲ್ಲ, ಬದಲಿಗೆ ‘ಸಿದ್ದರಾಮಯ್ಯ–ಶಿವಕುಮಾರ್ ಇನ್‌ವೆಸ್ಟಿಗೇಟಿವ್‌ ಟೀಮ್‌’ (ಎಸ್‌ಎಸ್‌ಐಟಿ)” ಎಂದು ಸಾ ರಾ ಮಹೇಶ್ ಕಿಡಿಕಾರಿದರು.

“ಕೆಲವು ದಿನದ ಹಿಂದೆ ದದ್ದಲ್‌ ಅವರೇ ಎಸ್‌ಐಟಿ ತನ್ನನ್ನು ಬಂಧಿಸಲಿ ಎಂದು ಹೇಳಿಕೆ ನೀಡಿದ್ದರು. ಎಸ್‌ಐಟಿ ನಮ್ಮದೇ ಸಂಸ್ಥೆ ಎಂದು ಆಡಳಿತ ಪಕ್ಷದ ಶಾಸಕರು ಭಾವಿಸಿದ್ದಾರೆ. ಕರ್ನಾಟಕದಲ್ಲಿ ಹಿಂದೆಂದೂ ಪೊಲೀಸರನ್ನು ಈ ಮಟ್ಟಕ್ಕೆ ಬಳಸಿಕೊಂಡ ಉದಾಹರಣೆ ಇಲ್ಲ” ಹರಿಹಾಯ್ದರು.

Advertisements

“ಹಣ ದುರ್ಬಳಕೆ ಹಗರಣದಲ್ಲಿ ಎಸ್‌ಐಟಿ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಬಳ್ಳಾರಿ ಶಾಸಕ ಬಿ. ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಹೆಸರನ್ನೇ ಈಗ ಕೈಬಿಡಲಾಗಿದೆ. ಎಸ್‌ಐಟಿಯಿಂದ ಪಾರದರ್ಶಕ ತನಿಖೆ ನಡೆಯುತ್ತಿಲ್ಲ” ಎಂದು ಆರೋಪಿಸಿದರು.

ಯಾದಗಿರಿ ಪಿಎಸ್‌ಐ ಪರಶುರಾಮ ಆತ್ಮಹತ್ಯೆ ವಿಚಾರವಾಗಿಯೂ ಮಾತನಾಡಿದ ಅವರು, “ಕಾಂಗ್ರೆಸ್‌ ಶಾಸಕ ಚನ್ನಾರೆಡ್ಡಿ ಪಾಟೀಲ, ಅವರ ಮಗ ಪಂಪನಗೌಡ ಅವರೇ ಕಾರಣ ಎಂದು ಮೃತರ ಪತ್ನಿ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ಸಂವಿಧಾನದ ಮೇಲೆ ಗೌರವ ಇದ್ದರೆ ಕೂಡಲೇ ಶಾಸಕರನ್ನು ಬಂಧಿಸಬೇಕು. ಶಾಸಕ ಸ್ಥಾನದಿಂದ ಅವರನ್ನು ಅಮಾನತು ಮಾಡಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಸಾವಿರಾರು ಕೋಟಿ ರಾಫೆಲ್ ಹಗರಣದ ಆರೋಪ ಬಂದಾಗ,, ತನಿಖೆ ಎಷ್ಟು ಪಾರದರ್ಶಕವಾಗಿ ನಡೆದಿತ್ತು ಭಯಂಕರ ನಾಯಕರೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X