ಬೆಂಗಳೂರು | ಒಳಮೀಸಲಾತಿ ತ್ವರಿತ ಜಾರಿಗೆ ಮಾದಿಗ ದಂಡೋರ ಒತ್ತಾಯ

Date:

Advertisements

ಸುಪ್ರೀಂ ಕೋರ್ಟ್‌ನ ಒಳಮೀಸಲಾತಿ ತೀರ್ಪನ್ನು ಸ್ವಾಗತಿಸಿ ಮತ್ತು ತ್ವರಿತವಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮಾದಿಗ ದಂಡೋರ ಎಂಆರ್‌ಪಿಎಸ್‌ನಿಂದ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿ ನಡೆಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರ ಎಲ್ಲ ಮುಂಬಡ್ತಿ ಮತ್ತು ನೇಮಕಾತಿಗಳನ್ನು ಕೂಡಲೇ ಸ್ಥಗಿತಗೊಳಿಸಿ, ಒಳಮೀಸಲಾತಿ ಪ್ರಮಾಣದ ಅನ್ವಯ ನೇಮಕಾತಿ ಮಾಡುವಂತೆ ಒತ್ತಾಯಿಸಿದರು.

ಉತ್ತರ ಕರ್ನಾಟಕ ವಿಭಾಗೀಯ ಅಧ್ಯಕ್ಷ ಮಂಜುನಾಥ ಕೊಂಡಪಲ್ಲಿ ಮಾತನಾಡಿ, “ಒಳಮೀಸಲಾತಿ ತೀರ್ಪಿನ ಕುರಿತು ಎಲ್ಲೆಡೆ ಚರ್ಚೆಯಾಗುತ್ತಿದೆ. ಪರಿಶಿಷ್ಟರ ಮೀಸಲಾತಿಯು ಅವರ ಆರ್ಥಿಕ ಸ್ಥಿತಿಗತಿಯ ಮೇಲಲ್ಲದೆ, ಶತಮಾನಗಳಿಂದ ಅವರ ಮೇಲೆ ನಡೆದಿರುವ ದೌರ್ಜನ್ಯ ಮತ್ತು ಶೋಷಣೆಯ ತಳಹದಿಯ ಮೇಲೆ ನೀಡಲಾಗಿದೆ. ಈ ಬಗ್ಗೆ 1992ರ ಇಂದಿರಾ ಸಹಾನಿ ಪ್ರಕರಣದಲ್ಲಿ ಒಂಭತ್ತು ಸದಸ್ಯರ ನ್ಯಾಯಪೀಠದಿಂದ ನೀಡಲಾಗಿದ್ದ ತೀರ್ಪಿನಲ್ಲಿ ವಿಶೇಷವಾಗಿ ಇದನ್ನು ಉಲ್ಲೇಖಿಸಲಾಗಿದೆ. ಅಲ್ಲದೇ ಪ್ರಸ್ತುತ ತೀರ್ಪಿನಲ್ಲಿ ʼಕೆನೆಪದರʼದ ಉಲ್ಲೇಖವಾಗಿರುವುದು ತೀರ್ಪಿನ ಭಾಗವಾಗಿ ಅಲ್ಲ, ಅದನ್ನು ಕೋರ್ಟ್ ಭಾಷೆಯಲ್ಲಿ ಒಬಿಟರ್ ಡಿಕ್ಟಮ್ ಅಂದರೆ ಕೇವಲ ಉಲ್ಲೇಖಪೂರ್ಣ ಅಭಿಪ್ರಾಯ ಎಂಬುದನ್ನು ತಿಳಿದೂ ಕೂಡಾ ಸರ್ಕಾರದ ಕೆಲವು ಸಚಿವರು/ಉನ್ನತ ಅಧಿಕಾರಿಗಳು ಬೇಜವಾಬ್ದಾರಿ ಹೇಳಿಕೆಗಳನ್ನು ಕೊಡುತ್ತ ಶೋಷಿತ ಸಮುದಾಯಗಳಲ್ಲಿ ಆತಂಕ ಸೃಷ್ಟಿಸುತ್ತಿರುವುದು ಖಂಡನೀಯ” ಎಂದರು.

