ಮಂಕಿಪಾಕ್ಸ್​ ಉಲ್ಬಣ; ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದ WHO

Date:

Advertisements

ಆಫ್ರಿಕಾದ ಕಾಂಗೋ ಸೇರಿದಂತೆ 13 ದೇಶಗಳಲ್ಲಿ ಮಂಕಿಪಾಕ್ಸ್​ ಕಾಯಿಲೆ ವೇಗವಾಗಿ ಹರಡುತ್ತಿರುವ ಕಾರಣ ವಿಶ್ವ ಆರೋಗ್ಯ ಸಂಸ್ಥೆ ಮೂರು ವರ್ಷಗಳಲ್ಲಿ ಎರಡನೇ ಬಾರಿಗೆ ಜಾಗತಿಕ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ.

ಮಂಕಿಪಾಕ್ಸ್‌ನಿಂದಾಗಿ 500ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, ವೈರಸ್​ ಹರಡುವುದನ್ನು ತಡೆಯಲು ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಸಹಾಯಕ್ಕಾಗಿ ಕರೆ ನೀಡಿದೆ.

ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಮಹಾನಿರ್ದೇಶಕ ಟೆಡ್ರೋಸ್​ ಅಧಾನೊಮ್​ ಘೆಬ್ರೆಯೆಸಸ್​ ಮಂಕಿಪಾಕ್ಸ್‌​ ಹೆಚ್ಚಳದ ಕುರಿತು ಮಾಹಿತಿ ನೀಡಿದರು.

Advertisements

ಇದನ್ನು ಓದಿದ್ದೀರಾ? ವಿಶ್ವಸಂಸ್ಥೆ ನಮಗೆ ಪಾಠ ಹೇಳುವ ಅಗತ್ಯವಿಲ್ಲ: ವಿದೇಶಾಂಗ ಸಚಿವ ಜೈಶಂಕರ್

“ಕಾಂಗೋ ಮತ್ತು ಆಫ್ರಿಕಾದ ಇತರ ದೇಶಗಳಲ್ಲಿ ಮಂಕಿಪಾಕ್ಸ್‌ನ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ತುರ್ತು ಸಭೆಯನ್ನು ಕರೆದು ಈಗ ಅಂತಾರಾಷ್ಟ್ರೀಯ ಕಾಳಜಿಯ ದೃಷ್ಟಿಯಿಂದ ಸಾರ್ವಜನಿಕ ಆರೋಗ್ಯ ತುರ್ತುಪರಿಸ್ಥಿತಿ ಘೋಷಿಸುವ ಅನಿವಾರ್ಯತೆ ಉಂಟಾಗಿದೆ ಎಂದು ಸಮಿತಿ ನನಗೆ ಸಲಹೆ ನೀಡಿದೆ. ಆ ಸಲಹೆ ಸ್ವೀಕರಿಸಿದ್ದೇನೆ” ಎಂದು ತಿಳಿಸಿದರು.

ಏನಿದು ಮಂಕಿಪಾಕ್ಸ್, ಲಕ್ಷಣಗಳೇನು?

ಮಂಕಿಪಾಕ್ಸ್ ಕೂಡಾ ಸಿಡುಬಿನ ಒಂದು ಪ್ರಭೇಡವಾಗಿದೆ. ಸಾಮಾನ್ಯ ಸಿಡುಬುಗಳಲ್ಲಿ ಬರುವಂತೆ ಇದರಲ್ಲಿಯೂ ಜ್ವರ, ತಲೆನೋವು, ಮೈ-ಕೈ ನೋವು, ಬೆನ್ನು ನೋವು, ಸುಸ್ತು ಕಾಣಿಸಿಕೊಳ್ಳುತ್ತದೆ. ಚರ್ಮ ಕೆಂಪಾಗಿ ಬೊಕ್ಕೆಗಳು ಶರೀರದ ಎಲ್ಲೆಡೆ ಕಾಣಿಸಿಕೊಳ್ಳುತ್ತದೆ. ಇದು ಸಾಮಾನ್ಯವಾಗಿ ಎರಡರಿಂದ ನಾಲ್ಕು ವಾರಗಳಲ್ಲಿ ಚಿಕಿತ್ಸೆ ಇಲ್ಲದಿದ್ದರೂ ಕಡಿಮೆಯಾಗುತ್ತದೆ. ಆದರೆ ಕ್ಯಾನ್ಸರ್, ಮಧುಮೇಹ ಇರುವವರು, ನವಜಾತ ಶಿಶುಗಳಿಗೆ ಮಂಕಿಪಾಕ್ಸ್ ಪ್ರಾಣಕ್ಕೆ ಕುತ್ತಾಗಬಹುದು.

ಮಂಕಿಪಾಕ್ಸ್
?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X