ಕೋಲಾರ |ಡಿಸಿಸಿ ಬ್ಯಾಂಕ್‌ ಭ್ರಷ್ಟಾಚಾರ ಸಿಬಿಐಗೆ ಒಪ್ಪಿಸಿ ; ರೈತ ಸಂಘ ಒತ್ತಾಯ

Date:

Advertisements

10 ವರ್ಷಗಳ ಕಾಲ ಲಾಭದಲ್ಲಿದ್ದ ಡಿಸಿಸಿ ಬ್ಯಾಂಕ್‌ ಇದೀಗ 10 ಕೋಟಿ ಸಾಲದ ಸುಳಿಗೆ ಸಿಕ್ಕಿದ್ದಾದರೂ ಹೇಗೆ. ಇದರ ಹಿಂದಿನ ರಹಸ್ಯವೇನು?. ಕೂಡಲೇ ಡಿಸಿಸಿ ಬ್ಯಾಂಕ್ ಭ್ರಷ್ಟಾಚಾರವನ್ನು ಸಿಬಿಐಗೆ ಒಪ್ಪಿಸಿ, ರೈತರು ಮತ್ತು ಮಹಿಳೆಯರಿಗೆ ಸಾಲ ನೀಡಲು ಅನುಕೂಲ ಕಲ್ಪಿಸಬೇಕು. ಶೀಘ್ರವೇ ಡಿಸಿಸಿ ಬ್ಯಾಂಕ್‌ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಸೋಮವಾರ ಡಿಸಿಸಿ ಬ್ಯಾಂಕ್‌ ಮುಂದೆ ತಲೆ ಮೇಲೆ ಕಲ್ಲು ಹೊತ್ತು ವಿನೂತನವಾಗಿ ಪ್ರತಿಭಟನೆ ಮಾಡಿದರು.

ಈ ವೇಳೆ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಕೋಲಾರ ಚಿಕ್ಕಬಳ್ಳಾಪುರ ಸಹಕಾರ ಬ್ಯಾಂಕ್‌ಗೆ ಚುನಾವಣೆ ನಡೆಸಿ ಪಾರದರ್ಶಕತೆ ಕಾಪಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಆದರೆ, ಜಿಲ್ಲಾಧಿಕಾರಿಗಳು ಚುನಾವಣೆ ನಡೆಸದೆ ಚುನಾವಣಾ ದಿನಾಂಕವನ್ನು ನಿಗದಿಪಡಿಸಿ ಮತ್ತೆ ಮುಂದೂಡಿದ್ದಾರೆ. ಇದಕ್ಕೆ ಕಾರಣವೇನೂ? ಸಹಕಾರ ಬ್ಯಾಂಕ್ ಹಾಳು ಮಾಡಲು ಕಣ್ಣಿಗೆ ಕಾಣದ ಹಿತ ಶತ್ರುಗಳ ಕೈವಾಡ ನಡೆಯುತ್ತಿದೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘ ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಕೋಲಾರ-ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಎರಡೂ ಜಿಲ್ಲೆಗಳ ರೈತರ ಹಾಗೂ ಸ್ತ್ರೀಶಕ್ತಿ ಸಂಘಗಳ ಜೀವನಾಡಿ. ನಷ್ಟದಲ್ಲಿದ್ದ ಬ್ಯಾಂಕನ್ನು ೨೦೧೪ರಲ್ಲಿ ಅಧಿಕಾರಕ್ಕೆ ಬಂದ ಬ್ಯಾಲಹಳ್ಳಿ ಗೋವಿಂದಗೌಡರ ನೇತ್ರತ್ವದ ಆಡಳಿತ ಮಂಡಳಿಯು ಸುಧಾರಣೆ ತಂದು, ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ ನೀಡುವ ಮೂಲಕ ಆರ್ಥಿಕ ಶಕ್ತಿ ತುಂಬಿದ್ದರು. ಆದರೀಗ ಬ್ಯಾಂಕನ್ನು ದಿವಾಳಿ ಮಾಡುವ ನಿಟ್ಟಿನಲ್ಲಿ ಖಾಸಗಿ ಬ್ಯಾಂಕ್‌ಗಳ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

Advertisements

ಬ್ಯಾಂಕ್ ವ್ಯವಸ್ಥಾಪಕರು, ಸೂಪರ್‌ವೈಸರ್ ನಕಲಿ ಸಂಘಗಳನ್ನು ಸೃಷ್ಠಿ ಮಾಡಿ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆಯೇ? ಸರ್ಕಾರದ ತನಿಖಾ ವರದಿಯಲ್ಲಿ 1.5ಕೋಟಿ ರೂಪಾಯಿಯನ್ನು ವ್ಯವಸ್ಥಾಪಕರು ದುರುಪಯೋಗಪಡಿಸಿಕೊಂಡಿರುವುದು ಸಾಭಿತಾಗಿದ್ದರೂ, ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿರುವವರು ಯಾರು ಎಂದು ಪ್ರಶ್ನೆ ಮಾಡಿದರು.

