ಗ್ಯಾರಂಟಿ ಯೋಜನೆ ನಮ್ಮ ಕಮಿಟ್‌ಮೆಂಟ್, ಅದು ನಮ್ಮ ಬದ್ದತೆ. ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಇರುತ್ತದೆ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.
ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, “ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿ ಕಾರ್ಯಗಳನ್ನೂ ಮಾಡಬಹುದಾಗಿದೆ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ತಜ್ಞರು, 15 ಬಜೆಟ್ ಮಂಡನೆ ಮಾಡಿದ್ದಾರೆ. ಹೀಗಾಗಿ ಗ್ಯಾರಂಟಿ ಯೋಜನೆ ಬಗ್ಗೆ ಯಾರಿಗೂ ಸಂಶಯ ಬೇಡ” ಎಂದರು.
ಈ ಸುದ್ದಿ ಓದಿದ್ದೀರಾ? ಧಾರವಾಡ | ಮೂರು ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿಯ ಅಸ್ಥಿಪಂಜರ ಮನೆಯಲ್ಲೇ ಪತ್ತೆ!
“ಸತೀಶ್ ಜಾರಕಿಹೊಳಿ ಹೇಳಿದ್ದರ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ನಮಗೆ ಬಹಳ ಒತ್ತಡವಿದೆ. ರಾಜ್ಯದಲ್ಲಿ ಅತಿಹೆಚ್ಚು ಅಂದರೆ ಶೇ.82 ಎಲ್ಲರಿಗೂ ಬಿಪಿಎಲ್ ಕಾರ್ಡ್‌ಗಳಿವೆ. ಅನವಶ್ಯಕವಾಗಿ ಶ್ರೀಮಂತರಿಗೆ ಬಿಪಿಎಲ್ ಯಾಕೆ ಎಂಬ ಚಿಂತನೆ ನಡೆಯುತ್ತಿದೆ. ಈ ಬಗ್ಗೆ ಸಮಗ್ರವಾಗಿ ಸಮೀಕ್ಷೆ ಆಗಬೇಕಾಗಿದೆ. ಸರ್ಕಾರ ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದು ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.