ಬೆಳಗಾವಿ | ಲಾಡ್ಜ್‌ನಲ್ಲಿ ಕುಕ್ಕರ್ ಸ್ಫೋಟ; ದೇವಿ ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ಗಾಯ

Date:

Advertisements

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದ ಯಲ್ಲಮ್ಮ ದೇವಸ್ಥಾನದಿಂದ ಅನತಿ ದೂರದಲ್ಲಿರುವ ಲಾಡ್ಜ್‌ನಲ್ಲಿ ಕುಕ್ಕರ್ ಹಾಗೂ ಅಡುಗೆ ಅನಿಲದ ಸಿಲಿಂಡ‌ರ್ ಸ್ಪೋಟಗೊಂಡ ಪರಿಣಾಮ ಯಲ್ಲಮ್ಮನ ದರ್ಶನಕ್ಕೆ ಬಂದಿದ್ದ ಭಕ್ತರು ಗಾಯಗೊಂಡ ಘಟನೆ ನಡೆದಿದೆ.

ಬೆಂಗಳೂರು ಮತ್ತು ಯಾದಗಿರಿ ಮೂಲದ ಭಕ್ತರು ಲಾಡ್ಜ್‌ನಲ್ಲಿ ಕೋಣೆ ಪಡೆದು ಅಡುಗೆ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಕುಕ್ಕರಿನಲ್ಲಿ ನೀರು ಹಾಕದೆ ಇದ್ದುದರಿಂದ ಈ ಘಟನೆ ನಡೆದಿದೆ.

ಕುಕ್ಕ‌ರ್ ಸಿಡಿದು ಸಿಲಿಂಡರ್‌ ಹಾಗೂ ಒಲೆ ಮೇಲೆ ಬಿದ್ದು ನಂತರ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ದೊಡ್ಡ ಪ್ರಮಾಣದ ಬೆಂಕಿ ಹೊತ್ತಿಕೊಂಡಿತು. ಕೋಣೆಯಲ್ಲಿದ್ದ ಪ್ಲಾಸ್ಟಿಕ್ ವಸ್ತುಗಳು, ಬಟ್ಟೆ, ಆಹಾರ ಸಾಮಗ್ರಿಗಳಿಂದಾಗಿ ಬೆಂಕಿ ಜ್ವಾಲೆ ಹೆಚ್ಚಾದಾಗ ಅಗ್ನಿಶಾಮಕದಳ ಸಿಬ್ಬಂದಿ ಸರಿಯಾದ ಸಮಯಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.

Advertisements

ಲಾಡ್ಜ್‌ನಲ್ಲಿದ್ದ 8 ಭಕ್ತರು ಹಾಗೂ ಲಾಡ್ಜ್ ಕೆಲಸಗಾರರು ಸೇರಿ 15 ಮಂದಿ ಗಾಯಗೊಂಡಿರವುದಾಗಿ ವರದಿಯಾಗಿದೆ.

ಬೆಂಗಳೂರಿನ ವೆಂಕಟೇಶ ಕೃಷ್ಣಪ್ಪ (53), ರಾಮಸ್ವಾಮಿ ಚಿಕ್ಕಪುಳ್ಳಪ್ಪ (42), ರತ್ನಮ್ಮ ಗೋವಿಂದಪ್ಪ (48), ಗಣೇಶ ರಮೇಶಪ್ಪ ಕರೂರ (30), ಗದಗ ಜಿಲ್ಲೆಯ ಪ್ರಸಾದ ಜಾಧವ (34) ಮತ್ತು ಯಾದಗಿರಿ ಜಿಲ್ಲೆಯ ಬಸಮ್ಮ ಬಿರಾದಾರ (56), ಸುಮಿತ್ರಾ ಯಕ್ಕಹಳ್ಳಿ (42) ಹಾಗೂ ಸಿದ್ದಮ್ಮ ಶೆಟಗೇರಿ ಅವರು ಗಾಯಗೊಂಡಿದ್ದು, ಎಲ್ಲರನ್ನೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾಡ್ಜ್‌ನ 7 ಕೆಲಸಗಾರರು ಸವದತ್ತಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

WhatsApp Image 2024 08 13 at 7.24.31 PM
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಬೆಳಗಾವಿ : ಜಿಲ್ಲೆಯಲ್ಲಿ ಮೋಡ ಕವಿದ ಹವಾಮಾನ – ಅಲ್ಪ ಮಳೆಯ ಸಾಧ್ಯತೆ

ಬೆಳಗಾವಿ ಜಿಲ್ಲೆಯಲ್ಲಿ ತಾಪಮಾನ 20 ರಿಂದ 25 ಡಿಗ್ರಿ ಸೆಲ್ಸಿಯಸ್ ದಾಖಲಾಗುವ...

Download Eedina App Android / iOS

X