ಮಂಡ್ಯ | ರೈತರ ಜಮೀನಿನಲ್ಲಿ ಕಾಣಿಸಿಕೊಂಡ ಎರಡು ಕಾಡಾನೆ; ಸಾರ್ವಜನಿಕರಲ್ಲಿ ಆತಂಕ

Date:

Advertisements

ಮಂಡ್ಯದ ಕಾವೇರಿ ನಗರ ಸದ್ವಿದ್ಯಾ ಶಾಲೆಯ ಬಳಿ ಎರಡು ಕಾಡಾನೆಗಳು ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಇದೇ ಆನೆಗಳು ಶ್ರೀರಂಗಪಟ್ಟಣ ತಾಲೂಕಿನ ಹಲವು ಹಳ್ಳಿಗಳಲ್ಲಿ ರೈತರ ಜಮೀನಿಗೆ ಲಗ್ಗೆ ಇಟ್ಟು ಬೆಳೆ ಹಾನಿ ಮಾಡಿದ್ದವು. ಕಳೆದ ರಾತ್ರಿ ಮಂಡ್ಯ ನಗರದ ಕಲ್ಲಹಳ್ಳಿ ವಿವಿ ನಗರ ಭಾಗದಲ್ಲಿ ಅಡ್ಡಾಡಿದ್ದವು. ನಾಯಿ ಬೊಗಳುತ್ತಿರುವುದನ್ನು ಕಂಡ ಸ್ಥಳೀಯರು ಗಮನಿಸಿದಾಗ ಆನೆಗಳು ಸಂಚರಿಸುತ್ತಿರುವುದು ಬೆಳಕಿಗೆ ಬಂದಿದೆ.

ಮುಂಜಾನೆ ವೇಳೆಗೆ ಜಾಗ ಬದಲಾಯಿಸಿದ್ದ ಎರಡು ಆನೆಗಳು ಮಂಡ್ಯ, ಕಿರುಗಾವಲು ದಾರಿಯಲ್ಲಿ ಕಾವೇರಿನಗರ 2 ಹಂತದ ಸದ್ವಿದ್ಯಾ ಶಾಲೆ ಬಳಿಯ ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡಿವೆ. ಕಾರಸವಾಡಿ ಗ್ರಾಮದ ರೈತರ ಜಮೀನಿನಲ್ಲಿ ಆನೆಗಳು ನಡೆದಾಡಿರುವ ಹೆಜ್ಜೆ ಗುರುತುಗಳನ್ನು ಪತ್ತೆ ಹಚ್ಚಲಾಗಿದೆ.

Advertisements

ರೈತರ ಜಮೀನಿಗೆ ಲಗ್ಗೆ ಇಟ್ಟು ಅಡ್ಡಾಡುತ್ತಿರುವ ಎರಡು ಆನೆಗಳು ಕಂಡು ಬಂದ ಹಿನ್ನೆಲೆಯಲ್ಲಿ ಜನತೆ ನೋಡಲು ಮುಗಿಬಿದ್ದಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಮುನ್ನೆಚ್ಚರಿಕೆ ವಹಿಸಿ ಆನೆಗಳ ಸಮೀಪ ಜನರು ಸುಳಿಯದಂತೆ ಕಟ್ಟೆಚ್ಚರ ವಹಿಸಿದ್ದಾರೆ.

ಬೀಟ್ ಫಾರೆಸ್ಟರ್ ಲೋಕೇಶ್ ಈ ದಿನ.ಕಾಮ್ ಜೊತೆ ಮಾತನಾಡಿ, “ಮಂಡ್ಯದ ಕಾವೇರಿನಗರ ಬಳಿಯಲ್ಲಿ ಪ್ರತ್ಯಕ್ಷವಾಗಿರುವ ಕಾಡಾನೆಗಳು ಚನ್ನಪಟ್ಟಣದ ಅರಣ್ಯ ಪ್ರದೇಶದಿಂದ ಆಹಾರವನ್ನರಸಿ ಮಂಡ್ಯದವರೆಗೆ ವಲಸೆ ಬಂದಿವೆ. ಪ್ರಸ್ತುತ ಎಲ್ಲ ಕಡೆ ಮಳೆಯಾಗಿ ಅಲ್ಲಿಯೇ ಆಹಾರ ಲಭ್ಯವಿದ್ದರೂ, ವಿಭಿನ್ನವಾದ ಆಹಾರವನ್ನರಸಿ ಕಾಡಾನೆಗಳು ಇಲ್ಲಿಗೆ ಬಂದಿವೆ” ಎಂದು ಮಾಹಿತಿ ನೀಡಿದರು.

“ಆನೆಗಳು ಮುತ್ತತ್ತಿ ಅರಣ್ಯ ಭಾಗದಿಂದ ಮದ್ದೂರು ಮಾರ್ಗವಾಗಿ ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಬಳಿಯಲ್ಲಿ ಕಳೆದ 3 ದಿನಗಳ ಹಿಂದೆ ಪ್ರತ್ಯಕ್ಷವಾಗಿದ್ದವು. ಆನಂತರ ಕಾಳೇನಹಳ್ಳಿ ಬಳಿಯ ಕಸ ವಿಲೇವಾರಿ ಘಟಕದ ಬಳಿ ಪ್ರತ್ಯಕ್ಷವಾಗಿದ್ದು. ಆನಂತರ ಇಂಡುವಾಳು- ಕಿರಗಂದೂರು ಭಾಗದಲ್ಲಿ ಕಾಣಿಸಿಕೊಂಡಿದ್ದವು. ಆನಂತರ ಕಾರಸವಾಡಿ ಮಹದೇಶ್ವರ ದೇವಾಲಯದ ಮಾರ್ಗವಾಗಿ ಕಾವೇರಿ ನಗರದ ಬಳಿಯ ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟಿವೆ” ಎಂದರು.

ಡ್ರೋನ್ ಕ್ಯಾಮೆರಾದ ಮೂಲಕ ಆನೆಗಳ ಚಲನವಲನ ಮೇಲೆ ನಿಗಾ ಇಟ್ಟಿದ್ದು, ಅವುಗಳ ವಲಸೆ ಸಂಬಂಧಿಸಿದಂತೆ ಸುತ್ತಮುತ್ತಲ ಜನರಿಗೆ ಮುನ್ನೇಚ್ಚರಿಕೆ ನೀಡುತ್ತಿದ್ದೇವೆಂದು ಲೋಕೇಶ್ ತಿಳಿಸಿದ್ಧಾರೆ.

ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಸುವುದಕ್ಕಾಗಿ ಹುಣಸೂರಿನಿಂದ 18 ಅಧಿಕಾರಿಗಳನ್ನೊಳಗೊಂಡ ಆನೆ ಕಾರ್ಯಪಡೆಯನ್ನು ಕರೆಸಿಕೊಳ್ಳಲಾಗಿದೆ. ಅದರೊಂದಿಗೆ ಮಂಡ್ಯ, ಮದ್ದೂರು ಹಾಗೂ ಮಳವಳ್ಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X