ಶಿವಮೊಗ್ಗ | ಕೊಲೆ ಪ್ರಕರಣ; ಎಂಟು ಮಂದಿಗೆ ಜೀವಾವಧಿ ಶಿಕ್ಷೆ

Date:

Advertisements

2021ರಲ್ಲಿ ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಾಂಜಾ ಪೆಡ್ಲರ್‌ ಟ್ವಿಸ್ಟ್ ಕೊಲೆ ಪ್ರಕರಣದ ಎಂಟು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಗಾಂಜಾ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಾನೆಂಬ ಕಾರಣಕ್ಕೆ 2021ರ ಸಮಯದಲ್ಲಿ ಟ್ವಿಸ್ಟ್ ಇರ್ಫಾನ್ ಎಂಬಾತನನ್ನು ಕೊಲೆ ಮಾಡಲಾಗಿತ್ತು. ಶಿವಮೊಗ್ಗದ ತುಂಗಾನಗರ ಠಾಣೆಯ ಇನ್ಸ್‌ಪೆಕ್ಟರ್‌ ದೀಪಕ್ ಹೆಗ್ಡೆಯವರು ಈ ಪ್ರಕರಣದ ತನಿಖೆಗೆ ಕೈಗೊಂಡು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಹೆಚ್ಚುವರಿ 2ನೇ ಜಿಲ್ಲಾ ನ್ಯಾಯಾಲಯ ಎಂಟು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಆರೋಪಿಗಳ ಪೈಕಿ ಒಬ್ಬಾತ ಕೊಲೆಯಾಗಿದ್ದು, ಈ ಕೊಲೆ ಪ್ರಕರಣವನ್ನೂ ಕೂಡಾ ಶಿವಮೊಗ್ಗದ ತುಂಗಾ ನಗರ ಇನ್ಸ್‌ಪೆಕ್ಟರ್‌ ದೀಪಕ್ ಹೆಗಡೆ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದರು. ಎರಡನೇ ಹೆಚ್ಚುವರಿ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶೆ ಪಲ್ಲವಿ ಅವರು ತೀರು ನೀಡಿ ಅದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕರಾಗಿ ಪುಷ್ಪಾರವರು ಸಾಕ್ಷಿಗಳ ವಿಚಾರಣೆ ನಡೆಸಿ ವಾದ ಮಂಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಧಾರವಾಡ | ಕುಂದಗೋಳ ತಾಲೂಕಿನಲ್ಲಿ ಸಮಸ್ಯೆಗಳದ್ದೇ ಕಾರುಬಾರು; ಕ್ಯಾರೇ ಎನ್ನದ ಅಧಿಕಾರಿಗಳು!

ಆರೋಪಿಗಳಾದ ಲತೀಫ್, ಪರ್ವೇಜ್, ಸಯಾದ್ ಜಿಲಾನ್ ,ಜಾಫರ್ ಸಾಧಿಕ್, ಸೈಯದ್, ರಾಜೇಶ್, ಮಹಮದ್ ಶಬಾಜ್, ಶಾಬೀರ್, ಮಹಮದ್ ಯೂಸುಫ್ ತಂಡ ಇರ್ಫಾನನ್ನು ಮರಾಕಾಸ್ತ್ರದಿಂದ ಕೊಲೆ ಮಾಡಿದ್ದರು. ತುಂಗಾ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ದೀಪಕ್ ಹೆಗಡೆಯವರು ತುಂಗಾನಗರ ಠಾಣೆಯಲ್ಲಿ ಸೇವೆ ಸಲ್ಲಿಸಿದಾಗ ವಿವಿಧ ಕೊಲೆ ಪ್ರಕರಣ ಸೇರಿದಂತೆ ತನಿಖೆ ನಡೆಸಿದ ಮೂರು ಪ್ರಕರಣಗಳಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯಾಗಿದ್ದು, ಸದರಿ ಟ್ವಿಸ್ಟ್ ಇರ್ಫಾನ್ ಪ್ರಕರಣದಲ್ಲಿ ಎಂಟು ಮಂದಿಗೆ, ಉಳಿದ ಎರಡು ಪ್ರಕರಣದಲ್ಲಿ ತಲಾ ನಾಲ್ಕು ಮತ್ತು ಇನ್ನೆರೆಡು ಕೊಲೆ ಆರೋಪಿಗಳಿಗೂ ಜೀವಾವಧಿ ಶಿಕ್ಷೆಯಾಗಿದೆ ಎನ್ನಲಾಗಿದೆ.

ವರದಿ : ಲಿಯೋ ಅರೋಜ, ಪತ್ರಕರ್ತರು ತೀರ್ಥಹಳ್ಳಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X