ತುಮಕೂರು | ನಕಲಿ ವಧು; ಅಸಲಿ ಮದುವೆ ಮಾಡುತ್ತಿದ್ದ ವ್ಯವಸ್ಥಿತ ತಂಡ ಪೊಲೀಸರ ಬಲೆಗೆ; ನಾಲ್ವರ ಬಂಧನ

Date:

Advertisements
  • ಮೂರು ವರ್ಷದಲ್ಲಿ ನಾಲ್ಕು ಮೋಸದ ಮದುವೆ: ನಕಲಿ ವಧುವಿಗೆ ಇಬ್ಬರು ಮಕ್ಕಳು
  • ಅವಿವಾಹಿತ ಯುವಕರೇ ಇವರ ಟಾರ್ಗೆಟ್; ಗುಬ್ಬಿ ಪೊಲೀಸರ ಬಲೆಗೆ ಬಿದ್ದ ತಂಡ

ಅಸಲಿ ಮದುವೆಯ ನಾಟಕವಾಡಿ ಒಡವೆ ಸೇರಿದಂತೆ ಹಣ ದೋಚುತ್ತಿದ್ದ ನಾಲ್ವರ ವ್ಯವಸ್ಥಿತ ತಂಡವನ್ನು ತುಮಕೂರು ಜಿಲ್ಲೆಯ ಗುಬ್ಬಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಮದುವೆ ಹೆಸರಲ್ಲಿ ಅವಿವಾಹಿತ ಯುವಕರನ್ನೇ ಟಾರ್ಗೆಟ್‌ ಮಾಡುತ್ತಿದ್ದ ದಲ್ಲಾಳಿಗಳ ತಂಡ ಗ್ರಾಮೀಣ ಭಾಗದಲ್ಲಿ ಮದುವೆ ಮಾಡಲು ಹಾತೊರೆಯುವ ಕುಟುಂಬವನ್ನು ನಂಬಿಸಿ ಸಂಪ್ರದಾಯದಂತೆ ಮದುವೆ ಮಾಡಿಕೊಂಡು ಹಣ-ಚಿನ್ನದೊಂದಿಗೆ ವ್ಯವಸ್ಥಿತವಾಗಿ ಪರಾರಿಯಾಗುತ್ತಿದ್ದರು. ಈ ತಂಡವನ್ನು ಗುಬ್ಬಿ ಪೊಲೀಸರು, ಉತ್ತರ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಬಂಧಿಸಿ ಕರೆ ತಂದು ಜೈಲಿಗಟ್ಟುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.

ಲಕ್ಷ್ಮೀ ಬಾಳ ಸಾಬ್ ಜನಕರ್ ಅಲಿಯಾಸ್ ಕೋಮಲ, ಸಿದ್ದಪ್ಪ, ಲಕ್ಷ್ಮೀಬಾಯಿ, ಲಕ್ಷ್ಮಿ ಬಂಧಿತರು. ಲಕ್ಷ್ಮೀ ಬಾಳ ಸಾಬ್ ಜನಕರ್ ಅಲಿಯಾಸ್ ಕೋಮಲ ಮಧುಮಗಳಾಗಿ ಸಿಕ್ಕಿಬಿದ್ದಿದ್ದರೆ, ಚಿಕ್ಕಪ್ಪ ಪಾತ್ರಧಾರಿ ಸಿದ್ದಪ್ಪ, ಚಿಕ್ಕಮ್ಮ ಪಾತ್ರಧಾರಿ ಲಕ್ಷ್ಮೀಬಾಯಿ ಹಾಗೂ
ಬ್ರೋಕರ್‌ ಆಗಿರುವ ಲಕ್ಷ್ಮೀ ಬಂಧಿತರು. ನಕಲಿ ವಧುವಿಗೆ ಇಬ್ಬರು ಬೆಳೆದು ನಿಂತ ಮಕ್ಕಳಿದ್ದಾರೆ ಎಂಬುದು ಅಚ್ಚರಿ ತಂದಿದೆ.

