‌ದಾವಣಗೆರೆ | ಕೃಷಿ ಬಗ್ಗೆ ಆಸಕ್ತಿ, ಸಮಗ್ರ ಕೃಷಿಯತ್ತ ರೈತರ ಗಮನವಿರಲಿ: ಡಾ ಸುರೇಶ್ ಇಟ್ನಾಳ್

Date:

Advertisements

ರೈತರ ಸಮಸ್ಯೆಗಳಿಗೆ ಮತ್ತು ಕೃಷಿಗೆ ಸಂಬಂಧಿಸಿದಂತೆ ಮಾಹಿತಿ, ತರಬೇತಿ ನೀಡುವ ಮೂಲಕ ಕೃಷಿಯ ಜ್ಞಾನ ಮೂಡಿಸುವ ಕೃಷಿ ವಿಜ್ಞಾನ ಕೇಂದ್ರಗಳು ಜ್ಞಾನದ ಭಂಡಾರಗಳಾಗಿವೆ ಎಂದು ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ ಸುರೇಶ್ ಇಟ್ನಾಳ್ ಅಭಿಪ್ರಾಯ ವ್ಯಕ್ತಪಡಿಸಿದರು.

ದಾವಣಗೆರೆ ನಗರದ ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರ(ಟಿಕೆವಿಕೆ)ದಲ್ಲಿ ಕೃಷಿ ವಿಜ್ಞಾನ ಕೇಂದ್ರಗಳ ಸುವರ್ಣ ಮಹೋತ್ಸವದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

“ಕೃಷಿ ವಿಜ್ಞಾನ ಕೇಂದ್ರಗಳು ಕೃಷಿ ಪೂರಕ ಕೆಲಸವನ್ನು ಮಾಡುವ ಜತೆಗೆ ರೈತರ ಉತ್ಪನ್ನಗಳಿಗೆ ಮೌಲ್ಯವರ್ಧನೆಯನ್ನೂ ಮಾಡುತ್ತ ಬಂದಿವೆ. ಬಹಳಷ್ಟು ರೈತರು ಕೇಂದ್ರಗಳಿಂದ ಮಾಹಿತಿ ಹಾಗೂ ತರಬೇತಿ ಪಡೆದು ಅದನ್ನು ತಮ್ಮ ಭೂಮಿಯಲ್ಲಿ ಅನುಷ್ಠಾನಕ್ಕೆ ತಂದು ಯಶಸ್ಸನ್ನು ಕಂಡಿದ್ದಾರೆ. ಕೆಲ ರೈತರು ಕೋಟ್ಯಾಧಿಪತಿಗಳಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಯುವಜನಾಂಗ ಕೃಷಿ ಬಗ್ಗೆ ಆಸಕ್ತಿ ಕಳೆದುಕೊಳ್ಳುತ್ತಿರುವುದು ಸರಿಯಲ್ಲ. ಕೃಷಿ ಜತೆಗೆ ಇತರೆ ಉಪಕಸುಬುಗಳನ್ನೂ ನಡೆಸಬೇಕು. ಯಾವುದೇ ಕಾರಣಕ್ಕೂ ನಮ್ಮ ಮೂಲ ಕೃಷಿಯನ್ನು ಮರೆಯಬಾರದು. ಕೃಷಿಯ ಜತೆ ಜತೆಗೆ, ಮೀನುಗಾರಿಕೆ, ಹೈನುಗಾರಿಕೆಗಳನ್ನು ಮಾಡುವ ಮೂಲಕ ಆದಾಯ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಸಮಗ್ರ ಕೃಷಿಯತ್ತ ರೈತರು ಹೆಜ್ಜೆ ಹಾಕಬೇಕು” ಎಂದು ಸಲಹೆ ನೀಡಿದರು.

