ಬಿದರಕುಂದಿ ಆದರ್ಶ ವಿದ್ಯಾಲಯದಲ್ಲಿ 2024-25ನೇ ಸಾಲಿನ ತರಗತಿ ದಾಖಲಾತಿಗಾಗಿ ಆರ್‌ಎಂಎಸ್ಎ ಶಾಲೆಯಲ್ಲಿ ಆಗಸ್ಟ್ 13, 14ರಂದು 4ನೇ ಸುತ್ತಿನ ಕೌನ್ಸೆಲಿಂಗ್ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದೆ.
ಬಿಇಒ ಬಿ ಎಸ್ ಸಾವಳಗಿ ಹಾಗೂ ಆರ್‌ಎಂಎಸ್ಎ ಶಾಲೆಯ ಮುಖ್ಯ ಶಿಕ್ಷಕ ಸಂಗಮೇಶ ಸಜ್ಜನ ಪ್ರಕಟಣೆಯಲ್ಲಿ ತಿಳಿಸಿದ್ದು, “ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿ ದಾಖಲಾತಿಗಾಗಿ ಮೀಸಲಾತಿವಾರು ಖಾಲಿ ಇರುವ ಸ್ಥಾನಗಳಿಗೆ ಈಗಾಗಲೇ 1, 2, 3ನೇ ಸುತ್ತಿನ ದಾಖಲಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಳಿದ ಆರು ಸ್ಥಾನಗಳಿಗೆ 1:20 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ” ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹ; ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಕೃತಿ ದಹನ
“ಆಗಸ್ಟ್ 13ರ ಬೆಳಿಗ್ಗೆ 10ಕ್ಕೆ ಒಂದು ಸಾಮಾನ್ಯ ಸ್ಥಾನಕ್ಕೆ ಹಾಗೂ ಆಗಸ್ಟ್ 14ರ ಬೆಳಿಗ್ಗೆ 10ಕ್ಕೆ ಐದು ಮೀಸಲಾತಿ ವರ್ಗದ ಸ್ಥಾನಗಳಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಗುವುದು” ಎಂದು ತಿಳಿಸಿದ್ದಾರೆ.