Advertisements

ಕಾರ್ಯಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ್ ಮಾತನಾಡಿ, “ಒಂದು ವೇಳೆ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೆ ತರುವುದಕ್ಕೆ ಕುಂಟುನೆಪಗಳನ್ನು ಹೇಳುತ್ತ ಕಾಲಹರಣ ಮಾಡಿದರೆ, ಬೀದರ್‌ನಿಂದ ಬೆಂಗಳೂರಿನವರೆಗೆ ಮಾದಿಗ ದಂಡೋರ ವತಿಯಿಂದ ಕಾಲ್ನಡಿಗೆ ಯಾತ್ರೆ ಹಮ್ಮಿಕೊಂಡು ಬೃಹತ್ ಜನಾಂದೋಲನ ಆರಂಭಿಸಲಾಗುವುದು” ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರಾಜ್ಯಾಧ್ಯಕ್ಷ ನರಸಪ್ಪ ದಂಡೋರ ಮಾತನಾಡಿ, “ಒಳಮೀಸಲಾತಿ ಹೋರಾಟದಲ್ಲಿ ಮಂದಕೃಷ್ಣ ಮಾದಿಗ ಅವರ ಸುದೀರ್ಘ 30 ವರ್ಷದ ಹೋರಾಟದ ಹಾದಿಯನ್ನು ನೆನೆಯುತ್ತ, ಕಳೆದ ವರ್ಷ ಹೈದರಾಬಾದ್‌ನಲ್ಲಿ ನಡೆದ ಮಾದಿಗರ ವಿಶ್ವರೂಪ ಮಹಾ ಸಮಾವೇಶದ ವೇದಿಕೆಗೆ ಆಗಮಿಸಿ ಮಾದಿಗರ ಹೋರಾಟಕ್ಕೆ ನ್ಯಾಯ ದೊರಕಿಸಲು ಕೇಂದ್ರ ಸರ್ಕಾರದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಘೋಷಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ಕೊಟ್ಟ ಮಾತಿನಂತೆ ನಡೆದು ಸ್ವತಃ ಭಾರತದ ಅಟಾರ್ನಿ ಜನರಲ್‌ರನ್ನು ನೇಮಿಸಿ ಸರ್ವೋಚ್ಛ ನ್ಯಾಯಾಲಯದ ಎದುರಿಗೆ ಒಳಮೀಸಲಾತಿಪರ ವಾದ ಮಂಡಿಸಿದ್ದಕ್ಕೆ ಅನಂತ ಧನ್ಯವಾದದಳು” ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ರೈತರ ಜಮೀನಿನಲ್ಲಿ ಕಾಣಿಸಿಕೊಂಡ ಎರಡು ಕಾಡಾನೆ; ಸಾರ್ವಜನಿಕರಲ್ಲಿ ಆತಂಕ

ರಾಜ್ಯಾಧ್ಯಕ್ಷ ನರಸಪ್ಪ ದಂಡೋರ, ಕಾರ್ಯಧ್ಯಕ್ಷ ಫರ್ನಾಂಡಿಸ್ ಹಿಪ್ಪಳಗಾಂವ್, ರಾಜ್ಯ ವಕ್ತಾರ ವೆಂಕಟೇಶ್ ಕತ್ತಿ, ಉಪಾಧ್ಯಕ್ಷ ರಾಮಕೃಷ್ಣ ಎಸ್, ಗಣೇಶ ದುಪ್ಪಲ್, ಬೆಂಗಳೂರು ಜಿಲ್ಲಾಧ್ಯಕ್ಷ ತ್ರಿಲೋಕ ಚಂದ್ರ ಸೇರಿದಂತೆ ರಾಜ್ಯ ಸಮಿತಿ ನಾಯಕರು ಮತ್ತು ಮಹಿಳಾ ಘಟಕದ ನಾಯಕಿಯರು, ಮಂದಕೃಷ್ಣ ಮಾದಿಗ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X