ತುಂಗಭದ್ರಾ ಜಲಾಶಯ | ಭರದಿಂದ ಸಾಗಿದ ‘ಸ್ಟಾಪ್ ಲಾಗ್ ಗೇಟ್’ ನಿರ್ಮಾಣ ಕಾರ್ಯ

Date:

Advertisements

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್‌ ಕೊಚ್ಚಿ ಹೋದ ಪರಿಣಾಮ ನದಿಗೆ ನೀರು ಬಿಡಲಾಗಿದ್ದು, ಸೋಮವಾರ ಬೆಳಗಿನ ಮಾಹಿತಿ ಪ್ರಕಾರ ಜಲಾಶಯದ ಹೊಳಹರಿವು 25,131 ಕ್ಯುಸೆಕ್‌ ಇದ್ದು, 88,955 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ.

ಕ್ರಸ್ಟ್‌ಗೇಟ್‌ ಮರಳಿ ಅಳವಡಿಸಬೇಕಾದ ಹಿನ್ನೆಲೆಯಲ್ಲಿ ಜಲಾಶಯದ 61 ಟಿಎಂಸಿ ಅಡಿ ನೀರು ಖಾಲಿ ಮಾಡಬೇಕಾಗಿದೆ. ಆದ್ದರಿಂದ ಜಲಾಶಯದ ನೀರನ್ನು ಹೊರ ಹರಿಸಲಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಗಂಗಾವತಿ ತಾಲ್ಲೂಕಿನ ಆನೆಗೊಂದಿ ಗ್ರಾಮದ ಬಳಿ ಇರುವ ಕೃಷ್ಣದೇವರಾಯ ಸಮಾಧಿಯ 64 ಸಾಲಿನ ಕಲ್ಲಿನ ಮಂಟಪ ಮುಳುಗುವ ಹಂತ ತಲುಪಿದೆ. ಇತ್ತೀಚೆಗೆ ಜಲಾಶಯಕ್ಕೆ ವ್ಯಾಪಕ ನೀರು ಹರಿದು ಬಂದು ನದಿಗೆ ನೀರು ಹರಿಸಿದ್ದಾಗ ಇದು ಮುಳುಗಡೆಯಾಗಿತ್ತು.

Advertisements

ಸ್ಟಾಪ್ ಲಾಗ್ ಗೇಟ್ ನಿರ್ಮಾಣ ಕಾರ್ಯ

ಹೊಸ ಗೇಟ್ ಅಳವಡಿಸಲು ಜಲಾಶಯದ ನೀರನ್ನು ಬಹುತೇಕ ಅರ್ಧದಷ್ಟು ಖಾಲಿ ಮಾಡುವ ಪ್ರಯತ್ನ ನಡೆದಿದೆ. ಕಲಾಶಯದ ನೀರಿನ ಪ್ರಮಾಣ ನೋಡಿದರೆ ಸದ್ಯ ಶಾಶ್ವತ ಗೇಟ್ ಬದಲಿಗೆ ತಾತ್ಕಾಲಿಕ ‘ಸ್ಟಾಪ್ ಲಾಗ್ ಗೇಟ್’ ಮಾತ್ರ ಅಳವಡಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಶಾಶ್ವತ ಕ್ರಸ್ಟ್‌ಗೇಟ್ ನಿರ್ಮಾಣಕ್ಕೆ ಬಹಳಷ್ಟು ಸಮಯ ಹಿಡಿಯುತ್ತದೆ, ಸದ್ಯ ಜಲಾಶಯದ ನೀರನ್ನು ಹಿಡಿದಿಟ್ಟುಕೊಳ್ಳುವುದೇ ಆದ್ಯತೆಯಾಗಿದ್ದು, ಹೀಗಾಗಿ 19ನೇ ಗೇಟ್ ಅನ್ನು ಸಂಪೂರ್ಣವಾಗಿ ಮುಚ್ಚಿ ಅಲ್ಲಿ ನೀರು ಹೋಗುವುದನ್ನು ತಡೆಯುವ ನಿಟ್ಟಿನಲ್ಲಿ ‘ಸ್ಟಾಪ್ ಲಾಗ್ ಗೇಟ್’ ಅಳವಡಿಸಲು ನಿರ್ಧರಿಸಲಾಗಿದೆ.

ಗೇಟ್ ತಯಾರಿಸಲು ಸೂಚಿಸಲಾದ ಕಂಪನಿಯ ಕಚೇರಿ ಇರುವುದು ಹೊಸಪೇಟೆಯಲ್ಲಾದರೂ ನಿರ್ಮಾಣ ಶೆಡ್ ಇರುವುದು ಕೊಪ್ಪಳ ಜಿಲ್ಲೆಯ ಹೊಸಹಳ್ಳಿ ಸಮೀಪ. ಅಲ್ಲಿ ಈಗಾಗಲೇ ಗೇಟ್ ತಯಾರಿಗೆ ಸಿದ್ಧತೆ ಆರಂಭವಾಗಿದೆ. ಜಲಾಶಯದ ನೀರು 50 ಟಿಎಂಸಿ ಅಡಿಗೆ ಕುಸಿದಂತೆ ಈ ಗೇಟ್ ಸಹ ಸಿದ್ದವಾಗಲಿದೆ.

ಮಂಟಪ

ಕಂಪ್ಲಿ : ಸೇತುವೆ ಸಂಚಾರ ನಿರ್ಬಂಧ

ಕೊಪ್ಪಳ ಜಿಲ್ಲೆಯ ಗಂಗಾವತಿ ಮತ್ತು ವಿಜಯನಗರ ಜಿಲ್ಲೆಯ ಕಂಪ್ಲಿ ನಡುವೆ ಸಂಪರ್ಕ ಬೆಸೆಯುವ ಕಂಪ್ಲಿ ಸೇತುವೆ ಮೇಲೆ ವಾಹನಗಳ ಹಾಗೂ ಪಾದಚಾರಿಗಳ ಸಂಚಾರ ನಿರ್ಬಂಧ ವಿಸ್ತರಣೆಯಾಗಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸೋಮವಾರ ಮಧ್ಯಾಹ್ನ ಅಣೆಕಟ್ಟೆಗೆ ಭೇಟಿ ನೀಡಲಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ಬಸವರಾಜ ಬೊಮ್ಮಾಯಿ ಸಹ ಭೇಟಿ ನೀಡುವ‌ ಸಾಧ್ಯತೆ ಇದೆ. ತುಂಗಭದ್ರಾ ಮಂಡಳಿಯ ಅಧ್ಯಕ್ಷರು, ಕೇಂದ್ರೀಯ ಜಲ ಆಯೋಗದ ಸದಸ್ಯರು ಸೋಮವಾರ ಇಲ್ಲಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X