ಮುಧೋಳ | ಘಟಪ್ರಭಾ ಪ್ರವಾಹದಿಂದಾದ ಹಾನಿಗೆ ಸೂಕ್ತ ಪರಿಹಾರಕ್ಕೆ ಕ್ರಮ: ಸಚಿವ ಆರ್ ಬಿ ತಿಮ್ಮಾಪುರ

Date:

Advertisements

ಘಟಪ್ರಭಾ ಪ್ರವಾಹದಿಂದ ಉಂಟಾಗಿರುವ ಹಾನಿಗೆ ಸೂಕ್ತ ಪರಿಹಾರ ಒದಗಿಸಲು ನಾನೂ ಸಹ ನಿರಂತರವಾಗಿ ಶ್ರಮಿಸುತ್ತಿದ್ದು, ರೈತರು ಹಾಗೂ ಸಂತ್ರಸ್ತರು ಸರ್ಕಾರದೊಂದಿಗೆ ಸಹಕಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಮನವಿ ಮಾಡಿಕೊಂಡಿದ್ದಾರೆ.

ಸರ್ಕಾರದ ಮಟ್ಟದಲ್ಲಿ ಸಂತ್ರಸ್ತರಿಗೆ ಹಾಗೂ ಬೆಳೆಹಾನಿಯಾದ ರೆೈತರಿಗೆ ಎನ್‌ಡಿಆರ್‌ ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ಅನ್ವಯ ಪರಿಹಾರ ಒದಗಿಸುವ ಸಲುವಾಗಿ ಹಾಗೂ ಪರಿಹಾರ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸುವ ಸಲುವಾಗಿ ಆಗಸ್ಟ್ 6ರಂದು ನಗರದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ರೆೈತರು, ಸಂತ್ರಸ್ತರು ಹಾಗೂ ಅಧಿ ಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ರೆೈತರ ಬೇಡಿಕೆ ಆಲಿಸಲು ಮುಖ್ಯಮಂತ್ರಿಗಳನ್ನು ಮುಧೋಳ ನಗರಕ್ಕೆ ಕರೆತರಲು ಸಮಯ ಕೇಳಲಾಗುವುದು ಎಂದು ಭರವಸೆ ನೀಡಿದ್ದೆ. ಈ ಕಾರ್ಯದಲ್ಲಿ ನಾನು ನಿರತನಾಗಿದ್ದೇನೆ ಎಂದು ತಿಳಿಯಪಡಿಸುವೆ ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಶೋಕ ಕಿವಡಿ, ಕಾಂಗ್ರೆಸ್‌ ಮುಖಂಡ ಸದುಗೌಡ ಪಾಟೀಲ, ರೆೈತ ಮುಖಂಡರಾದ ಸುಭಾಷ ಶಿರಬೂರ, ದುಂಡಪ್ಪ ಲಿಂಗರಡ್ಡಿ, ದುಂಡಪ್ಪ ಯರಗಟ್ಟಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ್‌ ವಿನೋದ ಹತ್ತಳ್ಳಿ ಸೇರಿದಂತೆ ರೈತ ಮುಖಂಡರು ಉಪಸ್ಥಿತರಿದ್ದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X