ಬೆಂ.ಗ್ರಾಮಾಂತರ | ಸ್ತ್ರೀ ಸ್ವಾವಲಂಬಿ ಜೀವನಕ್ಕೆ ಸ್ವ-ಸಹಾಯ ಸಂಘಗಳು ಸಹಕಾರಿ: ಜಿಲ್ಲಾಧಿಕಾರಿ ಡಾ ಎನ್ ಶಿವಶಂಕರ್

Date:

Advertisements

ಮಹಿಳಾ ಸಬಲೀಕರಣಕ್ಕಾಗಿ ಸ್ವ-ಸಹಾಯ ಗುಂಪುಗಳ ಮೂಲಕ ಸರ್ಕಾರವು ಸಾಲ-ಸೌಲಭ್ಯ ಕಲ್ಪಿಸುತ್ತಿದ್ದು, ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್‌ ಹೇಳಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಂಗಳವಾರ ಆಯೋಜಿಸಿದ್ದ ಸಂಜೀವಿನಿ ಡೇ.ಎನ್.ಎಲ್.ಆರ್.ಎಮ್ ಸ್ವಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡಿಸಿ
ಸ್ವಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಡಿಸಿ ಡಾ.ಎನ್.ಶಿವಶಂಕರ್ ಉದ್ಘಾಟಿಸಿದರು.

ಮಹಿಳೆಯರು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಾಡಲು ಮಾರುಕಟ್ಟೆ ಅವಶ್ಯಕತೆ ಇರುತ್ತದೆ. ಇದರ ಭಾಗವಾಗಿ ಸರ್ಕಾರವು ಕೂಡ ಬೆಂಬಲ ನೀಡಿ ಮೇಳಗಳನ್ನು ಆಯೋಜಿಸಿ ಮಹಿಳೆಯರು ತಯಾರಿಸಿದ ವಿವಿಧ ಬಗೆಯ ತಿಂಡಿ ತಿನಿಸುಗಳು, ಕರಕುಶಲ ವಸ್ತುಗಳು, ಸೀರೆ-ಬಟ್ಟೆ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮೇಳಗಳು ಅನುಕೂಲವಾಗಲಿವೆ ಎಂದರು.

Advertisements

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕೆ.ಎನ್ ಅನುರಾಧ ಮಾತನಾಡಿ, ಡಿ.ಎನ್.ಎಲ್.ಆರ್.ಎಮ್ ಯೋಜನೆಯಡಿ ಸೌಲಭ್ಯ ಪಡೆದುಕೊಂಡು ಮಹಿಳೆಯರು ಉದ್ಯಮರಂಗದಲ್ಲಿ ಅಭಿವೃದ್ಧಿ ಸಾಧಿಸಲು ಉತ್ತಮ ವೇದಿಕೆಯಾಗಿದೆ. ಈ ಮಾರಾಟ ಮೇಳವು ಆಗಸ್ಟ್ 14ರ ಸಂಜೆ 6 ಗಂಟೆಯವರೆಗೆ ಇರಲಿದ್ದು, ಸಾರ್ವಜನಿಕರು ಭಾಗವಹಿಸಿ ಉತ್ಪನ್ನಗಳನ್ನು ಖರೀದಿಸಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಯೋಜನಾಧಿಕಾರಿ ರಾಮಕೃಷ್ಣಯ್ಯ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸ್ವ-ಸಹಾಯ ಗುಂಪುಗಳ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X