ಮಂಡ್ಯ| ಸ್ತ್ರೀ ರಕ್ಷಣೆಗಾಗಿ ನಿರ್ಭಯ ಗಸ್ತು ವಾಹನ ; ಸಚಿವ ಚಲುವರಾಯಸ್ವಾಮಿ

Date:

Advertisements

ತುರ್ತು ಸಂದರ್ಭಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ನಿರ್ಭಯ ಗಸ್ತು ವಾಹನಗಳನ್ನು ವಿನ್ಯಾಸಗೊಳಿಸಲಾಗಿದ್ದು, ಜಿಲ್ಲೆಯಲ್ಲಿ 40 ನಿರ್ಭಯ ಗಸ್ತು ವಾಹನಗಳು ಕಾರ್ಯನಿರ್ವಹಿಸಲಿವೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.‌ ಚಲುವರಾಯಸ್ವಾಮಿ ಹೇಳಿದರು. ‌

ನಗರದ ಡಿಎಆರ್‌ ಮೈದಾನದಲ್ಲಿ ಮಂಗಳವಾರ ಜಿಲ್ಲಾ ಪೊಲೀಸ್‌ ಇಲಾಖೆ ಆಯೋಜಿಸಿದ್ದ ಮಾಂಡವ್ಯ ರಕ್ಷಣ ಪಡೆ, ನಿರ್ಭಯ ಗಸ್ತು ದ್ವಿಚಕ್ರ ವಾಹನಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ 40 ಗಸ್ತು ವಾಹನಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಗಸ್ತು ಪಡೆ೨

ಮಹಿಳೆಯರ ರಕ್ಷಣೆ, ಅಪರಾಧಗಳನ್ನು ತಡೆಯುವುದು ಹಾಗೂ ಕಾನೂನು ಸುವ್ಯವಸ್ಥೆಯನ್ನು ಹತೋಟಿಗೆ ತರುವುದು ಗಸ್ತು ವಾಹನಗಳ ಪ್ರಮುಖ ಉದ್ದೇಶವಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ನಡೆಯುವ ಅಪರಾಧವನ್ನು ತಡೆಯಲು, ತೊಂದರೆಗೆ ಒಳಗಾದ ಯಾವುದೇ ವ್ಯಕ್ತಿಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದಾಗ ಅವರನ್ನು ರಕ್ಷಣೆ ಮಾಡಲು ಈ ಬೈಕ್ ಸಹಕಾರಿಯಾಗಲಿದೆ ಎಂದು ತಿಳಿಸಿದರು.

Advertisements

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಮಾತನಾಡಿ, ಈ ಹಿಂದೆ ನಿರ್ಭಯ ಯೋಜನೆಯಡಿಯಲ್ಲಿ ನೀಡಲಾಗಿದ್ದ ಗಸ್ತು ವಾಹನಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆದ ಕಾರಣ ಎಲ್ಲಾ ಬೈಕುಗಳಿಗೆ ಹೊಸರೂಪ ಕೊಟ್ಟು, ಮಿನುಗು ದೀಪ, ಸೈರನ್, ಧ್ವನಿವರ್ಧಕಗಳನ್ನು ಅಳವಡಿಸಲಾಗಿದೆ. ತಲಾ 5 ಗಸ್ತು ವಾಹನಗಳು ಗುಂಪು ವ್ಯವಸ್ಥೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಸತತವಾಗಿ ಸಂಚರಿಸಲು ಉಪಯೋಗವಾಗುವ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ ಎಂದರು.

ಗಸ್ತು ಪಡೆ೧
ಮಹಿಳೆಯರ ರಕ್ಷಣೆಗಾಗಿ ನಿರ್ಭಯ ಗಸ್ತು ವಾಹನಗಳು

ಸಾರ್ವಜನಿಕರು ತಮ್ಮ ದೂರುಗಳಿದ್ದಲ್ಲಿ ಜಿಲ್ಲೆಯ ನಿಸ್ತಂತು ಕೇಂದ್ರದ ದೂ.ಸಂ: 08232-224888 ಅಥವಾ 112ಗೆ ಕರೆ ಮಾಡಿ ಮಾಹಿತಿ ನೀಡಿದಲ್ಲಿ, ಮಾಂಡವ್ಯ ರಕ್ಷಣೆಯ ವಾಹನ ಹಾಗೂ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ ನೆರವು ನೀಡಲಿದ್ದಾರೆ ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಆ.15ರಂದು ಸ್ವಯಂಪ್ರೇರಿತ ರಕ್ತದಾನ ಶಿಬಿರ

ಕಾರ್ಯಕ್ರಮದಲ್ಲಿ ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಶೇಕ್ ತನ್ವಿರ್ ಆಸೀಫ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X