Advertisements

“ನಗರ ಪ್ರದೇಶದಲ್ಲಿ ತಾರಸಿ ತೋಟ ಮಾಡುವ ಮೂಲಕ ಮತ್ತು ಮನೆಯ ಮುಂದೆ ಇರುವ ಜಾಗದಲ್ಲಿಯೇ ನಮಗೆ ಅವಶ್ಯಕವಿರುವಷ್ಟು ತರಕಾರಿ, ಸೊಪ್ಪುಗಳನ್ನು ಬೆಳೆಸುವ ಪರಿಪಾಠ ಬೆಳೆಸಿಕೊಳ್ಳಬೇಕು” ಎಂದು ಕರೆ ನೀಡಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಕೇಂದ್ರದ ತೋಟಗಾರಿಕೆ ತಜ್ಞ ಎಂ ಜಿ ಬಸವನಗೌಡ, “ದೇಶದಲ್ಲಿ ಮೊದಲ ಕೃಷಿ ವಿಜ್ಞಾನ ಕೇಂದ್ರವು 1974ರಲ್ಲಿ ಪಾಂಡಿಚೇರಿಯಲ್ಲಿ ಪ್ರಾರಂಭವಾಗಿ ಪ್ರಸ್ತುತ ದೇಶದಲ್ಲಿ 731 ಕೆವಿಕೆಗಳು ಕಾರ್ಯನಿರ್ವಹಿಸುತ್ತಿವೆ. ಕೇಂದ್ರಗಳ ಮೂಲಕ ರೈತರಿಗೆ ಹೊಸ ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿಯನ್ನು ನೀಡಲಾಗುತ್ತಿದ್ದು, ಕೇಂದ್ರವು ರೈತರಿಗೆ ಕೃಷಿಗೆ ಪೂರಕವಾಗಿ, ಬೆನ್ನೆಲುಬಾಗಿ ನಿಂತಿದೆ. ದಾವಣಗೆರೆ ಕೃಷಿ ವಿಜ್ಞಾನ ಕೇಂದ್ರಕ್ಕಾಗಿ ಸಿರಿಗೆರೆ ಮಠ ಭೂಮಿ ನೀಡಿದ್ದು, ಕಳೆದ ಎರಡು ದಶಕಗಳಿಂದ ಜಿಲ್ಲೆಯಲ್ಲಿ ಕ್ರಾಂತಿಯನ್ನೇ ಮಾಡುತ್ತಿದೆ. ಕೇಂದ್ರದ ಕಾರ್ಯಚಟುವಟಿಕೆ ಗುರುತಿಸಿ ಮೂರು ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರದಾನಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಿರಿಗೆರೆಯ ತರಳಬಾಳು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸದಸ್ಯ ಹಾಗೂ ರೈತ ಎಚ್ ಬಿ ಮುರುಗೇಶಪ್ಪ ಮಾತನಾಡಿ, “ಎರಡು ದಶಕಗಳನ್ನು ಪೂರೈಸಿರುವ ದಾವಣಗೆರೆ ಕೆವಿಕೆ ಪ್ರೌಢಾವಸ್ಥೆಯನ್ನು ತಲುಪಿದೆ. ಸುಮಾರು 500ಕ್ಕೂ ಅಧಿಕ ಹಳ್ಳಿಗಳ ಸಂಪರ್ಕ ಇಟ್ಟುಕೊಂಡಿದೆ. ಕೃಷಿ ವಿಜ್ಞಾನ ಕೇಂದ್ರವು ರೈತರಿಗೆ ಮಾಹಿತಿ, ತಾಂತ್ರಿಕ ತರಬೇತಿಗಳನ್ನು ನೀಡಿ, ಶಕ್ತಿ ತುಂಬುತ್ತಿದೆ. ನಾನೂ ಕೂಡ ಕೆವಿಕೆ ಸಹಕಾರದಿಂದ ಅಡಿಕೆ, ಶ್ರೀಗಂಧ, ದಾಳಿಂಬೆ ಇತ್ಯಾದಿಗಳನ್ನು ಬೆಳೆಯುತ್ತಿದ್ದು, ಉತ್ತಮ ಆದಾಯ ಪಡೆಯುತ್ತಿದ್ದೇನೆ” ಎಂದರು.

