ಧಾರವಾಡ | ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Date:

Advertisements

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಿಜೆಪಿ ನಾಯಕರು ಸುಖಾಸುಮ್ಮನೆ ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನದಿಂದ ಹಗರಣವೇ ಅಲ್ಲದ ವಿಷಯವನ್ನು ಮುಡಾ ಹಗರಣ ಎಂದು ಬಿಂಬಿಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸುತ್ತಿರುವುದನ್ನು ಹಾಗೂ ರಾಜ್ಯಪಾಲರನ್ನು ಬಳಸಿಕೊಂಡು ಅವರ ಮೂಲಕ ಮುಖ್ಯಮಂತ್ರಿಗಳಿಗೆ ನೋಟಿಸ್ ಕೊಟ್ಟಿರುವದನ್ನು ಖಂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಮುಖಂಡರು, ರಾಜ್ಯಪಾಲರನ್ನ ವಜಾ ಮಾಡುವಂತೆ ಆಗ್ರಹಿಸಿದರು. ನಗರದ ಕಲಾಭವನದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆಯ ರೂಪದಲ್ಲಿ ಪಾದಯಾತ್ರೆ ನಡೆಸಿದರು.

ಬಿಜೆಪಿ ನಾಯಕರ ಭಂಡತನ ಅವರ ಕುತಂತ್ರ ರಾಜಕಾರಣ ವಿರೋಧಿಸಿ ಹಾಗೂ ಪಕ್ಷಪಾತಿ ಧೋರಣೆಯನ್ನು ಅನುಸರಿಸುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ವಜಾ ಮಾಡುವಂತೆ ರಾಷ್ಟ್ರಪತಿಗಳಿಗೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಪ್ರತಿಭಟನಾಕಾರರು ಹೇಳಿದರು.

Advertisements
WhatsApp Image 2024 08 12 at 2.42.12 PM

ಧಾರವಾಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫಹುಸೇನ ಹಳ್ಳೂರ, ಎಐಸಿಸಿ ಮಾಜಿ ಸದಸ್ಯರು ಹಾಗೂ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಹುಬ್ಬಳ್ಳಿ ಧಾರವಾಡ ಪಶ್ಚಿಮ-74 ಮತ ಕ್ಷೇತ್ರದ ಕಾಂಗ್ರೇಸ ಅಭ್ಯರ್ಥಿಯಾಗಿದ್ದ ದೀಪಕ್ ಚಿಂಚೋರೆ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ತಮಟಗಾರ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಇದನ್ನು ಓದಿದ್ದೀರಾ? ವಿಜಯಪುರ | ಕೇಂದ್ರ, ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ದಸಂಸ ಪ್ರತಿಭಟನೆ

ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, ಕೆಪಿಸಿಸಿ ಪದಾಧಿಕಾರಿಗಳು, ಕೆಪಿಸಿಸಿ ಸಂಯೋಜಕರು, ಕೆಪಿಸಿಸಿ ಸದಸ್ಯರು, ಬ್ಲಾಕ್ ಅಧ್ಯಕ್ಷರು, ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಮುಂಚೂಣಿ ಘಟಕ, ಸೆಲ್, ವಿಭಾಗಗಳ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಹಿರಿಯ-ಕಿರಿಯ ಮುಖಂಡರು, ಪಾಲಿಕೆಯ ಹಾಲಿ-ಮಾಜಿ ಸದಸ್ಯರು ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಭಾಗವಹಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X