ಜಮ್ಮು ಕಾಶ್ಮೀರ | ಎನ್‌ಕೌಂಟರ್‌ನಲ್ಲಿ ಸೇನಾ ಅಧಿಕಾರಿ ಹುತಾತ್ಮ, ಮುಂದುವರಿದ ಕಾರ್ಯಾಚರಣೆ

Date:

Advertisements

ಜಮ್ಮು ಕಾಶ್ಮೀರದ ಪಟ್ನಿಟಾಪ್‌ನ ಅಸ್ಸಾರ್ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದ್ದು ಸೇನಾ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಶೋಧ ಕಾರ್ಯಾಚರಣೆಯ ಸಮಯದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಧಿಕಾರಿ ಸಾವನ್ನಪ್ಪಿದ್ದಾರೆ ಎಂದು ಸೇನೆ ಹೇಳಿದೆ.

“ಭಾರೀ ಗುಂಡಿನ ಚಕಮಕಿಯ ನಡುವೆ ಭಯೋತ್ಪಾದಕರ ಹುಡುಕಾಟ ಮುಂದುವರೆದಿದೆ. ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗ ಒಬ್ಬ ಅಧಿಕಾರಿ ಗಾಯಗೊಂಡಿದ್ದಾರೆ. ಕಾರ್ಯಾಚರಣೆಗಳು ಮುಂದುವರಿದಂತೆ ಯುದ್ಧ ಸಾಮಾಗ್ರಿಗಳು ನಮಗೆ ಲಭ್ಯವಾಗಿದೆ” ಎಂದು ಸೇನೆಯ ವೈಟ್ ನೈಟ್ ಕಾರ್ಪ್ಸ್ ತಮ್ಮ ಅಧಿಕೃತ ಎಕ್ಸ್-ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದೆ.

Advertisements

ಗಾಯಗೊಂಡ ಅಧಿಕಾರಿಯನ್ನು ಕ್ಯಾಪ್ಟನ್ ದೀಪಕ್ ಎಂದು ಗುರುತಿಸಲಾಗಿದೆ. ಆದರೆ, ಕಾರ್ಯಾಚರಣೆ ನಡೆಯುತ್ತಿರುವಾಗಲೇ ಕ್ಯಾಪ್ಟನ್ ಸಾವನ್ನಪ್ಪಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತೆಲಂಗಾಣ | ಅಂತರ್ಜಾತಿ ವಿವಾಹದ ಕಾರಣಕ್ಕೆ ಸಾಮಾಜಿಕ ಬಹಿಷ್ಕಾರ

ಅಂತರ್ಜಾತಿ ವಿವಾಹವಾದ ಕಾರಣಕ್ಕಾಗಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ತೆಲಂಗಾಣದ...

ಜಮ್ಮು ಕಾಶ್ಮೀರ ಮೇಘಸ್ಫೋಟ: ಹತ್ತನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಇನ್ನೂ 36 ಮಂದಿ ನಾಪತ್ತೆ

ಜಮ್ಮು ಕಾಶ್ಮೀರ ಮೇಘಸ್ಫೋಟ ದುರಂತದಲ್ಲಿ ಕನಿಷ್ಠ 68 ಮಂದಿ ಸಾವನ್ನಪ್ಪಿ 36...

ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿ, ಎಫ್‌ಐಆರ್ ದಾಖಲು

ಸುಮಾರು ಎರಡು ಸಾವಿರ ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ...

Download Eedina App Android / iOS

X