ಮತ್ತೋರ್ವ ಅಥಿತಿ ತರಳಬಾಳು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸದಸ್ಯ ರೈತ ಇಟಗಿ ಶಿವಣ್ಣ ಮಾತನಾಡಿ, “ರೈತರನ್ನು ದೇಶದ ಬೆನ್ನೆಲುಬು ಎನ್ನುತ್ತಾರೆ. ಕೃಷಿ ಪ್ರಧಾನ ದೇಶ ನಮ್ಮದು ಎನ್ನುತ್ತೇವೆ. ಆದರೆ ಮಕ್ಕಳನ್ನು ರೈತರನ್ನಾಗಿಸದೆ ಎಂಜಿನಿಯರ್ ಅಥವಾ ಡಾಕ್ಟರ್ ಮಾಡಲು ಹೊರಟಿದ್ದೇವೆ. ರೈತಾಪಿ ಜನರೂ ಕೂಡ ಇದೇ ಹಾದಿಯಲ್ಲಿ ಸಾಗಿದ್ದಾರೆ. ಜನರು ಮತ್ತೆ ಹಳ್ಳಿಗಳತ್ತ ಮರಳಬೇಕಿದೆ. ರೈತರ ಸ್ಥಿತಿ ತೀರಾ ಹದಗೆಟ್ಟಿದ್ದು, ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ವೈಜ್ಞಾನಿಕವಾಗಿ ಕೃಷಿ ಮಾಡಬೇಕು. ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಬೇಕಿದೆ” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸುಗಮ ಸಂಚಾರಕ್ಕೆ ಜೆಸಿಬಿ ಕಾರ್ಯಾಚರಣೆ; ಅಂಗಡಿಗಳ ತೆರವು

ಕೇಂದ್ರದ ಮುಖ್ಯಸ್ಥ ಡಾ. ಟಿ ಎನ್ ದೇವರಾಜ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತರಳಬಾಳು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸದಸ್ಯ ಕೆ ಜಿ ಈಶ್ವರಪ್ಪ, ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಜಿ ಸಿ ರಾಘವೇಂದ್ರ, ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ. ಚಂದ್ರಶೇಖರ್ ಸುಂಕದ್, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಅಣ್ಣಪ್ಪ ಸ್ವಾಮಿ, ಕತ್ತಲಗೆರೆ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ. ಆನಂದ್ ಕುಮಾರ್, ಹನುಮನಹಟ್ಟಿ ಕೆವಿಕೆ ಮುಖ್ಯಸ್ಥ ಡಾ. ಗುರುಪ್ರಸಾದ್, ರಾಘವೇಂದ್ರ ಹೈಟೆಕ್ ಪಿಯುಸಿ ಕಾಲೇಜು ಪ್ರಾಂಶುಪಾಲ ಡಾ. ಎಂ ಆರ್ ಅನಿಲ್ ಕುಮಾರ್, ಕೆವಿಕೆ ವಿಷಯ ತಜ್ಞ ಎಚ್ ಎಂ ಸಣ್ಣಗೌಡ್ರು, ಬಿ ಒ ಮಲ್ಲಿಕಾರ್ಜುನ್, ಡಾ. ಜಿ ಕೆ ಜಯದೇವಪ್ಪ ಹಾಗೂ ಡಾ. ಟಿ ಜಿ ಅವಿನಾಶ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ದಾವಣಗೆರೆ | ಶಾಲೆಗೆ ರಸ್ತೆ ಅಭಿವೃದ್ಧಿಪಡಿಸಲು ಆರನೇ ತರಗತಿ ವಿದ್ಯಾರ್ಥಿನಿ ಗ್ರಾ.ಪಂ. ಮುಂದೆ ಧರಣಿ

ಶಾಲೆಗೆ ಹೋಗುವ ರಸ್ತೆ ಸರಿಪಡಿಸಿ ಅಭಿವೃದ್ಧಿಪಡಿಸಲು ಒತ್ತಾಯಿಸಿ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X