ಆಟೋ-ಬಸ್ ಮಧ್ಯೆ ಢಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ತಾಲೂಕಿನ ಅತಿವಾಳ ಕ್ರಾಸ್ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ.
ಅಪಘಾತದಲ್ಲಿ ಹೊನ್ನೆಕೇರಿ ತಾಂಡಾದ ನಿವಾಸಿ ಅನಿತಾಬಾಯಿ (45) ಮತ್ತು ಆಕೆಯ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಬೀದರ್- ಭಾಲ್ಕಿ ಮುಖ್ಯ ಹೆದ್ದಾರಿ 50ರಲ್ಲಿ ಮಹಾರಾಷ್ಟ್ರದ ಸಾರಿಗೆ ಬಸ್ ಬೀದರ್‌ದಿಂದ ಲಾತೂರ್ ಕಡೆಗೆ ತೆರಳಿತ್ತು. ಈ ವೇಳೆ ದುರ್ಘಟನೆ ಸಂಭವಿಸಿದ್ದು, ಢಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ.
ಜನವಾಡ ಠಾಣೆಯ ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.