Advertisements

ತುಮಕೂರಿನ ಗುಬ್ಬಿ ಸೇರಿದಂತೆ ರಾಜ್ಯದ ಹಲವು ಕಡೆ ಮುಗ್ಧ ಕುಟುಂಬವನ್ನು ಯಾಮಾರಿಸಿದ್ದ ತಂಡ ಮೂರು ವರ್ಷದಲ್ಲಿ ನಾಲ್ಕು ನಕಲಿ ಮದುವೆ ನಡೆಸಿ ಹಣ, ಚಿನ್ನಾಭರಣ ದೋಚಿ ನಾಪತ್ತೆಯಾಗಿದ್ದ ಘಟನೆ ನಡೆದಿತ್ತು.

photo 6185935092149501067 y

ಈ ಪೈಕಿ ಗುಬ್ಬಿ ತಾಲೂಕಿನ ಅತ್ತಿಗಟ್ಟೆ ಗ್ರಾಮದಲ್ಲಿ ಪಾಲಾಕ್ಷ್ಯ ಎಂಬವರ ಮಗನಿಗೆ ನಕಲಿ ವಧು ಸೃಷ್ಟಿಸಿ, ಎಲ್ಲ ಸಂಪ್ರದಾಯದಂತೆ ಮದುವೆ ನಡೆಸಿದ್ದಾರೆ. ದಯಾನಂದಮೂರ್ತಿ(38) ಅಸಲಿ ಗಂಡಿಗೆ ಹೆಣ್ಣು ಹುಡುಕುವ ತವಕದಲ್ಲಿ ಈ ಮೋಸದ ಜಾಲಕ್ಕೆ ಪಾಲಕ್ಷ್ಯ ಕುಟುಂಬ ಸಿಲುಕಿದೆ.

ಕುಷ್ಟಗಿ ಮೂಲದ ಬಸವರಾಜು ಮೂಲಕ ಬ್ರೋಕರ್ ಲಕ್ಷ್ಮೀ ಎಂಬಾಕೆಯ ಪರಿಚಯ ಮಾಡಿಕೊಂಡ ಪಾಲಾಕ್ಷ್ಯ ಅವರ ಮದುವೆ ಕನಸಿಗೆ ಮತ್ತಷ್ಟು ಆಸೆ ಹುಟ್ಟಿಸಿ, ಹುಬ್ಬಳ್ಳಿಯಲ್ಲಿ ಒಬ್ಬ ಒಳ್ಳೆ ಹುಡುಗಿ ಇದ್ದಾಳೆ. ಆಕೆಗೆ ತಂದೆ ತಾಯಿ ಇಲ್ಲ, ನೀವೇ ಮದುವೆ ಮಾಡಿಕೊಳ್ಳಬೇಕೆಂದು ಸುಳ್ಳು ಹೇಳಿ ಕೋಮಲ ಎಂಬ ಹೆಸರಿನಲ್ಲಿ ಯುವತಿಯ ಪೋಟೋ ತೋರಿಸಿದ್ದರು.

ಗಂಡಿನ ಮನೆ ನೋಡಲು ತಾಲೂಕಿನ ಅತ್ತಿಕಟ್ಟೆ ಗ್ರಾಮಕ್ಕೆ ಬಂದಿದ್ದ ನಕಲಿ ವಧು, ಜೊತೆಗೆ ನಕಲಿ ಚಿಕ್ಕಮ್ಮ ಚಿಕ್ಕಪ್ಪ ಕಳೆದ ವರ್ಷದ ನವೆಂಬರ್‌ ತಿಂಗಳಲ್ಲಿ ಮದುವೆ ಗಂಡಿನ ಮನೆಗೆ ಬಂದು ಅಂದೇ ಮದುವೆ ಮಾತುಕತೆ ನಡೆಸಿ ಮರುದಿನವೇ ಅತ್ತಿಕಟ್ಟೆ ಗ್ರಾಮದಲ್ಲೇ ದೇವಸ್ಥಾನದ ಬಳಿ ಮದುವೆ ಮಾಡಿ ಮುಗಿಸಿ ತಮ್ಮ ಮೋಸದ ಜಾಲ ಯಶಸ್ವಿಗೊಳಿಸಿದ್ದರು.

ಮಧುಮಗಳಿಗೆ ಚಿನ್ನದ ಸರ, ತಾಳಿ, ಕಿವಿಗೆ ಓಲೆ ಒಟ್ಟು 25 ಗ್ರಾಂ ಚಿನ್ನಾಭರಣ ನೀಡಿದ್ದ ಪಾಲಾಕ್ಷ್ಯ, ಇಡೀ ನಕಲಿ ಮದುವೆಯ ಸೂತ್ರಧಾರಿ ಬ್ರೋಕರ್‌ ಲಕ್ಷ್ಮಿಗೆ ಒಂದೂವರೆ ಲಕ್ಷ ಹಣ ನೀಡಿದ್ದರು. ಹೆಣ್ಣಿನ ಕಡೆಯವರು ಅಂತ 8 ಜನರನ್ನ ಕರೆ ತಂದಿದ್ದ ಬ್ರೋಕರ್‌ ಲಕ್ಷ್ಮೀ, ಮದುವೆ ಮುಗಿದು ಎರಡು ದಿನದ ನಂತರ ಸಂಪ್ರದಾಯದ ಹೆಸರಿನಲ್ಲಿ ಚಿನ್ನಾಭರಣ ಸಹಿತ ಯುವತಿಯೊಬ್ಬಳನ್ನೇ ವಾಪಸ್‌ ಕರೆದುಕೊಂಡು ಹೊರಟಿದ್ದಾಳೆ.

