ತುಮಕೂರು | ಒಟಿಎಸ್‌ಗೆ ಅವಕಾಶ ನೀಡದೆ ಟ್ರ್ಯಾಕ್ಟರ್ ಹರಾಜು : ಬ್ಯಾಂಕ್ ಕ್ರಮ ವಿರೋಧಿಸಿ ಆ. 12ಕ್ಕೆ ರೈತ ಸಂಘದಿಂದ ಪ್ರತಿಭಟನೆ

Date:

Advertisements

ತುಮಕೂರು ಜಿಲ್ಲೆಯ ತುರುವೇಕೆರೆ ಪಟ್ಟಣದ ಕರ್ನಾಟಕ ಬ್ಯಾಂಕ್‌ನವರು ರೈತರೊಬ್ಬರು ಟ್ರ್ಯಾಕ್ಟರ್ ಸಾಲಕ್ಕಾಗಿ ಅಡವಿಟ್ಟ 6.10 ಗುಂಟೆ ಜಮೀನನ್ನು ಒಟಿಎಸ್‌ಗೆ ಅವಕಾಶ ನೀಡದೆ ಈ ಟೆಂಡರ್ ಮೂಲಕ ಅತಿ ಕಡಿಮೆ ಬೆಲೆಗೆ ಹರಾಜು ಮಾಡಿ ,ರೈತರನ್ನು ಬೀದಿಗೆ ತಳ್ಳಲು ಹೊರಟಿರುವ ಕ್ರಮವನ್ನು ವಿರೋಧಿಸಿ ಆಗಸ್ಟ್ 12ರ ಸೋಮವಾರ ಬ್ಯಾಂಕಿನ ಮುಂದೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.

ತುಮಕೂರು ವಿಜ್ಞಾನ ಕೇಂದ್ರದಲ್ಲಿ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “2005ರಲ್ಲಿ ತುರುವೇಕೆರೆ ತಾಲೂಕು ತಾಳೆಕೆರೆ ಗ್ರಾಮದ ನಾಗರಾಜು ಎಂಬುವವರು ಟ್ರ್ಯಾಕ್ಟರ್‌ಗಾಗಿ ತುರುವೇಕೆರೆ ಕರ್ನಾಟಕ ಬ್ಯಾಂಕಿನಿಂದ 4.50 ಲಕ್ಷದ ಸಾಲ ಪಡೆದಿದ್ದು, ಕಟ್ಟಲು ಸಾಧ್ಯವಾಗಿರಲಿಲ್ಲ. ಈಗ ಬ್ಯಾಂಕಿನವರು ಸಾಲದ ಮೇಲಿನ ಬಡ್ಡಿ, ಚಕ್ರ ಬಡ್ಡಿ ಸೇರಿಸಿ 34.80 ಲಕ್ಷ ರೂ ಬಾಕಿ ತೋರಿಸಿ, ಓಟಿಎಸ್‌ಗೂ ಅವಕಾಶ ನೀಡದೆ, ನ್ಯಾಯಾಲಯದ ಡಿಕ್ರಿ ಪ್ರಕಾರ ಈ ಟೆಂಡರ್ ಮೂಲಕ ಮೂರು ಕೋಟಿಗೆ ಹೋಗುವ ಆಸ್ತಿಯನ್ನು ಕೇವಲ 35.40 ಲಕ್ಷ ರೂಗಳಿಗೆ ಮಾರಾಟ ಮಾಡಿದ್ದಾರೆ. ಕೇಂದ್ರದ ಸರ್ಫೇಸಿ ಕಾಯ್ದೆಯನ್ನು ಮುಂದಿಟ್ಟುಕೊಂಡು ರೈತರ ಭೂಮಿಯನ್ನು ಈ ಹರಾಜು ಮಾಡಿರುವುದು ಸರಿಯಲ್ಲ.ಇದು ಆರ್.ಬಿ.ಐ ನಿಯಮಗಳಿಗೆ ವಿರುದ್ದವಾದ ನಡೆಯಾಗಿದೆ. ಅಲ್ಲದೆ, ರೈತ ವಿರೋಧಿ ನಡೆಯಾಗಿದೆ. ಹಾಗಾಗಿ ಆಗಸ್ಟ್ 12 ರಂದು ಬ್ಯಾಂಕಿನ ಮುಂದೆ ಬೃಹತ್ ಹೋರಾಟ ನಡಸಲಾಗುತ್ತಿದೆ” ಎಂದರು.

