ತುಂಗಭದ್ರ ಜಲಾಶಯದ 19ನೇ ಗೇಟ್‌ನ ಚೈನ್‌ ಮುರಿತ; ಅಪಾರ ಪ್ರಮಾಣದ ನೀರು ಪೋಲು, ಆತಂಕದಲ್ಲಿ ಜನತೆ

Date:

Advertisements

ಮಳೆಯ ಅಬ್ಬರಕ್ಕೆ ಭರ್ತಿಯಾಗಿರುವ ತುಂಗಭದ್ರಾ ಜಲಾಶಯದ 19ನೇ ಗೇಟ್‌ನ ಚೈನ್‌ ಲಿಂಕ್ ಮುರಿದಿದ್ದು, ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಆತಂಕ ಉಂಟಾಗಿದೆ. ಬೆಂಗಳೂರು, ಚೆನ್ನೈ, ಹೈದರಾಬಾದಿನಿಂದ ತಜ್ಞರ ತಂಡ ಕ್ರೆಸ್ಟ್ ಗೇಟ್ ದುರಸ್ತಿ ಕಾರ್ಯಕ್ಕಾಗಿ ಜಲಾಶಯಕ್ಕೆ ಭೇಟಿ ನೀಡಲಿದೆ.

ಕೊಪ್ಪಳ ತಾಲೂಕಿನ ಮುನಿರಾಬಾದ್‌ನಲ್ಲಿ ತುಂಗಭದ್ರಾ ನದಿಗೆ ಅಡ್ಡಲಾಗಿ ಜಲಾಶಯ ನಿರ್ಮಾಣ ಮಾಡಲಾಗಿದೆ. ಶನಿವಾರ ಮಧ್ಯರಾತ್ರಿ ಜಲಾಶಯದ ಕ್ರೆಸ್ಟ್‌ ಗೇಟ್ ನಂಬರ್ 19ರ ಚೈನ್ ಲಿಂಕ್ ಮುರಿದು ಹೋಗಿದೆ. ಒಂದೇ ಗೇಟ್‌ ಮೇಲೆ ಒತ್ತಡ ಹೆಚ್ಚಾಗಿ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.

ಗೇಟ್ ಮುರಿದ ಪರಿಣಾಮ ನೀರು ರಭಸವಾಗಿ ನುಗ್ಗುತ್ತಿದ್ದು, ಜಲಾಶಯದ ಹೊರ ಹರಿವು 70 ರಿಂದ 1 ಲಕ್ಷ ಕ್ಯುಸೆಕ್‌ಗೆ ಏರಿಕೆಯಾಗಿದೆ. ಪೂರ್ಣ ಭರ್ತಿಯಾಗಿರುವ ಜಲಾಶಯದ ಒಂದು ಕ್ರೆಸ್ಟ್‌ ಗೇಟ್‌ನ ಚೈನ್ ಲಿಂಕ್ ಮುರಿದಿದ್ದು, ತುಂಗಭದ್ರಾ ನದಿ ಪಾತ್ರದ ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ.

Advertisements

ಸದ್ಯ 105 ಟಿಎಂಸಿ ಸಾಮರ್ಥ್ಯದ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಗೇಟ್ ಸಂಖ್ಯೆ 19 ರಿಂದ 35 ರಿಂದ 45 ಸಾವಿರ ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ. ಉಳಿದ ಗೇಟ್‌ಗಳಿಂದ ಸುಮಾರು 75 ಸಾವಿರ ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದರೆ ಮಾತ್ರವೇ ಗೇಟ್‌ಗೆ ಏನಾಗಿದೆ ಎಂಬುದನ್ನು ನೋಡುವುದಕ್ಕೆ ಸಾಧ್ಯ. ಆದ್ದರಿಂದ ನದಿ ಪಾತ್ರದ ಜನರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ದುರಸ್ತಿಗೆ ಜಲಾಶಯದ ಅರ್ಧ ನೀರು ಖಾಲಿಯಾಗಬೇಕು

ದುರಸ್ತಿ ಮಾಡಬೇಕಾದರೇ ಜಲಾಶಯದಲ್ಲಿನ 60 ಟಿಎಂಸಿ ನೀರು ಖಾಲಿ ಮಾಡಬೇಕಾಗುತ್ತದೆ. ಜಲಾಶಯದ ಮೂಲ ವಿನ್ಯಾಸದ ಪ್ರತಿ ತರಿಸಿಕೊಳ್ಳಲಾಗಿದ್ದು, ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ತೀರ್ಮಾನಿಸಲಾಗುತ್ತದೆ. ನೀರಿನ ಹೊರ ಹರಿವಿನ ಪ್ರಮಾಣವನ್ನು 1 ರಿಂದ 2 ಲಕ್ಷ ಕ್ಯುಸೆಕ್‌ಗೆ ಏರಿಸಬೇಕು. ನೀರು ಕಡಿಮೆಯಾದ ಬಳಿಕ ತುಂಡಾದ ಚೈನ್‌ ಲಿಂಕ್‌ ಸರಿಪಡಿಸಲು ಸಾಧ್ಯವಾಗುತ್ತದೆ. ದುರಸ್ತಿಗೆ ಅಗತ್ಯವಾಗಿ ಬೇಕಾದ ನೀರು ಕಡಿಮೆ ಮಾಡಲು ಕನಿಷ್ಠ 3- 4 ದಿನವಾದರೂ ಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಪ್ಪಳ-ಹೊಸಪೇಟೆ ಗಡಿಭಾಗದಲ್ಲಿರುವ ಜಲಾಶಯದ ಕರ್ನಾಟಕದ ವಿವಿಧ ಜಿಲ್ಲೆಗಳು, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಕ್ಕೆ ಜೀವನಾಡಿಯಾಗಿದೆ. ಮಲೆನಾಡು ಭಾಗದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ತುಂಗ ಮತ್ತು ಭದ್ರಾ ನದಿಗಳು ಮೈದುಂಬಿ ಹರಿದಿವೆ. ಆದ್ದರಿಂದ ಜಲಾಶಯ ಜುಲೈನಲ್ಲಿಯೇ ಸಂಪೂರ್ಣ ಭರ್ತಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭರ್ಜಿಯ ಕೊನೆಗೆ ಪ್ರೀತಿಯ ಮುಳ್ಳು ಚುಚ್ಚಿದ ತಾಯಂದಿರು – ಆಲಿಸಲಿ ‘ಮಕ್ಕಳು’

