ಅಂಗನವಾಡಿ ಮಕ್ಕಳ ಮೊಟ್ಟೆಗೆ ಕನ್ನ; ಸಿಡಿಪಿಒ ಅಮಾನತಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶ

Date:

Advertisements

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕೇಂದ್ರ 2ರಲ್ಲಿ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ಬಳಿಕ ವಾಪಸ್‌ ಕಸಿದುಕೊಂಡ ಘಟನೆಗೆ ಸಂಬಂಧಿಸಿದಂತೆ ಕ್ಷೇತ್ರ ವ್ಯಾಪ್ತಿಯ ಕನಕಗಿರಿ ವಲಯದ ಸಿಡಿಪಿಒ ಅವರನ್ನೂ ಅಮಾನತು ಮಾಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆದೇಶಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಹೆಬ್ಬಾಳಕರ್‌, ಈಗಾಗಲೇ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯನ್ನು ಗೌರವಧನ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

“ಅಂಗನವಾಡಿಯಲ್ಲಿ ಮಕ್ಕಳ‌ ತಟ್ಟೆಯಿಂದ ಮೊಟ್ಟೆ ಕಸಿದ ಪ್ರಕರಣಕ್ಕೆ ಸಂಬಂಧಿಸಿ ಸಿಡಿಪಿಒ ವಿರೂಪಾಕ್ಷಿ ಅವರನ್ನು ಅಮಾನತು ಮಾಡಲು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಲಾಗಿದೆ. ಕೊಪ್ಪಳ ಜಿಲ್ಲಾ ಉಪ ನಿರ್ದೇಶಕರಿಗೂ ನೋಟಿಸ್ ನೀಡಲಾಗುವುದು” ಎಂದು ಹೇಳಿದ್ದಾರೆ.

Advertisements

“ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇಬೇಕು. ಕೆಳ ಹಂತದಿಂದ ಇಲಾಖೆಯಲ್ಲಿ‌ ಸುಧಾರಣೆ ತರಬೇಕು ಅಂತ ಕಷ್ಟ ಪಡುತ್ತಿದ್ದೇನೆ. ಪೌಷ್ಟಿಕ ಆಹಾರ, ಗುಣಮಟ್ಟದ ಶಿಕ್ಷಣ ಅಂಗನವಾಡಿಯ ಮೂಲ‌ ಉದ್ದೇಶ. ಆದರೆ, ಬಡಮಕ್ಕಳಿಗೆ ಅನ್ಯಾಯ ಆಗಲು ಬಿಡುವುದಿಲ್ಲ”ಎಂದು ತಿಳಿಸಿದ್ದಾರೆ.

“ಮ‌ಕ್ಕಳಿಗೆ ಊಟ ಬಡಿಸುವ ವೇಳೆ ಕಡ್ಡಾಯವಾಗಿ ವಿಡಿಯೊ ಚಿತ್ರೀಕರಣ ಮಾಡಬೇಕು ಎಂದು ಸೂಚಿಸಲಾಗಿತ್ತು. ಬಳಿಕ ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ವ್ಯಾಟ್ಸ್‌ ಆ್ಯಪ್‌ ಮೂಲಕ ಇಲಾಖೆಯ ಗ್ರೂಪ್‌ಗಳಲ್ಲಿ ವಿಡಿಯೊ ಅಪ್‌ಲೋಡ್‌ ಆಗಬೇಕು ಎಂದು ಹೇಳಿದ್ದೆವು. ಇದೇ ರೀತಿಯ ಪ್ರಕರಣ ಕಳೆದ ಬಾರಿಯೂ ಬಯಲಾಗಿತ್ತು. ನಂತರ ವಿಡಿಯೊ ಚಿತ್ರೀಕರಣ ಕಡ್ಡಾಯ ಮಾಡಿದ್ದೆವು. ಹಾಗೆ ಮಾಡಿದ್ದರಿಂದಲೇ ಈಗ ಪ್ರಕರಣ ಬೆಳಕಿಗೆ ಬಂದಿದೆ” ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X