ರೈತ ಸಂಘಟನೆ

ರೈತವಿರೋಧಿ ಕರ್ನಾಟಕ ಬ್ಯಾಂಕಿನ ವಿರುದ್ದದ ಈ ಬೃಹತ್ ರೈತ ಹೋರಾಟದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷರಾದ ಚಾಮರಸ ಮಾಲೀ ಪಾಟೀಲ್, ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪುಣಚ್ಚ, ಕಾರ್ಯಾಧ್ಯಕ್ಷರಾದ ಜೆ.ಎಂ.ವೀರಸಂಗಯ್ಯ, ಎ.ಗೋವಿಂದರಾಜು, ಉಪಾಧ್ಯಕ್ಷರುಗಳಾದ ಎ.ಎಂ. ಮಹೇಶಪ್ರಭು, ಶಿವಾನಂದ ಕುಗ್ವೆ, ಕೆ.ಮಲ್ಲಯ್ಯ, ಮಹಿಳಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮಂಜುಳ.ಎಸ್.ಅಕ್ಕಿ,ಮ ಶ್ರೀಮತಿ ನೇತ್ರಾವತಿ ಸೇರಿದಂತೆ ತುಮಕೂರು, ಮಂಡ್ಯ, ಮೈಸೂರು, ರಾಮನಗರ,ಹಾಸನ., ಕೊಡಗು ಜಿಲ್ಲೆಗಳ ಪದಾಧಿಕಾರಿಗಳು ಈ ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಎ.ಗೋವಿಂದರಾಜು ತಿಳಿಸಿದರು.

Advertisements

ಕೇಂದ್ರ ಸರಕಾರ ಜಾರಿಗೆ ತಂದಿರುವ ಸರ್ಫೇಸಿ ಕಾಯ್ದೆಯ ವ್ಯಾಪ್ತಿಯಿಂದ ಕೃಷಿ ಭೂಮಿಯನ್ನು ಕೈಬಿಡುವಂತೆ ಈಗಾಗಲೇ ಹಲವಾರು ಬಾರಿ ಕೇಂದ್ರ ಸರಕಾರದ ವಿರುದ್ದ ಹೋರಾಟ ನಡೆಸಲಾಗುತ್ತಿದೆ. ಆದರೆ ಸರಕಾರ ಕಿವಿಗೊಟ್ಟಿಲ್ಲ. ಅಲ್ಲದೆ ರೈತರ ಸಾಲಮನ್ನಾ ಮಾಡಿ ಎಂದರೂ ಗಮನಹರಿಸುತ್ತಿಲ್ಲ. ಬದಲಿಗೆ 2014ರಿಂದ ಇಲ್ಲಿಯವರೆಗೆ ಉದ್ದಿಮೆದಾರರ 20.40 ಲಕ್ಷ ಕೋಟಿ ರೂ ಸಾಲವನ್ನು ರೈಟ್‌ ಅಫ್ ಹೆಸರಿನಲ್ಲಿ ಮನ್ನಾ ಮಾಡಿ,ತನ್ನ ರೈತವಿರೋಧಿ ನೀತಿಯನ್ನು ತೋರಿಸಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರೈತರು ಸಾಲ ಸುಸ್ತಿಯಾದಂತಹ ಸಂದರ್ಭದಲ್ಲಿ ಎಸ್.ಬಿ.ಐ,ಕರ್ನಾಟಕ ಗ್ರಾಮೀಣ ಬ್ಯಾಂಕ್ ಇನ್ನಿತರೆ ಬ್ಯಾಂಕುಗಳು ಸಾಧ್ಯವಾದಷ್ಟು ರೈತಪರವಾಗಿ ನಡೆದುಕೊಂಡ ಉದಾಹರಣೆಗಳಿವೆ. ಆದರೆ, ಕರ್ನಾಟಕ ಬ್ಯಾಂಕ್ ಮಾತ್ರ ಒಟಿಎಸ್‌ಗೆ ಅವಕಾಶ ನೀಡದೆ, ಬೆಲೆ ಬಾಳುವ ಭೂಮಿಯನ್ನು ಭೂ ಮಾಫಿಯಾ ಜೊತೆ ಸೇರಿ ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಮಾಡಿ, ರೈತರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿದೆ. ಕೂಡಲೇ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್, ರಾಜ್ಯ ಸರಕಾರ ಮಧ್ಯ ಪ್ರವೇಶಿಸಿ ಈ ಹರಾಜು ರದ್ದು ಪಡಿಸಿ, ರೈತರ ಸಾಲದ ಅಸಲು ಕಟ್ಟಿಕೊಂಡು, ಬಡ್ಡಿ ಮನ್ನಾ ಮಾಡುವ ಮೂಲಕ ಜಮೀನು ವಾಪಸ್ ನೀಡಬೇಕು ಎಂಬುದು ನಮ್ಮ ಒಕ್ಕೊರಲ ಬೇಡಿಕೆಯಾಗಿದೆ ಎಂದು ಎ.ಗೋವಿಂದರಾಜು ನುಡಿದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಎಸ್.ಶಂಕರಪ್ಪ,ತಾಲೂಕು ಅಧ್ಯಕ್ಷ ಚಿಕ್ಕಬೋರೇಗೌಡ,ಶ್ರೀನಿವಾಸ್,ತಿಮ್ಮೇಗೌಡ,ಶಬ್ಬೀರ್ ಪಾಷ,ಅಸ್ಲಾಂಪಾಷ,ಮಹೇಶ್,ರಾಮಚಂದ್ರಪ್ಪ, ಈಶ್ವರಣ್ಣ, ರಾಜು.ಡಿ.ಕೆ. ಮತ್ತಿತರರು ಪಾಲ್ಗೊಂಡಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X