ವಿದ್ಯಾರ್ಥಿಗಳು ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ನಿರಂತರವಾಗಿ ಅಭ್ಯಾಸ ಮಾಡಿದರೆ ಜೀವನಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಈಶಪ್ಪ ಭೊತೆ ಹೇಳಿದರು.
ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಪ್ರಾಧಿಕಾರದ ಅಧ್ಯಕ್ಷರಾಗಿರು ಈಶಪ್ಪ ಭೊತೆಯವರು ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕಾನೂನು ಅಧ್ಯಯನ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡಿದರು.
ಕಾನೂನು ವಿದ್ಯಾರ್ಥಿಗಳಿಗಿರುವ ಅವಕಾಶ ಮತ್ತು ಸವಾಲುಗಳನ್ನು ಹೇಗೆ ಎದುರಿಸಬೇಕು ಎಂಬ ವಿಚಾರದ ಬಗ್ಗೆ ಮಾತನಾಡುತ್ತ, “ಬಹುತೇಕ ಸಾಧಕರು ಕೃಷಿ ಮತ್ತು ಗ್ರಾಮೀಣ ಭಾಗದವರಾಗಿದ್ದಾರೆ. ಗ್ರಾಮೀಣ ಬದುಕಿನ ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದ ವಿದ್ಯಾರ್ಥಿಗಳು ಎಲ್ಲ ಕ್ಷೇತ್ರಗಳಲ್ಲಿ ಯಶಸ್ವಿ ಸಾಧಿಸಬಹುದು” ಎಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ವಿಷಾಹಾರ ಸೇವಿಸಿ ನಾಲ್ವರ ಸಾವು ಪ್ರಕರಣ; ಗಂಭೀರವಾಗಿದ್ದ ಮತ್ತೋರ್ವ ಯುವತಿ ಸಾವು
ಅಧ್ಯಕ್ಷತೆ ವಹಿಸಿದ್ದ ಡಾ ಮಂಜುಳಾ ಎಸ್ ಆರ್ ಮಾತನಾಡಿ, “ಹೆತ್ತವರು ಮತ್ತು ಗುರು ಹಿರಿಯರಿಗೆ ಗೌರವ ನೀಡುವುದರ ಮುಖಾಂತರ ತಮ್ಮ ವೃತ್ತಿ ಜೀವನ ನಡೆಸಬೇಕು” ಎಂದು ಸಲಹೆ ನೀಡಿದರು.
ಸಹಾಯಕ ಪ್ರಾಧ್ಯಾಪಕ ಡಾ ಶಿವಕುಮಾರ ಎಂ ಎ, ನಾಗರಾಜ ಕಂಕಾನೆ. ಡಾ ಎಂ ಆರ್ ಕಾಂಬಳೆ, ಡಾ ಶಶಿರೇಖಾ ಮಾಳಗಿ ಇದ್ದರು.