ಉಡುಪಿ | ಎಂಪಿಎಂಸಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ: ವರ್ತಕರಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ

Date:

Advertisements

ವರ್ತಕರ ಶೆಡ್ ತೆರವು ಹಾಗೂ ಮೂಲಭೂತ ಸೌಕರ್ಯ ಗಳ ಕೊರತೆ ವಿರುದ್ಧ ಆದಿ ಉಡುಪಿಯಲ್ಲಿರುವ ಉಡುಪಿ ಎಪಿಎಂಸಿ ಪ್ರಾಂಗಣದಲ್ಲಿ ವರ್ತಕರು ಕಪ್ಪು ಬಾವುಟ ಪ್ರದರ್ಶಿಸಿ, ಪ್ರತಿಭಟನೆ ನಡೆಸಿದರು.

ಅಧಿಕಾರಿಗಳ ನಿರ್ಲಕ್ಷ್ಯವನ್ನು ವಿರೋಧಿಸಿ ಕಳೆದ 15 ದಿನಗಳಿಂದ ಇಲ್ಲಿನ ವರ್ತಕರು ತಮ್ಮ ಮಳಿಗೆಗಳಿಗೆ ಕಪ್ಪು. ಬಾವುಟ ಕಟ್ಟಿ ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಯಾವುದೇ ಅಧಿಕಾರಿಗಳು ಸ್ಪಂದಸದ ಹಿನ್ನೆಲೆಯಲ್ಲಿ ವರ್ತಕರು ಕಪ್ಪು ಬಾವುಟವನ್ನು ಪ್ರದರ್ಶಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಎಪಿಎಂಸಿ ಪ್ರಾಂಗಣದಲ್ಲಿ ಪ್ರತಿದಿನ ನೂರಾರು ಗ್ರಾಹಕರು ವಾಹನಗಳಲ್ಲಿ ಬರುತ್ತಾರೆ ಮತ್ತು ರೈತರ ತರಕಾರಿ ಹೊತ್ತ ವಾಹನಗಳು ಬರುತ್ತಿರುತ್ತದೆ. ಆದರೆ ಇಲ್ಲಿ ವಾಹನಗಳು ಓಡಾಟ ನಡೆಸಲು ಯೋಗ್ಯವಾದ ರಸ್ತೆ ಇಲ್ಲ. ಇಡೀ ರಸ್ತೆ ಹೊಂಡಮಯವಾಗಿದ್ದು, ಮಳೆಗಾಲದಲ್ಲಿ ಕೆಸರಿನಿಂದ ಕೂಡಿರುತ್ತದೆ ಎಂದು ಇಲ್ಲಿಯ ವರ್ತಕರು ಆರೋಪಿಸಿದ್ದಾರೆ.

Advertisements
IMG 20240814 WA0392

‘ಪ್ರತಿದಿನ ಇಲ್ಲಿ ಕಸದ ರಾಶಿಯೇ ಸಂಗ್ರಹವಾಗುತ್ತದೆ. ಆದರೆ ವಾರದಲ್ಲಿ ಎರಡು ಮೂರು ದಿನಗಳಿಗೊಮ್ಮೆ ಮಾತ್ರ ಕಸವನ್ನು ವಿಲೇವಾರಿ ಮಾಡಲಾಗುತ್ತಿದೆ. ಇದರಿಂದ ಇಡೀ ಪ್ರಾಂಗಣ ಕಸದಿಂದ ತುಂಬಿ ಹೋಗಿದ್ದು, ರೋಗಗಳ ಉಗಮ ಸ್ಥಾನವಾಗಿದೆ. ಅಲ್ಲದೇ ಇಲ್ಲಿರುವ ಶೌಚಾಲಯಕ್ಕೆ ನಿರ್ವಹಣೆಗಾಗಿ ಪ್ರತಿಯೊಬ್ಬರಿಂದ 5 ರೂ. ಸಂಗ್ರಹಿಸಲಾಗುತ್ತದೆ. ಆದರೆ ಈ ಶೌಚಾಲಯದಲ್ಲಿ ನೀರಿನಲ್ಲಿ ವ್ಯವಸ್ಥೆ ಮಾತ್ರವಲ್ಲ ಬಾಗಿಲೇ ಇಲ್ಲ. ಇದರಿಂದ ವರ್ತಕರು ದೂರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯಕ್ಕೆ ಹೋಗುವಂತಾಗಿದೆ. ಅದೇ ರೀತಿ ಇಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಕೂಡ ಇಲ್ಲ’ ದೂರಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

Download Eedina App Android / iOS

X