ಕಲಬುರಗಿ | ತಹಸೀಲ್‌ ಕಚೇರಿಯಲ್ಲೇ ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಗ್ರಾಮ ಲೆಕ್ಕಾಧಿಕಾರಿ

Date:

Advertisements

ಅಫಜಲಪುರ ತಹಶೀಲ್ ಕಚೇರಿಯಲ್ಲಿ ಲಂಚ ಸ್ವೀಕರಿಸುವ ವೇಳೆ ಗ್ರಾಮ ಲೆಕ್ಕಾಧಿಕಾರಿಯೊಬ್ಬರನ್ನು ಸೋಮವಾರ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಅಫಜಲಪುರ ತಾಲೂಕಿನ ನಂದರಗಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಸಿದ್ದರಾಮ ಪಡಶೆಟ್ಟಿ ಬಂಧಿತ ಆರೋಪಿ.

ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮದ ಸೈಫನ್ ಸಾಬ್ ಅಜೀಜ್ ಎಂಬುವರ ಜಮೀನಿನ ಮ್ಯುಟೇಶನ್ ಮಾಡಿಕೊಡಲು ಗ್ರಾಮ ಲೆಕ್ಕಾಧಿಕಾರಿ ಸಿದ್ದರಾಮ ಅವರು ₹7 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟು, ಹಣ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

Advertisements

ರೈತ ಸೈಫನ್ ಸಾಬ್ ಅಜೀಜ್ ಎಂಬುವರು ಜಮೀನಿನ ಮ್ಯುಟೇಶನ್ ಮಾಡಿಸಲು ಅರ್ಜಿ ಸಲ್ಲಿಸಿದರು. ಆದರೆ ಕೆಲಸ ಮಾಡಲು ಸಿದ್ದರಾಮ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಬೇಸತ್ತ ಸೈಫನ್‌ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಲೋಕಾಯುಕ್ತ ಎಸ್ಪಿ ಜಾನ್ ಆಂಟೋನಿ ಮಾರ್ಗದರ್ಶನದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ ಗಂಗಲ್‌ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಧ್ರುವತಾರಾ ಅವರು ಆರೋಪಿಯನ್ನು ಬಂಧಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X