ತಾಳಿಕೋಟೆ ತಾಲೂಕು ಆಸ್ಪತ್ರೆ ಮೂಲ ಸೌಕರ್ಯ ಕುಂಠಿತ; ಲೋಕಾಯುಕ್ತ ನ್ಯಾ. ಬಿ ಎಸ್ ಪಾಟೀಲರಿಗೆ ಮನವಿ

Date:

Advertisements

ತಾಳಿಕೋಟೆ ಪಟ್ಟಣದ ಸರ್ಕಾರಿ ತಾಲೂಕು ಆಸ್ಪತ್ರೆಗೆ ಅವಶ್ಯವಿರುವ ಹೆಚ್ಚುವರಿ ಮೂಲಸೌಕರ್ಯ, ವೈದ್ಯಾಧಿಕಾರಿ ಹಾಗೂ ವಿವಿಧ ಆರೋಗ್ಯ ಸಂಪನ್ಮೂಲಗಳನ್ನು ಒದಗಿಸಬೇಕೆಂದು ಆಗ್ರಹಿಸಿ ತಾಲೂಕಿನ ಚಬನೂರ ಗ್ರಾಮಸ್ಥರು ಲೋಕಾಯುಕ್ತ ನ್ಯಾ. ಬಿ ಎಸ್ ಪಾಟೀಲರಿಗೆ ಮನವಿ ಸಲ್ಲಿಸಿದರು.

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಚಬನೂರ ಗ್ರಾಮಕ್ಕೆ ಲೋಕಾಯುಕ್ತ ನ್ಯಾ. ಬಿ ಎಸ್ ಪಾಟೀಲ ಅವರು ಆಗಮಿಸಿದ್ದ ವೇಳೆ ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ ಡಾ.ಪ್ರಭುಗೌಡ ಬಿ ಎಎಲ್ ಅವರ ನೇತೃತ್ವದಲ್ಲಿ ಸ್ಥಳೀಯರು ಮನವಿ ಸಲ್ಲಿಸಿ ಮಾತನಾಡಿದ್ದಾರೆ.

“ಸಮುದಾಯ ಆರೋಗ್ಯ ಕೇಂದ್ರವನ್ನು ವಿಸ್ತರಿಸಲಾಗಿದೆ. ದೊಡ್ಡ ಕಟ್ಟಡ ನಿರ್ಮಾಣವಾಗಿದೆ. ಆದರೆ ಅಗತ್ಯವಿರುವ ಮಕ್ಕಳ ತಜ್ಞರು, ಜನರಲ್ ಸರ್ಜನ್, ಕಣ್ಣಿನ ವೈದ್ಯರು ఇల్ల. ತಾಳಿಕೋಟೆ ತಾಲೂಕಿನವರು ಅಲ್ಲದೆ ಪಕ್ಕದ ಸುರಪುರ, ಹುಣಸಗಿ ತಾಲೂಕಿನ ಬಡರೋಗಿಗಳೂ ಕೂಡ ಚಿಕಿತ್ಸೆಗಾಗಿ ಬರುತ್ತಾರೆ. ವೈದ್ಯರಿಲ್ಲದಿರುವ ಕಾರಣ ಖಾಸಗಿ ಆಸ್ಪತ್ರೆಗೋ ಇಲ್ಲವೇ ಜಿಲ್ಲಾಸ್ಪತ್ರೆಗೋ ತಪಾಸಣೆಗೆ ಹೋಗುವಂತಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

“ತಾಳಿಕೋಟೆ ತಾಲೂಕು ಕೇಂದ್ರವಾದರೂ ಮುದ್ದೇಬಿಹಾಳ ತಾಲೂಕು ಕೇಂದ್ರಕ್ಕೆ ಹೋಗಿ ರೆಫರೆನ್ಸ್‌ ಲೆಟರ್ ತರಬೇಕಾಗಿದೆ. ಸ್ಥಳೀಯ ಆರೋಗ್ಯ ಕೇಂದ್ರದಲ್ಲಿ ಎಕ್ಸ್‌-ರೇ, ದಂತ ಚಿಕಿತ್ಸೆ ಯಂತ್ರಗಳು, ಚಿಕ್ಕಮಕ್ಕಳ ತುರ್ತು ಚಿಕಿತ್ಸಾ ಘಟಕ(ಐಸಿಯು)ಗಳಿದ್ದರೂ ಅವುಗಳನ್ನು ಸಮರ್ಪಕವಾಗಿ ಬಳಸಬೇಕಾದ ಪರಿಣಿತ ಸಿಬ್ಬಂದಿ ಇಲ್ಲ. ರಕ್ತಭಂಡಾರದ ಸೌಭ್ಯ, ಜೆಎಸ್‌ವಿ, 108 ನಗು-ಮಗು ಆ್ಯಂಬುಲೆನ್ಸ್‌ಗಳ ಸೌಲಭ್ಯಗಳು ಸರಿಯಾಗಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ರೀತಿಯ ಹಗರಣಗಳು ನಡೆದಿಲ್ಲ : ಸಚಿವ ಕೆ ಎನ್ ರಾಜಣ್ಣ

“ವಿವಿಧ ಸಂಘಟನೆಗಳಿಂದ ತಹಶೀಲ್ದಾರ್, ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಶಾಸಕರಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಆದರೂ ಬದಲಾವಣೆ ಕಂಡುಬಂದಿಲ್ಲ. ತಾಲೂಕು ಕೇಂದ್ರವನ್ನಾಗಿ ಪರಿವರ್ತಿಸಿ ಅಗತ್ಯ ಸೌಲಭ್ಯಗಳನ್ನು ಒದಗಿಸಲು ನೆರವಾಗಬೇಕು” ಎಂದು ಮನವಿ ಮಾಡಿಕೊಂಡರು.

ತಾಳಿಕೋಟೆಯ ಎಪಿಜೆ ಕಲಾಂ ಫೌಂಡೇಷನ್ ಅಧ್ಯಕ್ಷ ಶಫೀಕ್ ಇನಾಮದಾರ, ಫೌಂಡೇಷನ್ ಸಂಗಡಿಗರಾದ ಮಹಾಂತೇಶ ಮುರಾಳ, ಹನೀಫ್ ಜಮಾದಾರ, ಕಾಸು ಮಾದರ, ಹುಸೇನ್ ಪಟೇಲ, ಪೀರ್ ಅಹಮದ್ ಖಾಜಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X