ಮಾಜಿ ಶಾಸಕಿ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಿಸಲಾಗಿದೆ.
ಸೌಮ್ಯ ರೆಡ್ಡಿ ಅವರ ನೇಮಕದ ಪ್ರಸ್ತಾವಕ್ಕೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದನೆ ನೀಡಿರುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿಕೆ ಮೂಲಕ ತಿಳಿಸಿದ್ದಾರೆ.
ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವಧಿ ಲೋಕಸಭೆ ಚುನಾವಣೆಗೂ ಮುನ್ನವೇ ಮುಗಿದಿದ್ದು ಈಗ ಈ ಸ್ಥಾನಕ್ಕೆ ಸೌಮ್ಯ ರೆಡ್ಡಿ ಅವರನ್ನು ನೇಮಿಸಲಾಗಿದೆ. ಪುಷ್ಪಾ ಅಮರನಾಥ್ ಸದ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ರಾಜ್ಯಮಟ್ಟದ ಸಮಿತಿಯ ಉಪಾಧ್ಯಕ್ಷೆಯಾಗಿದ್ದಾರೆ.
ಜಯನಗರ ಕ್ಷೇತ್ರದಲ್ಲಿ 2018ರ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ ಸೌಮ್ಯ ರೆಡ್ಡಿ, 2023ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿ ಸೂರ್ಯ ವಿರುದ್ಧ ಪರಾಭವಗೊಂಡಿದ್ದರು.
ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕಗೊಂಡಿರುವ ಶ್ರೀಮತಿ ಸೌಮ್ಯಾ ರೆಡ್ಡಿ ಅವರಿಗೆ ಅಭಿನಂದನೆಗಳು.@Sowmyareddyr pic.twitter.com/9dcMt7kcSm
— Nayana Jhawar /Nayana Motamma (@NayanaJhawar) August 14, 2024