ತುಂಗಭದ್ರಾ ಜಲಾಶಯದ ಪೂರ್ಣ ಮಟ್ಟ 1633 ಅಡಿಗಳು. ಸದ್ಯದ ಮಾಹಿತಿಯಂತೆ ಜಲಾಶಯದಲ್ಲಿ 1632 ಅಡಿಗಳ ನೀರಿನ ಸಂಗ್ರಹವಿದೆ. 105 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯವಿರುವ ಜಲಾಶಯದಲ್ಲಿ 10 ಟಿಎಂಸಿ ಅಡಿ ನೀರಿದೆ. ಜಲಾಶಯಕ್ಕೆ ಒಳಹರಿವು 45,086 ಕ್ಯುಸೆಕ್ ಇದೆ.

ಸಿಎಂ, ಡಿಸಿಎಂಗೆ ಮಾಹಿತಿ

ಜಲಾಶಯಕ್ಕೆ ಭಾನುವಾರ ಬೆಳಗಿನ ಜಾವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘19ನೇ ಕ್ರಸ್ಟ್ ಗೇಟ್ ಚೈನ್ ಲಿಂಕ್ ಮುರಿದಿರುವ ಕಾರಣ ಅನಿವಾರ್ಯವಾಗಿ ನೀರು ಹೊರಬಿಡಬೇಕಾಗಿದೆ. ಈ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಸದ್ಯದ ಮಟ್ಟಿಗೆ 60ರಿಂದ 65 ಟಿಎಂಸಿ ಅಡಿಗೂ ಹೆಚ್ಚು ನೀರು ಖಾಲಿ ಮಾಡಬೇಕಾಗುತ್ತದೆ. ಕನಿಷ್ಠ 20 ಅಡಿ ನೀರು ಖಾಲಿಯಾದರೆ ಮಾತ್ರ ನಿಖರವಾಗಿ ಸಮಸ್ಯೆ ಏನಾಗಿದೆ ಎನ್ನುವುದು ಗೊತ್ತಾಗುತ್ತದೆ’ ಎಂದು ತಿಳಿಸಿದರು.

‘ಆಣೆಕಟ್ಟು ನಿರ್ಮಿಸಿದ ವಿನ್ಯಾಸವನ್ನು ತರಿಸಿಕೊಳ್ಳಲಾಗಿದ್ದು, ನೀರಿನ ರಭಸ ಹೆಚ್ಚಿರುವ ಕಾರಣ ಕೆಳಗಡೆ ಇಳಿದು ಕೆಲಸಮಾಡಲು ಆಗುವುದಿಲ್ಲ. ಸದ್ಯಕ್ಕೆ ಒಂದು ಲಕ್ಷ ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. ನೀರು ಹೊರಬಿಡುವ ಪ್ರಮಾಣ 2.50 ಲಕ್ಷ ಕ್ಯುಸೆಕ್ ದಾಟಿದರೆ ಮಾತ್ರ ಜನರಿಗೆ ತೊಂದರೆಯಾಗುತ್ತದೆ. ಈ ಘಟನೆ ಬಗ್ಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರಿಗೆ ಮಾಹಿತಿ ನೀಡಲಾಗಿದೆ’ ಎಂದರು.

ಕಡಿಮೆ ಸಮಯದಲ್ಲಿ ಸಮಸ್ಯೆ ಪರಿಹರಿಸಲು ಬೆಂಗಳೂರು, ಹೈದರಾಬಾದ್, ಚೆನ್ನೈನಿಂದ ತಜ್ಞರ ತಂಡ ಬರಲಿದೆ. ಬಳಿಕ ಏನು ಮಾಡಬೇಕು ಎನ್ನುವುದನ್ನು ನಿರ್ಧರಿಸಲಾಗುವುದು ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ : ‘ಎಕೆ, ಎಡಿ, ಎಎ’ ಸಮಸ್ಯೆ ಜೀವಂತ ಉಳಿಸಿದ ರಾಜ್ಯ ಸರ್ಕಾರ

'ಸಿ' ಮತ್ತು 'ಡಿ' ಗ್ರೂಪ್ ನೌಕರರು ಹೆಚ್ಚಿನ ಸಂಖ್ಯೆಯಲ್ಲಿದ್ದರೂ ಇತರೆ ಅಸ್ಪೃಶ್ಯ...

ಧರ್ಮಸ್ಥಳ ಸುತ್ತ ವ್ಯವಸ್ಥಿತ ಷಡ್ಯಂತ್ರ, ಹಿಂದಿನ ಶಕ್ತಿಗಳನ್ನು ಎಸ್‌ಐಟಿ ಪತ್ತೆ ಮಾಡಲಿ: ಸುನಿಲ್‍ ಕುಮಾರ್

ಧರ್ಮಸ್ಥಳಕ್ಕೆ ಸಂಬಂಧಿಸಿ ಎಸ್‍ಐಟಿ ತನಿಖೆಯಲ್ಲಿ ಬಿಜೆಪಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್...

Download Eedina App Android / iOS

X