ಇಂದು ಸರ್ಕಾರಿ ಶಾಲಾ ಶಿಕ್ಷಕರ ‘ಬೆಂಗಳೂರು ಚಲೋ’ ಪ್ರತಿಭಟನೆ

Date:

Advertisements

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಆಗಸ್ಟ್ 12ರಂದು ತರಗತಿ ಬಹಿಷ್ಕರಿಸಿ ಬೆಂಗಳೂರು ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.

ರಾಜ್ಯದ ವಿವಿಧ ಭಾಗಗಳಿಂದ ಶಿಕ್ಷಕರು ತರಗತಿ ಬಹಿಷ್ಕರಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆಯಲ್ಲಿ ಭಾಗಿಯಾಗಲು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕರೆ ನೀಡಿದೆ.

ಸೋಮವಾರ ಬೆಳಗ್ಗೆ 10.30ರಿಂದ ಸಂಜೆ 5 ಗಂಟೆಯವರೆಗೆ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗಿದೆ. ಆದರೆ “ಸೋಮವಾರ ಶಾಲೆಗಳು ಎಂದಿನಂತೆ ನಡೆಯುತ್ತದೆ” ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

Advertisements

ಇದನ್ನು ಓದಿದ್ದೀರಾ? 50 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ, ಬಾಲಕರಿಗೆ ಬಯಲು ಶೌಚವೇ ಗತಿ! RTE

“ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ನಡತೆ) ನಿಯಮಗಳು-2021ರ ಪ್ರಕಾರ ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುವುದು ನಡತೆ ನಿಯಮಗಳ ಉಲ್ಲಂಘನೆಯಾಗುವುದರಿಂದ ದಿನಾಂಕ 12/08/2024ರಂದು ಶಾಲೆಗಳನ್ನು ಮುಚ್ಚಿ ಮುಷ್ಕರದಲ್ಲಿ ಭಾಗವಹಿಸಲು ಹಾಗೂ ಪಾಠ ಬೋಧನೆಗೆ ಅಡಚಣೆ ಉಂಟುಮಾಡಲು ಅವಕಾಶವಿರುವುದಿಲ್ಲ” ಎಂದು ಶಿಕ್ಷಣ ಇಲಾಖೆ ಹೇಳಿದೆ.

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಈ ಹಿಂದಿನಂತೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಬೇಕು. 2016ರ ಮೊದಲು ನೇಮಕವಾದ ಶಿಕ್ಷಕರಿಗೆ 2017ರ ಹೊಸ ವೃಂದ ಮತ್ತು ನೇಮಕಾತಿಗಳನ್ನು ಅನ್ವಯಿಸದೆ ಒಂದರಿಂದ ಎಂಟನೇ ತರಗತಿವರೆಗೆ ಬೋಧನೆಗೆ ಅವಕಾಶ ನೀಡಬೇಕು. ಪದವಿ ಪೂರ್ಣಗೊಳಿಸಿದ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಪ್ರೌಢಶಾಲಾ ಶಿಕ್ಷಕರಾಗಿ ಭರ್ತಿಗೆ ಅವಕಾಶ ಕಲ್ಪಿಸಬೇಕು ಎಂಬ ಮೊದಲಾದ ಬೇಡಿಕೆಗಳನ್ನು ಶಿಕ್ಷಕರು ಹೊಂದಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X