ನೊಬೆಲ್ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನುಸ್ ಅವರು ನಾಳೆ ಸಂಜೆ 8 ಗಂಟೆಗೆ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಸೇನಾ ಮುಖ್ಯಸ್ಥರು ತಿಳಿಸಿದ್ದಾರೆ.
ಈ ಸಂಬಂಧ ಮೊಹಮ್ಮದ್ ಯೂನಸ್ ಅವರು ಪ್ಯಾರಿಸ್‌ನಿಂದ ನಾಳೆ ಮಧ್ಯಾಹ್ನ ಢಾಕಾಗೆ ವಾಪಸಾಗಲಿದ್ದಾರೆ. 84 ವರ್ಷದ ಮೊಹಮ್ಮದ್ ಯೂನಸ್ ಅವರು ಬಾಂಗ್ಲಾದೇಶದ ಅರ್ಥಶಾಸ್ತ್ರಜ್ಞರಾಗಿದ್ದು, ಬಡವರ್ಗದವರಿಗೆ ಸಣ್ಣ ಸಾಲಗಳನ್ನು ಬ್ಯಾಂಕ್ ಆರಂಭಿಸುವ ಮೂಲಕ ಹೆಚ್ಚು ಖ್ಯಾತಿ ಗಳಿಸಿದ್ದರು.
ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದ ನಂತರ ಪ್ರಧಾನಿ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಆಗಮಿಸಿದ್ದಾರೆ. ದೇಶಾದ್ಯಂತ ಕಳೆದ 2 ದಿನಗಳಿಂದ ನಡೆದ ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