ಬ್ಯಾಂಕಿನ ಆಡಳಿಯ ಮಂಡಳಿಯ ಅವಧಿ ಮುಗಿದ ನಂತರ ಸರ್ಕಾರವು ಅಡಳಿತಾಧಿಕಾರಿಯನ್ನು ನೇಮಕ ಮಾಡಿದೆ. ಆದರೆ ಬಡವರಿಗೆ ಸಾಲ ಸೌಲಭ್ಯಗಳು ದೊರೆಯದೆ ಇರುವುದು ಖಾಸಗಿ ಲೇವಾದೇವಿದಾರರಿಗೆ ಪರೋಕ್ಷವಾಗಿ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದು ಬ್ಯಾಂಕ್ ಅವ್ಯವಸ್ಥೆಯ ವಿರುದ್ಧ ಗುಡುಗಿದರು.

ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್ ಮಾತನಾಡಿ, ಆಡಳಿತ ಅವಧಿ ಮುಗಿನಂತರವಂತೂ ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯವಸ್ಥಾಪಕ ನಿರ್ದೇಶಕರಿಗೆ, ಅಧಿಕಾರಿಗಳಿಗೆ ಹಣಕಾಸು ವಿಚಾರದಲ್ಲಿ ಗಂಭೀರತೆಯಿಲ್ಲದಂತಾಗಿದೆ. ಅವರೆಲ್ಲ ಸಂಬಂಳಕ್ಕೆ ಸೀಮೀತವಾಗಿದ್ದು, ಸುಮಾರು ವರ್ಷಗಳಿಂದ ಇಲ್ಲೆ ಟಿಕ್ಕಾಣಿ ಹೂಡಿರುವ ಅಧಿಕಾರಿಗಳನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.

ಅವಧಿ ಮುಗಿದಿರುವ ಆಡಳಿತ ಮಂಡಳಿಗೆ ಈಗಾಗಲೇ ಚುನಾವಣೆ ನಡೆಯಬೇಕಿತ್ತು. ಆದರೆ ಜಿಲ್ಲೆಯ ಕೆಲ ರಾಜಕೀಯ ಪಟ್ಟಭದ್ರ ಶಕ್ತಿಗಳು ಬ್ಯಾಂಕಿನ ವಿಚಾರದಲ್ಲಿ ಮೂಗು ತೂರಿಸಿ, ರೈತರ, ಮಹಿಳೆಯರ ವಿಚಾರದಲ್ಲಿ ಚೆಲ್ಲಾಟವಾಡುತ್ತಿವೆ. ಒಂದು ಕಾಲದಲ್ಲಿ ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಂಡು ರಾಜಕೀಯ ಮುಖಂಡರೆ ಬ್ಯಾಂಕ್ ವಿಚಾರದಲ್ಲಿ ಮುಳುವಾಗಿದ್ದಾರೆ. ಸರ್ಕಾರಕ್ಕೂ ರೈತರ ಹಿತಕ್ಕಿಂತ ರಾಜಕೀಯ ಮುಖಂಡರ ಹಿತವೇ ಮುಖ್ಯವಾಗಿದೆ. ತೀರ್ಮಾನ ಬದಲಾಯಿಸಿಕೊಂಡು ಕೂಡಲೇ ಚುನಾವಣೆ ನಡೆಸಿ ಗ್ರಾಮೀಣ ಭಾಗದ ಸ್ತ್ರೀ ಶಕ್ತಿ ಸಂಘಗಳಿಗೆ, ರೈತರಿಗೆ ಸಾಲವನ್ನು ವಿತರಣೆ ಮಾಡಿ ಖಾಸಗಿ ಫೈನಾನ್ಸ್ಗಳಿಂದ ಗ್ರಾಮೀಣ ಭಾಗದಲ್ಲಿ ಮಹಿಳೆಯರನ್ನು ಮತ್ತು ರೈತರನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಉಪವಿಭಾಗಾಧಿಕಾರಿ, ಹಗರಣದ ವಿಚಾರವಾಗಿ ತನಿಖೆ ನಡೆಯುತ್ತಿದೆ. ಲೆಕ್ಕ ಪರಿಶೋಧಕರಿಗೂ ಪತ್ರ ಬರೆಯಲಾಗಿದೆ. ಮಹಿಳಾ ಸ್ವಸಹಾಯ ಸಂಘಗಳಿಗೆ ತಿಂಗಳ ಅಂತ್ಯದಲ್ಲಿ ಸಾಲ ವಿತರಣೆಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಹೋರಾಟದಲ್ಲಿ ರೈತ ಸಂಘದ ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್, ನರಸಿಂಹಯ್ಯ, ಕುವ್ವಣ್ಣ, ಅಶ್ವತಪ್ಪ, ಯಲ್ಲಪ್ಪ, ಹರೀಶ್, ಸುಪ್ರೀಂ ಚಲ, ಮುಂತಾದವರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X