ಹಾವೇರಿ | ಮಾನವ ಹಕ್ಕುಗಳನ್ನು ರಕ್ಷಣೆ ಮಾಡುವ ಗುರಿ ನಮ್ಮದಾಗಬೇಕು: ಡಾ.ರಾಜುಕನ್ನೈ

Date:

Advertisements

ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ವಿಶ್ವ ಮಾನವ ಹಕ್ಕಗಳ ಆಯೋಗ ಆರ್.ಕೆ ಫೌಂಡೇಶನ್‌ನ ಜಿಲ್ಲಾ ವ್ಯಾಪ್ತಿಯಲ್ಲಿ 2ನೇ ವರ್ಷದ ವಾರ್ಷಿಕೋತ್ಸವವನ್ನು ಕೇಕ್ ಕತ್ತರಿಸಿ, ಸಿಹಿ ಹಂಚಿ ಸರಳವಾಗಿ ಆಚರಣೆ ಮಾಡಲಾಯಿತು. ಫೌಂಡೇಶನ್‌ನ ರಾಷ್ಟ್ರೀಯ ಅಧ್ಯಕ್ಷ ಡಾ.ರಾಜು ಕನ್ನೈ ಅವರನ್ನು ಜಿಲ್ಲಾ ಘಟಕದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ನಂತರ ಮಾತನಾಡಿದ ಡಾ.ರಾಜುಕನ್ನೈ, “ಹಾವೇರಿ ಜಿಲ್ಲೆಯಲ್ಲಿ ಆರ್.ಕೆ ಫೌಂಡೇಶನ್‌ ಮುಂದಿನ ದಿನಮಾನಗಳಲ್ಲಿ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಲು ಜಿಲ್ಲೆಯ ಮುಖಂಡರು ಸಜ್ಜಾಗಿದ್ದಾರೆ. ವಿಶ್ವದಲ್ಲಿ ಮಾನವೀಯ ಮೌಲ್ಯಗಳನ್ನು ಹಾಗೂ ಮಾನವ ಹಕ್ಕುಗಳನ್ನು ರಕ್ಷಣೆ ಮಾಡುವ ಗುರಿ ಉದ್ದೇಶದೊಂದಿಗೆ ನಾವೆಲ್ಲರೂ ಕೆಲಸ ಮಾಡಬೇಕಿದೆ” ಎಂದರು.

photo 6185935092149500986 y

ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯರಾದ ಉಡಚಪ್ಪ ಮಾಳಗಿ ಮಾತನಾಡಿ, “ಮಾನವ ಹಕ್ಕಗಳನ್ನು ರಕ್ಷಣೆಯ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸಬೇಕಿದೆ. ಜಿಲ್ಲೆಯಲ್ಲಿ ಆರ್.ಕೆ ಫೌಂಡೇಶನ್ ಕಾರ್ಯ ಚಟುವಟಿಕೆಗಳು ಹೆಚ್ಚಾಗಲು ಎಲ್ಲರ ಶ್ರಮ ಅಗತ್ಯವಿದೆ” ಎಂದು ಶುಭ ಕೋರಿದರು.

Advertisements

ಇದೇ ಸಂದರ್ಭದಲ್ಲಿ ಆರ್.ಕೆ ಫೌಂಡೇಶನ್‌ನ ಪದಾಧಿಕಾರಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ವೇಳೆ ದಕ್ಷಿಣ ಭಾರತದ ಕಾನೂನು ಸಲಹೆಗಾರರಾದ ಡಾ.ಎಂ.ಎಸ್ ಬಡಿಗೇರ, ಸಹ ಕಾರ್ಯದರ್ಶಿ ಶ್ರೀಮತಿ ಲಕ್ಷ್ಮವ್ವ, ಮುಖಂಡರಾದ ಜಗದೀಶ ಹರಿಜನ, ನವೀನ ಶಿಡ್ಲಣ್ಣನವರ, ಆಶಾಬಿ ತೊಂಡೆನವರ, ಉಮಾ ದಾವಣಗೇರಿ, ಮೌಲಾಲಿ, ಇರಾಬಿ. ಶೈಲಾ. ಶೇಮಶಾದಬಿ, ಗಂಗಮ್ಮ ಪಾಟೀಲ, ಹೇಮಾ ವಾಳದ, ಸರೋಜ ಸೇರಿದಂತೆ ಅನೇಕರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರ್ಲಕ್ಷ್ಯಕ್ಕೆ ಗುರಿಯಾಗಿ ದುಸ್ಥಿತಿಗೆ ಬಿದ್ದ ರಾಜ್ಯ ಹೆದ್ದಾರಿ; ಶಾಸಕರ ವಿರುದ್ಧ ಸಾರ್ವಜನಿಕರ ಆಕ್ರೋಶ

ಕಲಬುರಗಿ ಜಿಲ್ಲೆಯ ರಾಜ್ಯ ಹೆದ್ದಾರಿ 125, ಶಹಾಬಾದ್ ತಾಲೂಕಿನಿಂದ ಜೇವರ್ಗಿಯ ರಾಷ್ಟ್ರೀಯ...

ಕಲಬುರಗಿ | ಬೆಳೆ ಹಾನಿ: ಎಕರೆಗೆ 25 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿ ಎಐಕೆಕೆಎಂಎಸ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ...

ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ...

ಕೋಲಾರ | ರಸ್ತೆ ವಿಸ್ತರಣೆಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ; ಕುರ್ಕಿ ರಾಜೇಶ್ವರಿ ಆರೋಪ

ಕೋಲಾರ ತಾಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ...

Download Eedina App Android / iOS

X