ಕೋಲಾರ | ದೋಸೆ ಸೇವಿಸಿ 20 ಮಂದಿ ವಿದ್ಯಾರ್ಥಿಗಳು ಅಸ್ವಸ್ಥ; ಅಡುಗೆ ನೌಕರ ನರಸಿಂಹಪ್ಪ ಅಮಾನತು

Date:

Advertisements

ದೋಸೆ ಸೇವಿಸಿ 20 ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಡುಗೆ ನೌಕರ ನರಸಿಂಹಪ್ಪ ಎಂಬುವವರನ್ನು ಅಮಾನತು ಮಾಡಲಾಗಿದೆ.

ಕೋಲಾರ ತಾಲೂಕಿನ ವೇಮಗಲ್‌ ಹೋಬಳಿ ಅಮ್ಮನಲ್ಲೂರು ಗ್ರಾಮದ ಡಾ. ಬಿ ಆರ್ ಅಂಬೇಡ್ಕರ್‌ ಸಾರ್ವಜನಿಕ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕಳೆದ ಶುಕ್ರವಾರ ಬೆಳಗ್ಗೆ ದೋಸೆ, ಚಟ್ನಿ ಸೇವಿಸಿ ಶಾಲೆಗೆ ತೆರಳಿದ್ದ ಸುಮಾರು 20 ಮಂದಿ ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು, ವಾಂತಿ ಕಾಣಿಸಿಕೊಂಡಿತ್ತು. ಕೂಡಲೇ ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೊತ್ತೂರು ೨
ಶಾಸಕ ಕೊತ್ತೂರು ಮಂಜುನಾಥ್‌ ಅಮ್ಮನಲ್ಲೂರು ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಎಂ.ಎಲ್.ಸಿ. ಅನಿಲ್‌ ಕುಮಾರ್‌ ಹಾಗೂ ಇತರರಿದ್ದರು.

“ಹಾಸ್ಟೆಲ್‌ ವಾರ್ಡನ್‌ ಗುರುಶಾಂತಪ್ಪ ರಜೆಯಲ್ಲಿದ್ದ ಕಾರಣ ನಿಲಯದ ಜವಾಬ್ದಾರಿವಹಿಸಿಕೊಂಡಿದ್ದ ನರಸಿಂಹಪ್ಪ ಎರಡು ದಿನದ ಅನ್ನವನ್ನು ದೋಸೆಗೆ ಬಳಸಿದ್ದಾರೆ. ಹಾಸ್ಟೆಲ್‌ನಲ್ಲಿ ಸ್ವಚ್ಛತೆಯಿಲ್ಲ, ಕುಡಿಯಲು ಶುದ್ಧ ನೀರಿಲ್ಲ. ನರಸಿಂಹಪ್ಪ ನಮ್ಮನ್ನು ಬೈಯುವುದಲ್ಲದೆ, ನಮ್ಮಿಂದ ಇತರೆ ಕೆಲಸಗಳನ್ನು ಮಾಡಿಸಿಕೊಳ್ಳುತ್ತಾರೆ” ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಮುಡಾ ಪ್ರಕರಣ | ಪಾದಯಾತ್ರೆ ಫ್ಲಾಪ್‌ ಶೋ; ನಡೆಯದ ಅಕ್ರಮಕ್ಕೆ ಬಿಜೆಪಿ-ರಾಜ್ಯಪಾಲರ ಅತ್ಯುತ್ಸಾಹ

ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸನ್‌ ಆಯುಕ್ತರಿಗೆ ಪ್ರಕರಣದ ವರದಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರಾಕೇಶ್‌ ಕುಮಾರ್‌ ಕತ್ಯವ್ಯಲೋಪದ ಆಧಾರದಲ್ಲಿ ಅಡುಗೆ ನೌಕರ ನರಸಿಂಹಪ್ಪ ಅವರನ್ನು ಅಮಾನತು ಮಾಡಿ ಭಾನುವಾರ ಆದೇಶ ಹೊರಡಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X