ಅಕ್ಟೋಬರ್‌ 3 ರಿಂದ 12 ರವರೆಗೆ ದಸರಾ; ಅದ್ದೂರಿ ಆಚರಣೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಾಡಹಬ್ಬ ಮೈಸೂರು ದಸರಾ 2024 ಉನ್ನತ ಮಟ್ಟದ ಸಭೆಯನ್ನು ಅಧಿಕಾರಿಗಳೊಂದಿಗೆ ನೆಡೆಸಿದರು.

ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ದಸರಾ ಮಹೋತ್ಸವ ಜನರ ಉತ್ಸವ ಆಗಬೇಕು. ಕಳೆದ ವರ್ಷ ಕೊರೋನಾ-ಬರಗಾಲ ಕಾರಣಕ್ಕೆ ಹೆಚ್ಚು ವಿಜ್ರಂಭಣೆ ಮಾಡಲಿಲ್ಲ. ಈ ಬಾರಿ ವಿಜ್ರಂಭಣೆ ಇರಲಿ” ಎಂದು ಸೂಚಿಸಿದರು.

“ರಾಜ್ಯದಲ್ಲಿ ಉತ್ತಮ ಮಳೆ,ಸಮೃದ್ದಿಯ ಹಿನ್ನೆಲೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಅಕ್ಟೋಬರ್ 3 ರಿಂದ 12 ರವರೆಗೆ ನಡೆಯಲಿರುವ ದಸರಾ ನಡೆಯಲಿದೆ. ಸ್ಥಳೀಯ ಕಲಾವಿದರಿಗೆ ಹೆಚ್ಚಿನ‌ ಅವಕಾಶ ನೀಡಬೇಕು. ನಮ್ಮ ಕಲಾವಿದರು ಹೆಚ್ಚು ಸಮರ್ಥರಿದ್ದಾರೆ. ಟ್ಯಾಬ್ಲೋಗಳು ಹೆಚ್ಚು ಆಕರ್ಷಕ ಮತ್ತು ಅರ್ಥಪೂರ್ಣವಾಗಿರಬೇಕು. ಕಲೆ, ಸಂಸ್ಕೃತಿ, ಸಾಹಿತ್ಯ, ಕ್ರೀಡೆ, ಆಹಾರ, ವಸ್ತು ಪ್ರದರ್ಶನ, ಕುಸ್ತಿ ಪ್ರದರ್ಶನ, ದೀಪಾಂಲಕಾರ ಸೇರಿ ಪ್ರತಿಯೊಂದೂ ಆಕರ್ಷಣೀಯ ಮತ್ತು ಅರ್ಥಪೂರ್ಣ ಆಗಿರಬೇಕು” ಎಂದು ಹೇಳಿದರು.

Advertisements

“ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾರ್ಥಕ‌ ಕೆಲಸಗಳ ಪ್ರದರ್ಶನ ಮತ್ತು ತಿಳಿವಳಿಕೆ ಮೂಡಿಸಬೇಕು. ವಿಜ್ರಂಭಣೆಯ ನಾಡ ಹಬ್ಬಕ್ಕೆ ಅಗತ್ಯವಿದ್ದಷ್ಟು ಹಣವನ್ನು ನೀಡುತ್ತೇವೆ. ದೀಪಾಲಂಕಾರ ಈ ಬಾರಿ 21 ದಿನ ಇರಲಿ. ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆ ಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿ” ಎಂದು ತಿಳಿಸಿದರು.

“ಗೋಲ್ಡ್ ಕಾರ್ಡ್ ಗಳನ್ನು ಮುಂಚಿತವಾಗಿ ಮಾಡಿ. ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು. ಕರ್ನಾಟಕ ಸಂಭ್ರಮ 50 ನವೆಂಬರ್ ವರೆಗೂ ನಡೆಯಲಿದೆ. ದಸರಾದಲ್ಲಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಿ” ಎಂದು ಹೇಳಿದರು.

“ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ಸ್ವಲ್ಪ ಹೆಚ್ಚಿನ ಸಮಯ ಏರ್ ನಡೆಸಲೂ ವಿನಂತಿಸಲಾಗುವುದು. ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ಮಾಮೂಲು ಹಳೆ ಪದ್ಧತಿಗಳಲ್ಲೇ ಮಾಡುವುದಕ್ಕಿಂತ ಉನ್ನತೀಕರಿಸಿ ಮಾಡಿ” ಎಂದು ಸೂಚಿಸಿದರು.

ದಸರಾ ಉದ್ಘಾಟನೆ ಯಾರಿಂದ ಮಾಡಿಸಬೇಕು ಎನ್ನುವ ತೀರ್ಮಾನವನ್ನು ಮುಖ್ಯಮಂತ್ರಿಗಳಿಗೆ ಒಪ್ಪಿಸಿ ಸಭೆ ನಿರ್ಧರಿಸಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X