ಒಂದು ವಾರ ಕಳೆದರೂ ವಾಪಸ್‌ ಬಾರದ ಮಧುಮಗಳ ಬಗ್ಗೆ ಆತಂಕಗೊಂಡ ಪಾಲಾಕ್ಷ್ಯ ಹುಬ್ಬಳ್ಳಿಗೆ ಹೋಗಿ ವಿಚಾರಿಸಿದಾಗ ಸತ್ಯ ಬಯಲಾಗಿದೆ. ವಾಪಸ್‌ ಗುಬ್ಬಿಗೆ ಬಂದ ಪಾಲಕ್ಷ್ಯ ಮದುವೆ ಮಾಡಿಸಿದ ತಂಡದ ವಿರುದ್ಧ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಗುಬ್ಬಿ ಪೊಲೀಸರು ನಿರಂತರ ತನಿಖೆ ನಡೆಸಿ ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದ ನಾಲ್ವರು ಆರೋಪಿಗಳನ್ನು ಮಹಾರಾಷ್ಟ್ರ, ಹುಬ್ಬಳ್ಳಿ ಸೇರಿದಂತೆ ಹಲವೆಡೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮದುವೆ ಮಾಡಿ ವಂಚನೆ ಮಾಡುವುದನ್ನೇ ವೃತ್ತಿ ಮಾಡಿಕೊಂಡಿದ್ದ ತಂಡ, ನಕಲಿ ವಿಳಾಸದಲ್ಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿಕೊಳ್ಳುತ್ತಿದ್ದರು. ಆಧಾರ್ ಕಾರ್ಡ್ ತೋರಿಸಿ ಗಂಡಿನ‌ ಮನೆಯವರನ್ನು ನಂಬಿಸುತ್ತಿದ್ದರು. ನಾಲ್ವರಿಗೂ ಹೆಚ್ಚು ಜನರಿಗೆ ಮದುವೆ ಹೆಸರಿನಲ್ಲಿ ದೋಖಾ ಮಾಡಿದ್ದ ಗ್ಯಾಂಗ್‌ ಈಗ, ಕೊನೆಗೂ ಪೊಲೀಸರ ಬಲೆಗೆ ಬಿದ್ದಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪತಿ ಅಂತ್ಯಕ್ರಿಯಲ್ಲಿ ಪತ್ನಿ ಸಾವು; ಸಾವಿನಲ್ಲೂ ಒಂದಾದ ದಂಪತಿ

ಪತಿ ಅಂತ್ಯಕ್ರಿಯೆ ವೇಳೆ ಪತ್ನಿಯೂ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಹಾವೇರಿ ಜಿಲ್ಲೆಯ...

ತುಮಕೂರು ಡಿಸಿಸಿ ಬ್ಯಾಂಕ್ ಚುನಾವಣೆ : ಕೆ.ಎನ್ ರಾಜಣ್ಣ ಬೆಂಬಲಿಗರ ಭರ್ಜರಿ ಗೆಲುವು

ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನದ...

ಗದಗ | ಬೆಳೆ ಹಾನಿ ವೀಕ್ಷಣೆ: ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವ ಹೆಚ್. ಕೆ. ಪಾಟೀಲ 

ಹವಾಮಾನ ಬದಲಾವಣೆ ಮತ್ತು ನಿರಂತರ ಮಳೆಯ ಪರಿಣಾಮವಾಗಿ ರೈತರ ಜೀವನೋಪಾಯಕ್ಕೆ ತೀವ್ರ...

ವಿಜಯಪುರ | ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳ ಹಾವಳಿ: ರೈತರಿಗೆ ಅನ್ಯಾಯ

ವಿಜಯಪುರ ಜಿಲ್ಲೆಯ ಕೊರವಾರ ಗ್ರಾಮದಲ್ಲಿ ಫಸಲ್ ಭೀಮಾ ಯೋಜನೆಯಲ್ಲಿ ಮಧ್ಯವರ್ತಿಗಳಿಂದ ರೈತರಿಗೆ...

Download Eedina App Android / iOS

X